Get Updates
Get notified of breaking news, exclusive insights, and must-see stories!

Lok Sabha Election; ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಎಷ್ಟು ಸೀಟು?

ಬೆಂಗಳೂರು, ಫೆಬ್ರವರಿ 08: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದ ಬಳಿಕ ದಕ್ಷಿಣ ಭಾರತ, ಉತ್ತರ ಭಾರತ ಎಂಬ ಚರ್ಚೆಗಳು ಜೋರಾಗಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಎಷ್ಟು ಸೀಟುಗಳು ಸಿಗಲಿವೆ? ಎಂಬುದು ಲೆಕ್ಕಾಚಾರವಾಗಿದೆ.

ಲೋಕಸಭೆ ಚುನಾವಣೆ 2024ರ ಫಲಿತಾಂಶದ ಕುರಿತು Times Now ಮತ್ತು Matrize News ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ವರದಿ ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ ಏನು? ಎಂದು ಹೇಳಿದೆ. ಈ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವ ಗುರಿಯಲ್ಲಿ ಎನ್‌ಡಿಎ ಮೈತ್ರಿಕೂಟ ತಯಾರಿ ಆರಂಭಿಸಿದೆ.

Lok Sabha Election 2024 Times Now Matrize News Survey 27 Seat For BJP In South

ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಲ್ಲಿಯೂ ಬಿಜೆಪಿ ಅಧಿಕಾರದಲ್ಲಿ ಇಲ್ಲ. ಕರ್ನಾಟಕದಲ್ಲಿ ಅಧಿಕಾರದಲ್ಲಿತ್ತು. ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡು ಕಾಂಗ್ರೆಸ್‌ಗೆ ಅಧಿಕಾರವನ್ನು ಬಿಟ್ಟುಕೊಟ್ಟಿದೆ. ಆದರೆ ದಕ್ಷಿಣದಲ್ಲಿ ಬಿಜೆಪಿ ಪ್ರಬಲವಾಗಿರುವ ರಾಜ್ಯ ಕರ್ನಾಟಕ ಮಾತ್ರ.

ದಕ್ಷಿಣದಲ್ಲಿ ಬಿಜೆಪಿಗೆ ಎಷ್ಟು ಸೀಟು?; ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದಲ್ಲಿ 27 ಸೀಟುಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಇದರಲ್ಲಿ 21 ಸ್ಥಾನಗಳನ್ನು ಕರ್ನಾಟಕದಲ್ಲಿಯೇ ಗೆಲ್ಲಲಿದೆ ಎಂದು Times Now ಮತ್ತು Matrize News ನಡೆಸಿದ ಸಮೀಕ್ಷೆಯ ವರದಿ ಅಂದಾಜಿಸಿದೆ.

ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ಪೈಕಿ ಕರ್ನಾಟಕದಲ್ಲಿಯೇ ಬಿಜೆಪಿ ಪ್ರಬಲವಾಗಿದೆ. 2019ರ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡು ಪಕ್ಷ ರಾಜ್ಯದಲ್ಲಿ ಚುನಾವಣೆ ಎದುರಿಸುತ್ತಿದೆ.

ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 21, ಅಧಿಕಾರದಲ್ಲಿರುವ ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಳೆದ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದಲ್ಲಿ ಕೇವಲ ಒಂದೊಂದು ಸೀಟು ಗೆದ್ದಿದ್ದವು.

ತಮಿಳುನಾಡು ರಾಜ್ಯದಲ್ಲಿ ಡಿಎಂಕೆ-ಕಾಂಗ್ರೆಸ್ ಆಡಳಿತವಿದೆ. 39 ಸೀಟುಗಳ ಪೈಕಿ ಡಿಎಂಕೆ-ಕಾಂಗ್ರೆಸ್ 36ರಲ್ಲಿ ಜಯಗಳಿಸಬಹುದು. ಎಐಎಡಿಎಂಕೆ 2 ಮತ್ತು ಬಿಜೆಪಿ 1 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ವರದಿಯಲ್ಲಿ ಅಂದಾಜಿಸಲಾಗಿದೆ.

ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ ರೆಡ್ಡಿ ಮುಖ್ಯಮಂತ್ರಿ. 25 ಲೋಕಸಭಾ ಕ್ಷೇತ್ರವಿದೆ. ವೈಎಸ್‌ಆರ್‌ಸಿಪಿ 19, ಟಿಡಿಪಿ-ಜನಸೇನಾ 6 ಸೀಟು ಗೆಲ್ಲಲಿದೆ. ಬಿಜೆಪಿ, ಕಾಂಗ್ರೆಸ್, ಇತರರು ಯಾವುದೇ ಸ್ಥಾನ ಗೆಲ್ಲುವುದಿಲ್ಲ ಎಂದು ಸಮೀಕ್ಷೇ ಹೇಳಿದೆ.

ತೆಲಂಗಾಣ ರಾಜ್ಯದಲ್ಲಿಯೂ ಕಾಂಗ್ರೆಸ್ ಅಧಿಕಾರದಲ್ಲಿದೆ. ಆಡಳಿತ ಪಕ್ಷ ಕಾಂಗ್ರೆಸ್ 9, ಬಿಜೆಪಿ 5, ಬಿಆರ್‌ಎಸ್ 2 ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ 1 ಸೀಟು ಗೆಲ್ಲಲಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.

ಸಮೀಕ್ಷೆ ವರದಿಯಂತೆ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಶೇ 79.9ರಷ್ಟು ಮತಗಳಿಸಲಿದೆ. ಎನ್‌ಡಿಎ ಮೈತ್ರಿಕೂಟ 19.8ರಷ್ಟು ಮತಗಳನ್ನು ಪಡೆಯಲಿದೆ ಎಂದು ಅಂದಾಜಿಸಿದೆ.

ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶ ಮತ್ತು ಕೇರಳದಲ್ಲಿಯೇ ಬಿಜೆಪಿಗೆ ಹಿನ್ನಡೆಯಾಗಲಿದೆ. ಎರಡೂ ರಾಜ್ಯಗಳಲ್ಲಿ ಖಾತೆ ತೆರೆಯಲು ಸಹ ಪಕ್ಷ ವಿಫಲವಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ನಡೆಸುತ್ತಿರುವ 'ಎನ್ ಮನ್ ಎನ್ ಮಕ್ಕಳ್' ಯಾತ್ರೆ ಪಕ್ಷಕ್ಕೆ ಸಹಾಯಕವಾಗಲಿದೆ ಎಂದು ಸಮೀಕ್ಷೆ ಹೇಳಿದ್ದು, ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ 44ರಷ್ಟು ಜನರು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಆಡಳಿತದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ಎದುರಾಗುತ್ತಿದೆ. ಬುಧವಾರ ದೆಹಲಿಯಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದಾರೆ. ಇದು ಮತ್ತೆ ಟಿಡಿಪಿ ಎನ್‌ಡಿಎ ಮೈತ್ರಿಕೂಟ ಸೇರಲಿದೆಯೇ? ಎಂಬ ಚರ್ಚೆ ಹುಟ್ಟು ಹಾಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+