Lok Sabha Election 2024: ನಾಳೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ, ಮಾರ್ಚ್ 15: ಚುನಾವಣೆಗೆ ತಯಾರಾಗಿರುವ ದೇಶದಲ್ಲಿ ಯಾವಾಗ ಚುನಾವನೆ ಎಂದು ಜನ ಕಾಯುತ್ತಿದ್ದರು. ಜನರ ನಿರೀಕ್ಷೆಗೆ ಉತ್ತರಿಸಿರುವ ಚುನಾವಣಾ ಆಯೋಗ ಕೊನೆಗೆ ಒಂದು ದಿನವನ್ನು ತಿಳಿಸಿದೆ. 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಮಾರ್ಚ್ 15ರ ಮಧ್ಯಾಹ್ನ ತಿಳಿಸಿದೆ.
ಭಾರತೀಯ ಚುನಾವಣಾ ಆಯೋಗ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಲೋಕಸಭಾ ಚುನಾವಣೆ ಕುರಿತು ಸಂಕ್ಷಿಪ್ತ ಹೇಳಿಕೆಯನ್ನು ಪೋಸ್ಟ್ ಮಾಡಿದೆ. ಜೊತೆಗೆ ನಾಲ್ಕು ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಅದೇ ಸಮಯದಲ್ಲಿ ಘೋಷಿಸುವುದಾಗಿ ತಿಳಿಸಿದೆ.

"ಸಾರ್ವತ್ರಿಕ ಚುನಾವಣೆಗಳು 2024 ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ನಾಳೆ ಮಧ್ಯಾಹ್ನ 3 ಗಂಟೆಗೆ ಅಂದರೆ ಮಾರ್ಚ್ 16 ರ ಶನಿವಾರ ನಡೆಯಲಿದೆ. ಇದು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್‌ಸ್ಟ್ರೀಮ್ ಆಗುತ್ತದೆ" ಎಂದು ಟ್ವೀಟ್ ಮಾಡಲಾಗಿದೆ.
Press Conference by Election Commission to announce schedule for #GeneralElections2024 & some State Assemblies will be held at 3 pm tomorrow ie Saturday, 16th March. It will livestreamed on social media platforms of the ECI pic.twitter.com/1vlWZsLRzt
— Spokesperson ECI (@SpokespersonECI) March 15, 2024
ಲೋಕಸಭಾ ಚುನಾವಣೆ ಜೊತೆಗೆ ಈ ಬಾರಿಯ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.
ಕಾಂಗ್ರೆಸ್‌ನ ತೀವ್ರ ಭಿನ್ನಾಭಿಪ್ರಾಯದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಇಬ್ಬರು ಮಾಜಿ ಅಧಿಕಾರಿಗಳನ್ನು ಚುನಾವಣಾ ಆಯುಕ್ತರನ್ನಾಗಿ ಗುರುವಾರ ನೇಮಿಸಿದೆ. ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ಚುನಾವಣಾ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ಆರಂಭದಲ್ಲಿ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರಮುಖ ಪ್ಯಾನೆಲ್ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ಹೆಸರುಗಳ ಬಗ್ಗೆ ಮಾತನಾಡಿದ್ದರು. ಆದರೂ ಕಾನೂನು ಸಚಿವಾಲಯ ನೇಮಕಾತಿಗಳ ಬಗ್ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿತು.
ಇತ್ತ, ಚುನಾವಣಾ ಸಮಿತಿಯು ಎಸ್‌ಬಿಐನ ಚುನಾವಣಾ ಬಾಂಡ್ ಡೇಟಾವನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾರ್ಚ್ 15 ರ ಸುಪ್ರೀಂ ಕೋರ್ಟ್ ಆದೇಶದ ಕೊನೆಯ ಗಡುವಿನ ಒಂದು ದಿನದ ಮೊದಲು ಡೇಟಾವನ್ನು ಪ್ರಕಟಿಸಲಾಗಿದೆ.












Click it and Unblock the Notifications