ಲೋಕಸಭಾ ಚುನಾವಣೆ 2024: ಉತ್ತರ ಪ್ರದೇಶದ ಸಮೀಕ್ಷೆ ಬಹಿರಂಗ
ನವದೆಹಲಿ, ಆಗಸ್ಟ್ 19: ಲೋಕಸಭಾ ಚುನಾವಣೆ 2024ಕ್ಕೆ ಎನ್‌ಡಿಎ ಹಾಗೂ ಇಂಡಿಯಾ ಒಕ್ಕೂಟ ತಯಾರಿ ನಡೆಸಿರುವ ಬೆನ್ನಲ್ಲೇ ಯಾವ ರಾಜ್ಯದಲ್ಲಿ ಎಷ್ಟೆಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಸಮೀಕ್ಷಾ ವರದಿಯು ಬಿಡುಗಡೆಗೊಂಡಿದೆ.
ಸ್ಮಾಲ್ ಬಾಕ್ಸ್ ಇಂಡಿಯಾ ನಡೆಸಿರುವ ಈ ಸಮೀಕ್ಷೆಯ ಎರಡನೇ ಭಾಗ ಇದಾಗಿದ್ದು, ಇದರ ಪ್ರಕಾರ ಉತ್ತರ ಪ್ರದೇಶದಲ್ಲಿ ಎನ್‌ಡಿಎ ಒಕ್ಕೂಟ ಮತ್ತೆ ಮೇಲುಗೈ ಸಾಧಿಸಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 68 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ.

ಹಾಗೆಯೇ ಬಿಹಾರದ ಒಟ್ಟು 40 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 27 ಸ್ಥಾನಗಳನ್ನು ಗೆದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 13 ಸ್ಥಾನಗಳನ್ನು ಗೆಲ್ಲುತ್ತದೆ. ಇಲ್ಲಿ ಇತರೆ ಪಕ್ಷಗಳ ಸಾಧನೆ ಶೂನ್ಯ ಎಂದು ಸ್ಮಾಲ್ ಬಾಕ್ಸ್ ಇಂಡಿಯಾ ಸಮೀಕ್ಷೆ ತಿಳಿಸಿದೆ. ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಒಟ್ಟು 26 ಲೋಕಸಭಾ ಸ್ಥಾನಗಳಿದ್ದು, ಇಲ್ಲಿ 26 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಬಾರಿಸುತ್ತದೆ ಎಂದು ಸಮೀಕ್ಷೆ ತಿಳಿಸಿದೆ.
14 ಲೋಕಸಭಾ ಕ್ಷೇತ್ರಗಳಲ್ಲಿರುವ ಜಾರ್ಖಂಡ್ ರಾಜ್ಯದಲ್ಲಿ ಈಗಾಗಲೇ ಆಡಳಿತರೂಢ ಬಿಜೆಪಿ ನೇತೃತ್ವದ ಎನ್‌ಡಿಎ 11 ಸ್ಥಾನಗಳಲ್ಲಿ ಗೆಲ್ಲಬಹುದು ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 3 ಸ್ಥಾನಗಳಲ್ಲಿ ಜಯ ಸಾಧಿಸಬಹುದು ಎಂದು ತಿಳಿಸಿದೆ. ಇನ್ನು 13 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್‌ನಲ್ಲಿ ಇಂಡಿಯಾ ಒಕ್ಕೂಟ ಎಲ್ಲ 13 ಸ್ಥಾನಗಳಲ್ಲಿ ಜಯ ಸಾಧಿಸುತ್ತದೆ ಎಂದು ಸಮೀಕ್ಷೆ ತಿಳಿಸಿದೆ.
ಇದಕ್ಕೂ ಮೊದಲು ಮೊದಲ ಸಮೀಕ್ಷಾ ವರದಿಯಲ್ಲಿ ಬಿಡುಗಡೆ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ 25 ಲೋಕಸಭಾ ಕ್ಷೇತ್ರ ಹೊಂದಿರುವ ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಪಿ 18 ಲೋಕಸಭಾ ಸ್ಥಾನಗಳನ್ನು ವಶಪಡಿಸಿಕೊಂಡರೆ ಟಿಡಿಪಿ 7 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಸ್ಮಾಲ್ ಬಾಕ್ಸ್ ಇಂಡಿಯಾ ಸಮೀಕ್ಷೆ ತಿಳಿಸಿದೆ.
ಕೇಂದ್ರಾಡಳಿತ ಪ್ರದೇಶಗಳಾದ ಪಾಂಡಿಚೇರಿ, ಲಕ್ಷದ್ವೀಪ, ದಾದರ್ ನಗರ ಹಾವೇಲಿಯಲ್ಲಿ 3 ಲೋಕಸಭಾ ಕ್ಷೇತ್ರಗಳಿಂದ ಇಂಡಿಯಾ ಒಕ್ಕೂಟವು ಎಲ್ಲ 3 ಸ್ಥಾನವನ್ನು ವಶಪಡಿಸಿಕೊಳ್ಳಲಿದೆ ಎಂದು ಅದು ತಿಳಿಸಿದೆ. ಉತ್ತರಖಂಡ 4 ಕ್ಷೇತ್ರಗಳಲ್ಲಿ 5 ಲೋಕಸಭಾ ಕ್ಷೇತ್ರಗಳಲ್ಲಿ 4 ಇಂಡಿಯಾ ಪಾಲಾದರೆ, 1 ಕ್ಷೇತ್ರ ಎನ್‌ಡಿಎ ಪಾಲಾಗಲಿದೆ ಎಂದು ಸಮೀಕ್ಷೆ ತಿಳಿಸಿದೆ.












Click it and Unblock the Notifications