ಜೈನ್ ಕಾಲೇಜು ವಿದ್ಯಾರ್ಥಿಗಳ ಮೇಲೆ ಒತ್ತಡ ಆರೋಪ! ಯಾವ ವಿಚಾರಕ್ಕೆ ಗೊತ್ತಾ?
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಚುನಾವಣೆಗೆ ಈಗ ಕ್ಷಣಗಣನೆ ಆರಂಭವಾಗಿದೆ. ಭಾರತದ ಲೋಕಸಭೆ ಚುನಾವಣೆ ಜಗತ್ತಿನ ಹಣೆಬರಹ ನಿರ್ಧಾರ ಮಾಡುತ್ತದೆ. ಹೀಗಿದ್ದಾಗಲೇ, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಬ್ಯುಸಿಯಲ್ಲಿ ಇದ್ದಾರೆ. ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಭಾರತದಲ್ಲಿ 2024ರ ಲೋಕಸಭೆ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ನಡೆಯಲಿದೆ. ಇದಕ್ಕೆ ಬೇಕಾಗಿರುವ ಎಲ್ಲಾ ತಯಾರಿ ಮಾಡಿಕೊಂಡು, ಚುನಾವಣಾ ಅಧಿಕಾರಿಗಳು ಭದ್ರತೆಯ ಕೈಗೊಂಡಿದ್ದಾರೆ. 2024 ಲೋಕಸಭೆ ಚುನಾವಣೆ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ. ಶತಕೋಟಿ ಭಾರತೀಯರು ಇಷ್ಟು ದಿನಗಳ ಕಾಲ ಕಾಯುತ್ತಿದ್ದ ಸಮಯ ಬಂದಿದ್ದು, ರಾಜಕೀಯ ಪಕ್ಷಗಳ ಚುನಾವಣಾ ಯುದ್ಧಕ್ಕೆ ರಣಕಹಳೆ ಮೊಳಗಿದೆ. ಆದರೆ ಇದೇ ಸಮಯದಲ್ಲೇ, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಗಂಭೀರ ಆರೋಪ ಮಾಡಿದೆ ಕಾಂಗ್ರೆಸ್.

'ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ...'
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, 'ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ತನ್ನ ಪಟಾಲಂ ಮೂಲಕ ಸೂಚನೆ ನೀಡಿರುವ @Tejasvi_Surya ವಿರುದ್ಧ @ceo_karnataka ಅವರು ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು. ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಭಾಗವಹಿಸುವಂತೆ ಬೆದರಿಕೆ ಹಾಕುತ್ತಿರುವುದು ಚುನಾವಣಾ ನಿಯಮಗಳಿಗೆ ಹಾಗೂ ಕಾನೂನಿಗೆ ವಿರುದ್ಧವಾಗಿದೆ.' ಎಂದಿದೆ ಕರ್ನಾಟಕ ಕಾಂಗ್ರೆಸ್.
ಹಾಗೇ ಇದೇ ಟ್ವೀಟ್‌ನಲ್ಲಿ ಆರೋಪ ಮುಂದುವರಿಸಿರುವ ಕರ್ನಾಟಕ ಕಾಂಗ್ರೆಸ್, 'ಟಿ ಶರ್ಟ್ ಹಂಚಿಕೆ ವಿರುದ್ಧವೂ ಕ್ರಮ ಜರುಗಿಸಿ ಪಾರದರ್ಶಕ ಚುನಾವಣೆಗೆ ಪಕ್ಷಪಾತವಿಲ್ಲದ ಕ್ರಮಗಳನ್ನು ಕೈಗೊಳ್ಳಬೇಕು. ಹಿಂದೆ ನೀತಿ ಸಂಹಿತೆಗೆ ವಿರುದ್ಧವಾಗಿ ನಗರತ್ ಪೇಟೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಯಾವುದೇ ಕಠಿಣ ಕ್ರಮ ಜರುಗಿಸದಿರುವುದು ಜನರಲ್ಲಿ ಆಯೋಗದ ಕಾರ್ಯಕ್ಷಮತೆಯ ಬಗ್ಗೆ ಅನುಮಾನ ಮೂಡಲು ಕಾರಣವಾಗಿದೆ.' ಎಂದು ಆರೋಪಿಸಿದೆ ಕಾಂಗ್ರೆಸ್.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಂಚಲನ!
ಈ ಮೂಲಕ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಈಗ ಸಂಚಲನ ಸೃಷ್ಟಿಯಾಗಿದೆ. ಅಲ್ಲದೆ ಹಾಲಿ ಸಂಸದ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಹೀಗಾಗಿ ಚುನಾವಣಾ ಆಯೋಗ ಈ ವಿಚಾರವಾಗಿ ಯಾವ ರೀತಿ ಕ್ರಮ ಕೈಗೊಳ್ಳುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ.
ಕರ್ನಾಟಕದಲ್ಲಿ ಈ ದಿನ ಮತದಾನ!
ಚುನಾವಣಾ ಆಯೋಗವು ಘೋಷಣೆ ಮಾಡಿರುವ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26ಕ್ಕೆ ಎಲೆಕ್ಷನ್ ನಡೆಯಲಿದೆ. ಇದು ಕರ್ನಾಟಕದ ಪಾಲಿಗೆ ಮೊದಲ ಹಂತ, ಚುನಾವಣಾ ಆಯೋಗದ ಪ್ರಕಾರ ಭಾರತದಲ್ಲಿ ಇದು 2ನೇ ಹಂತವಾಗಲಿದೆ. ಹಾಗೇ ಕರ್ನಾಟಕದ 2ನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಈ ಮೂಲಕ ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಎಲೆಕ್ಷನ್ ಮುಗಿಯುತ್ತದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ, ಇದೇ ಏಪ್ರಿಲ್ 26 ಕ್ಕೆ ಮತದಾನ ನಡೆಯಲಿದೆ.












Click it and Unblock the Notifications