Vijender Singh: ನಿನ್ನೆ ಮೋದಿ ವಿರುದ್ಧದ ರಾಹುಲ್ ಗಾಂಧಿ ಟ್ವೀಟ್ ರಿ ಟ್ವೀಟ್, ಇಂದು ಬಿಜೆಪಿ ತೆಕ್ಕೆಗೆ!

ಬೆಂಗಳೂರು, ಏಪ್ರಿಲ್.03: ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಮತ್ತು ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ವಾರಗಳು ಬಾಕಿ ಇರುವಾಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ.

ಈ ಸಡನ್ ಘಟನೆಗೆ ಇಡಿ ರಾಜಕೀಯ ರಂಗವೇ ಶಾಕ್ ಆಗಿದೆ. ಏಕೆಂದರೇ, ನಿನ್ನೆಯಷ್ಟೇ ರಾಹುಲ್ ಗಾಂಧಿ ಅವರ ಮೋದಿ ವಿರುದ್ಧದ ಟ್ವೀಟ್ ರಿ ಟ್ವೀಟ್ ಮಾಡಿದ್ದರು. ಬಾಕ್ಸರ್ ವಿಜೇಂದರ್ ಸಿಂಗ್ 2019 ರಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದಕ್ಷಿಣ ದೆಹಲಿ ಕ್ಷೇತ್ರದಿಂದ ಕಣಕ್ಕಿಳಿದ್ದಿದ್ದರು.

Lok sabha election 2024 Boxer and former Congress leader Vijender Singh joins BJP

ಸದ್ಯ ಮಥುರಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಂದು ಅವರ ಹೆಸರು ಕಳೆದ ಕೆಲವು ದಿನಗಳಿಂದ ಸುತ್ತುತ್ತಲೆ ಇದೆ. ಈ ಕ್ಷೇತ್ರದಿಂದ ಬಿಜೆಪಿ ಅಬ್ಯರ್ಥಿಯಾಗಿ ನಟಿ ಮತ್ತು ಹಾಲಿ ಸಂಸದೆ ಹೇಮಾ ಮಾಲಿನಿ ಮತ್ತೆ ಸ್ಪರ್ಧಿಸುತ್ತಿದ್ದಾರೆ.

ವಿಜೇಂದರ್ ಸಿಂಗ್ ಅವರು ಜಾಟ್ ಸಮುದಾಯಕ್ಕೆ ಸೇರಿದ್ದವರು. ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮುದಾಯವಿದ್ದು, ಹೆಚ್ಚು ಕ್ಷೇತ್ರಗಳಲ್ಲಿ ರಾಜಕೀಯ ಪ್ರಭಾವವನ್ನು ಹೊಂದಿದ್ದಾರೆ. ಇವರನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಅಂದುಕೊಂಡಿತ್ತು. ಆದರೆ, ಈಗ ಬಿಜೆಪಿ ಸೇರಿಕೊಂಡಿದ್ದಾರೆ.

Lok sabha election 2024 Boxer and former Congress leader Vijender Singh joins BJP

ವಿಶೇಷವಾಗಿ ಹರಿಯಾಣ ಮತ್ತು ಪಶ್ಚಿಮ ಯುಪಿಯಲ್ಲಿ ಪ್ರಮುಖವಾಗಿರುವ ಜಾಟ್ ಸಮುದಾಯದ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ಹೆಣೆಯುತ್ತಿದೆ. ಈಗ ವಿಜೇಂದರ್ ಸಿಂಗ್ ಈ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಪರ ವ್ಯಾಪಕ ಪ್ರಚಾರ ನಡೆಸುವ ನಿರೀಕ್ಷೆಯಿದೆ.

ಬುಧವಾರ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಬಾಕ್ಸರ್ ವಿಜೇಂದರ್ ಸಿಂಗ್ ಹಿಂದಿಯಲ್ಲಿ, "ಇದು ನನಗೆ ಘರ್ ವಾಪ್ಸಿ ಇದ್ದಂತೆ. ನಾನು 2019 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೆ. ಇದೀಗ ದೇಶ-ವಿದೇಶಗಳಲ್ಲಿ ಕ್ರೀಡಾ ಪಟುಗಳಿಗೆ ಸಿಗುತ್ತಿರುವ ಗೌರವ ಶ್ಲಾಘನೀಯ. ನಾವು ಹಿಂದೆ ವಿದೇಶಕ್ಕೆ ಹೋದಾಗ, ಯುಕೆ ಮತ್ತು ದುಬೈಗೆ, ಉದಾಹರಣೆಗೆ, ಕೆಲವೊಮ್ಮೆ ವಿಮಾನ ನಿಲ್ದಾಣಗಳಲ್ಲಿ ಕೆಲವು ಸಂಗತಿಗಳು ಸಂಭವಿಸುತ್ತಿದ್ದವು. ಆದರೆ ಬಿಜೆಪಿ ಮತ್ತು ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ನಾವು ಎಲ್ಲಿ ಬೇಕಾದರೂ ಸುಲಭವಾಗಿ ಹೋಗಬಹುದು. ಕ್ರೀಡಾಪಟುಗಳಿಗೆ ಈ ಸರ್ಕಾರದ ಅಡಿಯಲ್ಲಿ ಸಿಗುವ ಗೌರವಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಬಿಜೆಪಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಈ ಸರ್ಕಾರದ ಭಾಗವಾಗಲು ಬಯಸುತ್ತೇನೆ, ಜನರಿಗೆ ಸಹಾಯ ಮಾಡಲು ಮತ್ತು ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಲು ಬಯಸುತ್ತೇನೆ" ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಮೋದಿ ಟೀಕಿಸಿದ್ದ ವಿಜೇಂದರ್

ಬಿಜೆಪಿಗೆ ಸೇರುವ ಒಂದು ದಿನದ ಮೊದಲು, ವಿಜೇತ ವಿಜೇಂದರ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ ಟ್ವೀಟ್ ಅನ್ನು ರಿಪೋಸ್ಟ್ ಮಾಡಿದ್ದರು. ಒಂದೇ ದಿನದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್. 2006 ಮತ್ತು 2014 ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕಗಳನ್ನು, 2010 ರ ಕ್ರೀಡಾಕೂಟದಲ್ಲಿ ಕಂಚಿನ ಪದಕಗಳನ್ನು ಮತ್ತು 2009 ರ ವಿಶ್ವ ಚಾಂಪಿಯನ್‌ಶಿಪ್‌ಗಳನ್ನು ಗೆದ್ದಿದ್ದಾರೆ. ಕಳೆದ ವರ್ಷ ಲೈಂಗಿಕ ಕಿರುಕುಳ ಆರೋಪದ ಕುರಿತು ಬಿಜೆಪಿ ಸಂಸದ ಮತ್ತು ನಂತರ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಬೆಂಬಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+