ಅಮೇಥಿಯಲ್ಲಿ ಚುನಾವಣೆಗೂ ಮುನ್ನ ಮುಖಾಮುಖಿಯಾದ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ!
ಲಕ್ನೋ, ಫೆಬ್ರವರಿ.19: 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಬ್ಬರೂ ಫೆಬ್ರವರಿ 19 ರ ಸೋಮವಾರ ಉತ್ತರ ಪ್ರದೇಶ ಪಟ್ಟಣಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಬಾರಿ ಇಬ್ಬರು ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಇಂದು ಅಮೇಥಿಗೆ ಪ್ರವೇಶಿಸಿದೆ. ಇದೇ ವೇಳೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಉತ್ತರ ಪ್ರದೇಶ ಪಟ್ಟಣಕ್ಕೆ ಭೇಟಿ ನೀಡುತ್ತಿದ್ದಾರೆ. 2019 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿ ಅಮೇಥಿಯ ಪ್ರಸ್ತುತ ಸಂಸದೆಯಾಗಿದ್ದಾರೆ ಬಿಜೆಪಿಯ ಸ್ಮೃತಿ ಇರಾನಿ.

ಅಮೇಥಿಯಲ್ಲಿ ಸ್ಮೃತಿ ಇರಾನಿ ಇನ್ನು ನಾಲ್ಕು ದಿನಗಳ ಪ್ರವಾಸ ಆರಂಭಿಸಿದ್ದಾರೆ. ಅಮೇಥಿಯಲ್ಲಿ ಕಳೆದ 2019 ರಿಂದ ಇದು ಎರಡನೇ ಬಾರಿಗೆ ಒಂದೇ ಬಾರಿ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. 2022 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಇಬ್ಬರು ಪ್ರತ್ಯೇಕ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
ಇನ್ನು, ಸಚಿವೆ ಸ್ಮೃತಿ ಇರಾನಿ ತಮ್ಮ ಪ್ರವಾಸದ ಸಮಯದಲ್ಲಿ ಹಲವು ಗ್ರಾಮಗಳ ನಿವಾಸಿಗಳೊಂದಿಗೆ ಸಂವಾದ ಮಾಡಲು ಮತ್ತು ಫೆಬ್ರವರಿ 22 ರಂದು ಗೃಹ ಪ್ರವೇಶ ಸಮಾರಂಭದಲ್ಲಿ ಭಾಗವಹಿಸಲು ಯೋಜಿಸಿದ್ದಾರೆ. ತನ್ನ ಚುನಾವಣಾ ಗೆಲುವಿನ ಮೊದಲು ಮತದಾರರಿಗೆ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ.

ಸ್ಮೃತಿ ಇರಾನಿ ಅವರು ಟಿಕರ್ಮಾಫಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ತಮ್ಮ ಅಮೇಥಿ ಪ್ರವಾಸವನ್ನು ಪ್ರಾರಂಭಿಸಿದ್ದಾರೆ. ಅಲ್ಲಿ ಅವರು ಸ್ಥಳೀಯರೊಂದಿಗೆ ಸಂವಾದ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಿದರು. ಸಮಸ್ಯೆಗಳ ಪರಿಹಾರಕ್ಕೆ ಶೀಘ್ರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದರ ಜೊತೆಗೆ ಭದರ್ ಅಭಿವೃದ್ಧಿ ಬ್ಲಾಕ್‌ನ ಇತರ ಹಲವಾರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.
ಇನ್ನೊಂದೆಡೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಸೋಮವಾರ ಅಮೇಥಿ ಪ್ರವೇಶಿಸಿದೆ. ಸಾರ್ವರ್ತ್ರಿಕ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ಗೆ ಬೆಂಬಲವನ್ನು ಹೆಚ್ಚಿಸಲು ರಾಹುಲ್ ಗಾಂಧಿ ಪಟ್ಟಣದಲ್ಲಿ ರೋಡ್‌ಶೋ ಮತ್ತು ಸಾರ್ವಜನಿಕ ಸಭೆ ನಡೆಸುವ ನಿರೀಕ್ಷೆಯಿದೆ.
2019 ರ ಲೋಕಸಭಾ ಚುನಾವಣೆಯಲ್ಲಿ, ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದಿದ್ದರು. ಅಮೇಥಿಯಲ್ಲಿ 15 ವರ್ಷಗಳ ರಾಹುಲ್ ಗಾಂಧಿ ಆಳ್ವಿಕೆಯನ್ನು ಕೊನೆಗೊಳಿಸಿದರು. ಅಂದಿನಿಂದ, ಇಬ್ಬರು ನಾಯಕರು ಅಮೇಥಿಯಲ್ಲಿ ಒಂದೇ ಬಾರಿ ಕಾಣಿಸಿಕೊಂಡಿರುವುದು ವಿರಳವಾಗಿದೆ.
ಒಂದು ಕಾಲದಲ್ಲಿ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಅಮೇಥಿ ಭಾರತೀಯ ರಾಜಕೀಯದಲ್ಲಿ ಕೇಂದ್ರಬಿಂದುವಾಗಿ ಮುಂದುವರೆದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ ನಡುವೆ ತೀವ್ರ ಪೈಪೋಟಿಗೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.












Click it and Unblock the Notifications