Lok Sabha Election: ಚುನವಾಣೆಗೆ ಕೆಲವೇ ದಿನಗಳ ಮೊದಲೇ ಕಾಂಗ್ರೆಸ್ ಅಭ್ಯರ್ಥಿ ಕಮಲದ ತೆಕ್ಕೆಗೆ
ದೇಶದಲ್ಲಿ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯುತ್ತಿವೆ. ಈಗಾಗಲೇ ಎರಡು ಹಂತದಲ್ಲಿ ಮತದಾನ ನಡೆದಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ. ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಆದಂತೆ, ದೇಶದ ಇನ್ನೊಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮೆಲುಗೈ ಸಾಧಿಸುವ ಸೂಚನೆ ಸಿಕ್ಕಿದೆ.
ಸೂರತ್ ನಂತರ ಲೋಕಸಭೆ ಚುನಾವಣೆ ವೇಳೆ ಇಂದೋರ್‌ನಲ್ಲೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಗುಜರಾತ್‌ನ ಸೂರತ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಹೀಗಾಗಿ ಅವರು ಚುನಾವಣೆಗೆ ಸ್ಪರ್ಧಿಸಲು ಆಗಿರಲಿಲ್ಲ. ಇದೀಗ ಇಂದೋರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಈ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ.

ಇಂದೋರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಹಿಂದೆ ಸರಿದಿದ್ದಾರೆ. ಈಗ ಅವರು ಇವರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ಅಕ್ಷಯ್ ಕಾಂತಿ ಬಾಮ್ ಬಿಜೆಪಿ ಸೇರಿರುವುದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಪೆಟ್ಟ ಬಿದ್ದಂತೆ ಆಗಿದೆ. ಇಂದೋರ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಾಮ್ ನಾಮಪತ್ರ ಹಿಂಪಡೆದ ಬಳಿಕ ಮತ್ತೆ ಆರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಇದರಿಂದ ಬಿಜೆಪಿ ಗೆಲುವಿನ ಸನಿಹಕ್ಕೆ ಬಂದು ನಿಂತಂತೆ ಆಗಿದೆ.
ಆಗಿದ್ದೇನು?
ಇಂದೋರ್‌ನ ಲೋಕಸಭಾ ಅಖಾಡದಲ್ಲಿ ಒಟ್ಟು 23 ಅಭ್ಯರ್ಥಿಗಳು ಇದ್ದರು. ಈ ಪೈಕಿ ಒಂಬತ್ತು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಇದಾದ ನಂತರ ಇಂದೋರ್ ಲೋಕಸಭಾ ಕ್ಷೇತ್ರಕ್ಕೆ ಇನ್ನೂ 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಇಂದೋರ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್ ತಿಳಿಸಿದ್ದಾರೆ.
ಅಕ್ಷಯ್ ಕಾಂತಿ ಬಾಮ್ ಯಾರು?
ಬಿಜೆಪಿಯ ಪ್ರಬಲ ಭದ್ರಕೋಟೆ ಎಂದು ಪರಿಗಣಿಸಲಾದ ಇಂದೋರ್‌ನಲ್ಲಿ ಕಾಂಗ್ರೆಸ್ ಅಕ್ಷಯ್ ಕಾಂತಿ ಬಾಮ್ (45) ಅವರಿಗೆ ಟಿಕೆಟ್ ನೀಡಿತ್ತು. ಅಲ್ಲದೆ ಇಂದೋರ್‌ನಲ್ಲಿ ಕಾಂಗ್ರೆಸ್ ಬಾವುಟವನ್ನು ಹಾರಿಸುವ ಇರಾದೆಯನ್ನು ಇಟ್ಟುಕೊಂಡಿತ್ತು. ಅಕ್ಷಯ್ ಕಾಂತಿ ಬಾಮ್ ವೃತ್ತಿಯಲ್ಲಿ ಉದ್ಯಮಿಯಾಗಿದ್ದು, ಅವರ ಕುಟುಂಬವು ನಗರದಲ್ಲಿ ಖಾಸಗಿ ಕಾಲೇಜುಗಳನ್ನು ನಡೆಸುತ್ತಿದೆ. ಬಾಮ್ ತಮ್ಮ ರಾಜಕೀಯ ಜೀವನದಲ್ಲಿ ಇದುವರೆಗೆ ಒಂದೇ ಒಂದು ಚುನಾವಣೆಗೆ ಸ್ಪರ್ಧಿಸಿಲ್ಲ.
ಲೋಕಸಭೆ ಚುನಾವಣೆಗೆ ಮುನ್ನ ಜಿಲ್ಲೆಯ ಮೂವರು ಮಾಜಿ ಕಾಂಗ್ರೆಸ್ ಶಾಸಕರು ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಪಕ್ಷ ಬದಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಸಮಯದಲ್ಲಿ ಇಂದೋರ್‌ನಿಂದ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಅವಕಾಶ ನೀಡಿತ್ತು.
ಆಪರೇಷನ್ ಕೈ ಸೂತ್ರಧಾರಿ ಯಾರು?
ಲೋಕಸಭಾ ಚುನಾವಣೆಗೆ ನಿಂತ ಅಭ್ಯರ್ಥಿಯನ್ನು ಮನವೊಲಿಸಿ ಅವರನ್ನು ಅಖಾಡದಿಂದ ಹಿಂದೆ ಸರಿಸುವುದು ಸಣ್ಣ ಮಾತು ಅಲ್ಲವೇ ಅಲ್ಲ. ಆದರೆ ಈ ಕಾರ್ಯದಲ್ಲಿ ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿ ಪಾತ್ರ ದೊಡ್ಡದು. ಇದು ಕೈಲಾಶ್ ವಿಜಯವರ್ಗಿ ಅವರ ಭದ್ರ ಕೋಟೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ತಮ್ಮ ಕ್ಷೇತ್ರಕ್ಕೆ ಕರೆತರುವಲ್ಲಿ ಸಫಲವಾಗಿದ್ದು, ಪಕ್ಷಕ್ಕೆ ಆದ ದೊಡ್ಡ ಗೆಲುವೇ ಆಗಿದೆ.
ಸಿಎಂ ಮೋಹನ್ ಯಾದವ್ ಹೇಳಿದ್ದೇನು?
ಮಧ್ಯಪ್ರದೇಶದಲ್ಲಿ ಆದ ದೊಡ್ಡ ರಾಜಕೀಯ ಬೆಳವಣಿಗೆಯ ಬಗ್ಗೆ ಸಿಎಂ ಮೋಹನ್ ಯಾದವ್ ಮೌನ ಮುರಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದರೆ ನಾವೇನು ಮಾಡಲು ಸಾಧ್ಯ ಎಂದು ತಿಳಿಸಿದ್ದಾರೆ.
ಸೂರತ್‌ನಲ್ಲಿ ಆಗಿದ್ದೇನು?
ಸೂರತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ರದ್ದಾದ ನಂತರ, ಉಳಿದ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದರು. ಇದಾದ ಬಳಿಕ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಸಂಸದರಾಗಿ ಆಯ್ಕೆಯಾಗಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications