ಲೋಕಸಭಾ ಚುನಾವಣೆ ಘೋಷಣೆ : ಯಾರು, ಏನು ಹೇಳಿದರು?

Recommended Video

      Lok Sabha Elections 2019 : ಲೋಕಸಭಾ ಚುನಾವಣೆ ಬಗ್ಗೆ ರಾಜಕೀಯ ನಾಯಕರ ಪ್ರತಿಕ್ರಿಯೆ | Oneindia Kannada

      ಬೆಂಗಳೂರು, ಮಾರ್ಚ್ 10 : ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಭಾನುವಾರ ಘೋಷಣೆ ಮಾಡಿದೆ. ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

      ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ಚುನಾವಣಾ ವೇಳಾಪಟ್ಟಿ ಪ್ರಕಟಿಸಿದರು. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

      ದೇಶದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ದಿನಾಂಕ ಘೋಷಣೆಗಾಗಿ ಕಾಯುತ್ತಿದ್ದವು. ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದು ವಿವಿಧ ಪಕ್ಷಗಳು ಘೋಷಣೆ ಮಾಡಿವೆ. ಈ ಬಾರಿಯ ಚುನಾವಣೆ ಹಲವು ಕಾರಣಗಳಿಗಾಗಿ ಕುತೂಹಲಕ್ಕೆ ಕಾರಣವಾಗಿದೆ.

      'ದೇಶ ಮತ್ತೊಂದು ಚುನಾವಣೆಗೆ ಸಜ್ಜಾಗಿದೆ. ಪ್ರಜಾತಂತ್ರದ ಈ ಸಮರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸ್ವತಂತ್ರ, ನಿಷ್ಪಕ್ಷಪಾತವಾಗಿ ನಡೆಯುವುದು ಎಂದು ಆಶಿಸುತ್ತೇನೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

      ತೀರ್ಪನ್ನು ಗೌರವಿಸೋಣ

      'ಎಲ್ಲಾ ಪಕ್ಷಗಳು, ಅಭ್ಯರ್ಥಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮತದಾರರ ತೀರ್ಪನ್ನು ಗೌರವಿಸೋಣ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

      ಘೋಷಣೆಯನ್ನು ಸ್ವಾಗತಿಸುತ್ತೇವೆ

      'ಕಾಂಗ್ರೆಸ್ಸಿನ ಕಾರ್ಯಕರ್ತರು, ನಾಯಕರು ಚುನಾವಣೆಗೆ ಸಂಪೂರ್ಣ ಸನ್ನದ್ಧರಾಗಿದ್ದು, ಚುನಾವಣಾ ದಿನಾಂಕ ಘೋಷಣೆಯನ್ನು ಸ್ವಾಗತಿಸುತ್ತೇವೆ' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್‌ ಮಾಡಿದೆ.

      ಸರ್ಕಾರವನ್ನು ಬದಲಾಯಿಸುವ ಸಮಯ ಬಂದಿದೆ

      'ಲೋಕ ಸಭಾ ಚುನಾವಣೆ ಘೋಷಣೆ ಆಗಿದೆ. 5 ವರುಷ ಯಾವ ಭರವಸೆಯನ್ನು ಈಡೇರಿಸದೆ ಸುಳ್ಳು ಕಲ್ಪನೆಯನ್ನು ತೋರಿಸಿದ ಮೋದಿ ಸರ್ಕಾರವನ್ನು ಬದಲಾಯಿಸುವ ಸಮಯ ಹತ್ತಿರ ಬಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

      Array

      ಮತ್ತೊಮ್ಮೆ ಮೋದಿ

      ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

      ಕಾಂಗ್ರೆಸ್‌ ಮುಕ್ತ ಭಾರತ

      ಭಾರತವನ್ನು ಕಾಂಗ್ರೆಸ್‌ ಮುಕ್ತ ಮಾಡಲು ದಿನಾಂಕ ಘೋಷಣೆಯಾಗಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+