Lok Sabha Election: ಯಾವ ಹಂತದಲ್ಲಿ ಎಷ್ಟು ರಾಜ್ಯಗಳಿಗೆ ಮತದಾನ? ಇಲ್ಲಿದೆ ಸಂಪೂರ್ಣ ವಿವರ
ನವದೆಹಲಿ, ಮಾರ್ಚ್ 16: ದೇಶದ ಜನರು ಕಾತುರದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಒಟ್ಟು 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ ಎಮದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ದೇಶದಲ್ಲಿ ಏಪ್ರಿಲ್ 19 ರಿಂದ ಮತದಾನ ಆರಂಭವಾಗಲಿದ್ದು, ಒಟ್ಟು ಏಳು ಹಂತದಲ್ಲಿ ಜೂನ್ 1ರವೆಗೆ ಮತದಾನ ನಡೆಯಲಿದೆ. ಹಾಗೂ ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರ ಬೀಳಲಿದೆ ಎಂದು ತಿಳಸಿದ್ದಾರೆ.

ದೇಶದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳಿದ್ದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
*ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ತಮಿಳು ನಾಡು, ಘತ್ತೀಸ್‌ಘಡ್, ರಾಜಸ್ತಾನ, ಮಧ್ಯಪ್ರದೇಶ, ಉತ್ತರಖಂಡ, ಉತ್ತರ ಪ್ರದೇಶ, ಜಮ್ಮು ಹಾಗೂ ಕಾಶ್ಮೀರ, ಬಿಹಾರ, ಪಶ್ಚಿಮ ಬಂಗಾಳ ದಲ್ಲಿ ಮತದಾನ ನಡೆಯಲಿದೆ.
*ಏಪ್ರಿಲ್ 26ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರ, ಕರ್ನಾಟಕ, ಮಣಿಪುರ, ಬಿಹಾರ, ರಾಜಸ್ತಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.

*ಮೇ 7ರಂದು ಮೂರನೇ ಹಂತದಲ್ಲಿ 94 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು ಹಾಗೂ ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ದಮನ್ ಮತ್ತು ದಿಯುನಲ್ಲಿ ಮತದಾನ ನಡೆಯಲಿದೆ.
*ಮೇ 13ರಂದು ನಾಲ್ಕನೇ ಹಂತದಲ್ಲಿ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಆಂಧ್ರ ಪ್ರದೇಶ, ಬಿಹಾರ, ಘತ್ತೀಸ್‌ಘಡ್, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಜಮ್ಮು ಹಾಗೂ ಕಾಶ್ಮೀರ, ಉತ್ತರ ಪ್ರದೇಶದಲ್ಲಿ ಮತದಾನ ನಡೆಯಲಿದೆ.
*ಮೇ 20 ರಂದು ಐದನೇ ಹಂತದಲ್ಲಿ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರ, ಒಡಿಶಾ, ಜಾರ್ಖಾಂಡ್, ಮಹಾರಾಷ್ಟ್ರ, ಜಮ್ಮು ಹಾಗೂ ಕಾಶ್ಮೀರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.
*ಮೇ 25ರಂದು ಆರನೇ ಹಂತದಲ್ಲಿ 56 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರ, ಹರಿಯಾಣ, ದೆಹಲಿ, ಜಾರ್ಖಾಂಡ್, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದೆ.
*ಜೂನ್ 1ರಂದು ಏಳನೇ ಹಂತದಲ್ಲಿ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರ, ಹಿಮಾಚಲ ಪ್ರದೇಶ, ಜಾರ್ಖಾಂಡ್, ಒಡಿಶಾ, ಪಶ್ಚಿಮ ಬಂಗಾಳ, ಪಂಜಾಬ್ ಘತ್ತೀಸ್‌ಘಡ್, ಉತ್ತರ ಪ್ರದೇಶದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ ಎಂದು ವರದಿಯಾಗಿದೆ.












Click it and Unblock the Notifications