Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು
ನವದೆಹಲಿ, ಮಾರ್ಚ್ 17: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ರಾಜಕೀಯ ಪಕ್ಷಗಳು ತಮ್ಮ ಪ್ರಚಾರವನ್ನು ಮತ್ತಷ್ಟು ಹೆಚ್ಚಿಸುತ್ತಿವೆ. ಈ ಬಾರಿ ಎಲ್ಲರಿಗೂ ಗ್ಯಾರೆಂಟಿಗಳ ಮೇಲೆ ಕಣ್ಣಿದೆ. ಅದರ ಜೊತೆಗೆ ಹಲವು ವಿಷಯಗಳು ಚರ್ಚೆಯ ಕೇಂದ್ರವಾಗುತ್ತಿವೆ. ರಾಮಮಂದಿರ, ಸಿಎಎ, ಕಾಂಗ್ರೆಸ್ ಗ್ಯಾರೆಂಟಿ ಸೇರಿದಂತೆ ಚುನಾವಣೆಯಲ್ಲಿ ಪ್ರಭಾವ ಬೀರಲಿರುವ ಅಂತಹ ಪ್ರಮುಖ ಅಂಶಗಳ ಮಾಹಿತಿ ಇಲ್ಲಿದೆ.
ಕಾಂಗ್ರೆಸ್‌ನ ನ್ಯಾಯ್ ಗ್ಯಾರಂಟಿ
ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು ಸಕತ್ ಕಮಾಲ್ ಮಾಡಿರುವುದು ಗೊತ್ತೆ ಇದೆ. ಇದರ ಬೆನ್ನಲ್ಲೆ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ, ಯುವಕರು, ರೈತರು, ಮಹಿಳೆಯರು, ಕಾರ್ಮಿಕರಿಗೆ ನ್ಯಾಯವನ್ನು ಖಾತ್ರಿಪಡಿಸುವ ಉದ್ದೇಶದಿಂದ ಪಕ್ಷವು ತನ್ನ 5 'ನ್ಯಾಯ್' ಗ್ಯಾರಂಟಿಗಳನ್ನು ಮುಂದಿಟ್ಟಿದೆ.

ಮಣಿಪುರದಿಂದ ಮುಂಬೈಗೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ 'ನ್ಯಾಯ್' ಖಾತರಿಗಳನ್ನು ಜನರ ಮುಂದೆ ಪ್ರಸ್ತುತಪಡಿಸಲಾಗಿದೆ. ಕಾಂಗ್ರೆಸ್‌ನ ಪ್ರಣಾಳಿಕೆಯು ಈ ಗ್ಯಾರಂಟಿಗಳ ಸುತ್ತ ರಚನೆಯಾಗುವ ಸಾಧ್ಯತೆಯಿದೆ. ಇದು ಪಕ್ಷ ಮತ್ತೆ ಪುಟಿದೇಳಲು ಕಾರಣವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
'ಮೋದಿ ಕಿ ಗ್ಯಾರಂಟಿ'
ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುತ್ತಾರೆ ಎಂಬ ವಿಶ್ವಾಸದಿಂದ ಇದ್ದು, ತಮ್ಮ ಪ್ರಚಾರದ ಮುಖ್ಯ ವಿಷಯವಾಗಿ 'ಮೋದಿ ಕಿ ಗ್ಯಾರಂಟಿ' ಎಂಬುದನ್ನು ಒತ್ತಿ ಹೇಳುತ್ತಿದ್ದಾರೆ. ಪ್ರಧಾನಮಂತ್ರಿಯವರ ವೆಬ್‌ಸೈಟ್‌ನಲ್ಲಿ ವಿವರಿಸಿರುವಂತೆ 'ಮೋದಿ ಕಿ ಗ್ಯಾರಂಟಿ' ಯುವಕರ ಅಭಿವೃದ್ಧಿ, ಮಹಿಳೆಯರ ಸಬಲೀಕರಣ, ರೈತರ ಕಲ್ಯಾಣ ಮತ್ತು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿರುವ ಅಂಚಿನಲ್ಲಿರುವ ಮತ್ತು ದುರ್ಬಲರಾಗಿರುವ ಎಲ್ಲ ಜನರಿಗೆ ಗ್ಯಾರೆಂಟಿಯಾಗಿದೆ.
ನಿರುದ್ಯೋಗ ಮತ್ತು ಬೆಲೆ ಏರಿಕೆ
ಕಾಂಗ್ರೆಸ್ ಸೇರಿದಂತೆ ಇಂಡಿಯಾ ಬಣವು ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಸಮಸ್ಯೆಯನ್ನು ಎತ್ತುತ್ತಿದೆ. ಉದ್ಯೋಗಗಳ ಕೊರತೆಯೇದೇಶದ ದೊಡ್ಡ ಸಮಸ್ಯೆ ಎಂದು ಅವರು ಪದೇ ಪದೇ ಹೇಳುತ್ತಿದ್ದಾರೆ. ಈ ವಿಷಯದ ಬಗ್ಗೆ ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದಾರೆ.
ಚುನಾವಣಾ ಬಾಂಡ್‌ಗಳ ಡೇಟಾ
ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಾರ್ವಜನಿಕಗೊಳಿಸಿದೆ. ಆಡಳಿತಾರೂಢ ಬಿಜೆಪಿ ವಿರುದ್ಧ ಸುಪ್ರೀಂ ಕೋರ್ಟ್‌ನಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಎಲೆಕ್ಟೋರಲ್ ಬಾಂಡ್‌ಗಳ ಯೋಜನೆಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಅದರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಚುನಾವಣೆಗೂ ಮುನ್ನವೇ ಈ ವಿಚಾರ ಮುನ್ನೆಲೆಗೆ ಬಂದಿದ್ದು, ವಿಪಕ್ಷಗಳು ಅದನ್ನು ಸರಿಯಾಗಿಯೇ ಬಳಸಿಕೊಂಡಿವೆ. ಆದರೆ ಇದು ತಳಮಟ್ಟದಲ್ಲಿ ಕೆಲಸ ಮಾಡುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ. ಆದರೆ, ಪ್ರಚಾರದ ಸಮಯದಲ್ಲಿ ಇದು ಸಕತ್ ಚರ್ಚೆಯಾಗಲಿದೆ.
ಸಿಎಎ, ಆರ್ಟಿಕಲ್ 370 ರ ರದ್ದತಿ
ಸಿಎಎ, ಆರ್ಟಿಕಲ್ 370 ರ ರದ್ದತಿ ಜನರಿಗೆ ಬಿಜೆಪಿ ನೀಡಿರುವ ದೀರ್ಘಾವಧಿಯ ಭರವಸೆಗಳು. 2019 ರ ಪೌರತ್ವ (ತಿದ್ದುಪಡಿ) ಕಾಯಿದೆಯ ಅನುಷ್ಠಾನ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯನ್ನು ರದ್ದುಗೊಳಿಸುವ ತನ್ನ ಸಾಧನೆಯನ್ನು ಬಿಜೆಪಿ ಹೊಂದಿದೆ ಮತ್ತು ಅದನ್ನು ಮುಂದುವರಿಸುತ್ತಿದೆ.

ರಾಮಮಂದಿರ
ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆದ ಮಹಾಮಸ್ತಕಾಭಿಷೇಕ ಸಮಾರಂಭವನ್ನು ಬಿಜೆಪಿಯು ಪ್ರಚಂಡ ಉತ್ಸಾಹದಿಂದ ಮಾಡಿದೆ. ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾರಂಭದಲ್ಲಿ ಮುಂಚೂಣಿಯಲ್ಲಿದ್ದರು. ಹಲವು ಜನರ ಶತಮಾನಗಳ ಕನಸನ್ನು ನನಸು ಮಾಡಿದ ಕೀರ್ತಿ ಬಿಜೆಪಿ ನಾಯಕರಿಗೆ ಸಲ್ಲುತ್ತದೆ.
'ಅಮೃತ್ ಕಾಲ್' ವರ್ಸಸ್ 'ಅನ್ಯಾಯ್ ಕಾಲ್'
ಚುನಾವಣಾ ಸಮಯದಲ್ಲಿ ಪುನರಾವರ್ತಿತ ಪ್ರಚಾರದ ಮತ್ತೊಂದು ವಿಷಯವೆಂದರೆ ಮೋದಿ ಆಡಳಿತವು ಉತ್ತಮ ಆಡಳಿತ, ವೇಗದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಭರವಸೆ ನೀಡಿದೆ ಎಂದು ಬಿಜೆಪಿಯ ಸಮರ್ಥನೆಯಾಗಿದೆ.
ಮತ್ತೊಂದೆಡೆ ಕಾಂಗ್ರೆಸ್ ಮೋದಿ ಸರ್ಕಾರದ 10 ವರ್ಷಗಳನ್ನು 'ಅನ್ಯಾಯ ಕಾಲ' (ಅನ್ಯಾಯದ ಯುಗ) ಎಂದು ಕರೆದಿದೆ. ಇದು ನಿರುದ್ಯೋಗ, ಬೆಲೆ ಏರಿಕೆ, ತನಿಖಾ ಸಂಸ್ಥೆಗಳ ವಶ, ಸಂವಿಧಾನದ ಮೇಲಿನ ದಾಳಿ ಮತ್ತು ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಗಳಿಂದ ಕೂಡಿದೆ ಎಂದು ಆರೋಪಿಸಿದೆ.
ರೈತರ ಸಮಸ್ಯೆಗಳು, ಕನಿಷ್ಠ ಬೆಂಬಲ ಬೆಲೆ
ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ದೆಹಲಿಯ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಇದು ಸರ್ಕಾರದಿಂದ ರೈತರಿಗೆ ಆದ "ದ್ರೋಹ" ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರಚಾರ ಆರಂಭಿಸಿವೆ. ಇದಲ್ಲದೆ ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ನೀಡುವುದಾಗಿ ಭರವಸೆ ನೀಡಿದೆ. .
'ವೀಕ್ಷಿತ್ ಭಾರತ್' ವಿಷನ್
ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವುದೇ ದೇಶದ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಮ್ಮ ಸರ್ಕಾರದ ಕಾರ್ಯಗಳು 2047 ರ ವೇಳೆಗೆ ಈ ಗುರಿಯನ್ನು ಸಾಧಿಸಲು ಬದ್ಧವಾಗಿವೆ ಎಂದಿದ್ದಾರೆ. ವಿಕ್ಷಿತ್ ಭಾರತ್‌ನ ದೃಷ್ಟಿಕೋನವು ಬಿಜೆಪಿಯ ಪ್ರಚಾರದಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿದೆ. ಆದರೆ ಪ್ರತಿಪಕ್ಷಗಳು ಇದನ್ನು "ಮತ್ತೊಂದು ಜುಮ್ಲಾ" ಎಂದು ಕರೆಯುತ್ತಿವೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ










Click it and Unblock the Notifications