Lok Sabha Election 2024 Result: ಕರ್ನಾಟಕದ ಹಿರಿಯ, ಕಿರಿಯ ಸಂಸದರು ಇವರು
ಬೆಂಗಳೂರು, ಜೂನ್ 05: ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ಪಕ್ಷ ಎರಡಂಕಿ ಸ್ಥಾನಗಳನ್ನು ಗೆದ್ದಿಲ್ಲ. ಪ್ರತಿಪಕ್ಷವಾದ ಬಿಜೆಪಿಗೆ ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಸೀಟುಗಳ ಸಂಖ್ಯೆ ಕಡಿಮೆಯಾಗಿದೆ.
ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಸೀಟುಗಳಲ್ಲಿ ಜಯಗಳಿಸಿದೆ. ಹಲವು ಕ್ಷೇತ್ರಗಳಲ್ಲಿ ಎಲ್ಲಾ ಲೆಕ್ಕಾಚಾರಗಳು ಉಲ್ಟಾ ಆಗಿವೆ. ರಾಜ್ಯದಿಂದ 20 ಮಂದಿ ಹೊಸ ಸಂಸದರು ಈ ಬಾರಿ ಆಯ್ಕೆಯಾಗಿದ್ದಾರೆ.

ರಾಜ್ಯದ ಹಿರಿ, ಕಿರಿಯ ಸಂಸದರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಿರಿಯ ಮತ್ತು ಕಿರಿಯ ಸಂಸದರು ಆಯ್ಕೆಯಾಗಿ ಸಂಸತ್ ಪ್ರವೇಶ ಮಾಡಲಿದ್ದಾರೆ. ಮೂವರು ಮಹಿಳಾ ಸಂಸದರು ಸಹ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ಕ್ಷೇತ್ರದಲ್ಲಿ ಆಯ್ಕೆಯಾದ ಬಿಜೆಪಿಯ ಗೋವಿಂದ ಕಾರಜೋಳ ಅತಿ ಹಿರಿಯ ಸಂಸದರು. 73 ವರ್ಷದ ಗೋವಿಂದ ಕಾರಜೋಳ ಚುನಾವಣೆಯಲ್ಲಿ 684890 ಮತಗಳನ್ನು ಪಡೆದು, ಕಾಂಗ್ರೆಸ್‌ನ ಬಿ. ಎನ್. ಚಂದ್ರಪ್ಪ ವಿರುದ್ಧ (636769 ಮತ) ಜಯಗಳಿಸಿದ್ದಾರೆ.
ರಾಜ್ಯದ ಅತಿ ಕಿರಿಯ ಸಂಸದರು ಕಾಂಗ್ರೆಸ್‌ನ ಬೀದರ್ ಅಭ್ಯರ್ಥಿ ಸಾಗರ್ ಖಂಡ್ರೆ. 26 ವರ್ಷ ವಯಸ್ಸಿನ ಅವರು ಹಾಲಿ ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಸೋಲಿಸಿ ಮೊದಲ ಬಾರಿಗೆ ಸಂಸಸತ್ ಪ್ರವೇಶ ಮಾಡಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಗರ್ ಖಂಡ್ರೆ 666317 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಭಗವಂತ ಖೂಬಾ 537442 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ಕರ್ನಾಟಕದ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಇವರಿಗೆ ಸಹ 27 ವರ್ಷ. ಚುನಾವಣೆಯಲ್ಲಿ 713461 ಮತಗಳನ್ನು ಪಡೆದು ಪ್ರಿಯಾಂಕಾ ಜಾರಕಿಹೊಳಿ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ (622627) ಸೋಲಿಸಿದ್ದಾರೆ.
ಎಂಬಿಎ ಪದವೀಧರೆಯಾದ ಪ್ರಿಯಾಂಕಾ ಜಾರಕಿಹೊಳಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ. ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಅವರು 9 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಹೊಸ ಸಂಸದರು ರಾಜ್ಯದಿಂದ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಗೆದ್ದವರಲ್ಲಿ ಬೀದರ್‌ನ ಸಾಗರ್ ಖಂಡ್ರೆ, ರಾಯಚೂರಿನ ಕುಮಾರ ನಾಯಕ್, ಬಳ್ಳಾರಿಯ ಇ. ತುಕಾರಾಂ, ಚಿಕ್ಕೋಡಿಯ ಪ್ರಿಯಾಂಕಾ ಜಾರಕಿಹೊಳಿ, ದಾವಣಗೆರೆಯ ಪ್ರಭಾ ಮಲ್ಲಿಕಾರ್ಜುನ್, ಗುಲ್ಬರ್ಗದ ರಾಧಾಕೃಷ್ಣ, ಕೊಪ್ಪಳದ ರಾಜಶೇಖರ್ ಹಿಟ್ನಾಳ್ ಸೇರಿದ್ದಾರೆ.
ಹಾಸನದ ಶ್ರೇಯಸ್ ಪಟೇಲ್, ಚಾಮರಾಜನಗರದ ಸುನೀಲ್ ಬೋಸ್, ಬೆಂಗಳೂರು ಗ್ರಾಮಾಂತರ ಡಾ. ಸಿ. ಎನ್. ಮಂಜುನಾಥ್, ತುಮಕೂರಿನಲ್ಲಿ ವಿ. ಸೋಮಣ್ಣ, ಮೈಸೂರಿನಲ್ಲಿ ಯದುವೀರ್ ಒಡೆಯರ್, ಉಡುಪಿ-ಚಿಕ್ಕಮಗಳೂರು ಕೋಟ ಶ್ರೀನಿವಾಸ ಪೂಜಾರಿ, ಚಿತ್ರದುರ್ಗದ ಗೋವಿಂದ ಕಾರಜೋಳ ಮೊದಲ ಬಾರಿ ಸಂಸದರಾಗಿದ್ದಾರೆ.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್. ಚಿಕ್ಕಬಳ್ಳಾಪುರದ ಡಾ. ಕೆ. ಸುಧಾಕರ್. ಹಾವೇರಿಯ ಬಸವರಾಜ ಬೊಮ್ಮಾಯಿ, ಉತ್ತರ ಕನ್ನಡದ ವಿಶ್ವೇಶ್ವರ ಹೆಗಡೆ ಕಾಗೇರಿ, ದಕ್ಷಿಣ ಕನ್ನಡದ ಕ್ಯಾ. ಬ್ರಿಜೇಶ್ ಚೌಟ, ಕೋಲಾರದ ಮಲ್ಲೇಶ್ ಬಾಬು ಸಹ ಮೊದಲ ಬಾರಿಗೆ ಚುನಾಯಿತರಾಗಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications