Lok Sabha Election 2024: ಬಿಜೆಪಿ ಟಿಕೆಟ್ ಸಭೆ- ಎಚ್‌ಡಿಕೆ ದಿಲ್ಲಿಗೆ

ದೆಹಲಿ ಮಾರ್ಚ್ 12: ಲೋಕಸಭಾ ಚುನಾವಣೆಗೆ ಬಿಜೆಪಿ ಸೀಟು ಹಂಚಿಕೆ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಈಗಾಗಲೇ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈಗ ಎರಡನೇ ಪಟ್ಟಿ ತಯಾರಿ ನಡೆದಿದೆ. ಈ ಪಟ್ಟಿ ಇಂದು ಅಥವಾ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೈತ್ರಿ ಪಕ್ಷದ ನಾಯಕರು ದೆಹಲಿ ಚಲೋ ಆರಂಭಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ವರಿಷ್ಠರ ಜೊತೆಗ ಸಮಾಲೋಚನೆ ನಡೆಸುವ ಸಂಬಂಧ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಅಥವಾ ಬುಧವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ನಾಯಕರ ಜೊತೆ ಹೈಕಮಾಂಡ್‌ ಚರ್ಚೆ ನಡೆಸಿದೆ.

Lok Sabha Election 2024 BJP ticket meeting- HDK is likely to go to Delhi today tomorrow

ಈ ಕುರಿತು ಅಂತಿಮವಾಗಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿ ತೀರ್ಮಾ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ಮಂಗಳವಾರ ದೆಹಲಿಗೆ ತೆರಳುವ ನಿರೀಕ್ಷೆ ಇತ್ತು. ಆದರೆ ಸಿಎಎ ಜಾರಿ ಹಿನ್ನೆಲೆಯಲ್ಲಿ ಕೇಂದ್ರ ವರಿಷ್ಠರು ಕಾರ್ಯದ ಒತ್ತಡದಲ್ಲಿರುವ ಕಾರಣ ಮಂಗಳವಾರದ ಬದಲು ಬುಧವಾರ ದೆಹಲಿಗೆ ತೆರಳುವ ಸಂಭವಿದೆ ಎಂದು ಮೂಲಗಳು ತಿಳಿಸಿವೆ.

ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕದ 28 ಲೋಕಸಭಾ ಕ್ಚೇತ್ರಗಳ ಅಭ್ಯರ್ಥಿಗಳನ್ನು ಒಳಗೊಂಡಂತೆ ಬಿಜೆಪಿಯ ಎರಡನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ಸೋಮವಾರ ರಾತ್ರಿ ದೆಹಲಿಯಲ್ಲಿ ಕಸರತ್ತು ನಡೆದಿದೆ.

Lok Sabha Election 2024 BJP ticket meeting- HDK is likely to go to Delhi today tomorrow

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಒಳಗೊಂಡ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಬಿರುಸಿನ ಚರ್ಚೆ ನಡೆದಿದ್ದು, ಮಂಗಳವಾರ ಅಥವಾ ಬುಧವಾರ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಎರಡು ಹಂತಗಳಲ್ಲಿ ಪ್ರಕಟಗೊಳ್ಳಲಿದ್ದು, ಹೆಚ್ಚು ಗೊಂದಲಗಳಿಲ್ಲದ ಸುಮಾರು 15ರಿಂದ 20 ಕ್ಷೇತ್ರಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸುವ ಸಂಭವವಿದೆ. ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ ಹಲವು ಕ್ಷೇತ್ರಗಳ ಬಗ್ಗೆ ಒಮ್ಮತಾಭಿಪ್ರಾಯಕ್ಕೆ ಬರಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಗಳವಾರ ಅಥವಾ ಬುಧವಾರ ಸರಣಿ ಸಭೆಗಳು ನಡೆಯಲಿದ್ದು, ಬಳಿಕ ಅಂತಿ ನಿರ್ಧಾರಕ್ಕೆ ಬರಬಹುದು ಎನ್ನಲಾಗುತ್ತಿದೆ.

ಹಲವು ಕ್ಷೇತ್ರಗಳಲ್ಲಿ ಪಕ್ಷದ ವರಿಷ್ಠರು ಪ್ರಯೋಗ ನಡೆಸುವ ಮೂಲಕ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಆದರೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಹಮತ ವ್ಯಪಡಿಸಿದೆ ಹೊಸ ಪ್ರಯೋಗ ಮಾಡುವುದು ಬೆಡ. ಗೆಲ್ಲುವ ಮಾನದಂಡದ ಆಧಾರದ ಮೇಲೆ ಟಿಕೆಟ್ ನೀಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಹಾಲಿ ಸಂಸದರ ಪೈಕಿ ವಿವಾದಾಸ್ಪದ ಹೇಳಿಕೆಗಳನ್ನು ನೀಡುತ್ತಿರುವ ಉತ್ತರ ಕನ್ನಡ ಕ್ಷೇತ್ರದ ಅನಂತಕುಮಾರ್‌ ಹೆಗಡೆ ಅವರಿಗೆ ಟಿಕೆಟ್ ನೀಡುವ ಬಗ್ಗೆ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ ಎಮದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟೆ್ ಅವರಿಗೆ ಬೆಳಗಾವಿ ಮತ್ತು ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ.

ಪ್ರಸ್ತಾಪಿತ ಹೆಸರುಗಳು ಹೀಗಿವೆ:

1. ಶಿವಮೊಗ್ಗ-ಬಿವೈ ರಾಘವೇಂದ್ರ

2.ಧಾರವಾಡ-ಪ್ರಹ್ಲಾದ್‌ ಜೋಶಿ

3.ಉಡುಪಿ-ಚಿಕ್ಕಮಗಳೂರು- ಶೋಭಾ ಕರಂದ್ಲಾಜೆ

4.ವಿಜಯಪುರ- ಗೋವಿಂದ ಕಾರಜೋಳ

5.ಬೆಳಗಾವಿ- ಜಗದೀಶ್ ಶೆಟ್ಟರ್

6. ಹಾವೇರಿ- ಬಸವರಾಜ ಬೊಮ್ಮಾಯಿ

7.ಬೆಂಗಳೂರು ಗ್ರಾಮಾಂತರ-ಡಾ.ಸಿ.ಎನ್‌ ಮಂಜುನಾಥ್

8. ಬೆಂಗಳೂರು ಕೇಂದ್ರ-ಪಿಸಿ ಮೋಹನ್

9.ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ

10.ಚಿಕ್ಕಬಳ್ಳಾಪುರ-ಕೆ ಸುಧಾಕರ್

11.ತುಮಕೂರು- ವಿ.ಸೋಮಣ್ಣ

12. ಚಿತ್ರದುರ್ಗ-ಎ.ನಾರಾಯಣಸ್ವಾಮಿ

13.ಕಲಬುರಗಿ-ಉಮೇಶ್ ಜಾಧವ್

14. ಮೂಸೂರು-ಯದುವೀರ್‌ ಒಡೆಯರ್

15. ಬಳ್ಳಾರಿ-ಬಿ ಶ್ರೀರಾಮುಲು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+