ಮೋದಿಗಿಂತ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ರಾಹುಲ್‌ ಗಾಂಧಿ; ಪಡೆದ ಮತಗಳೆಷ್ಟು ಗೊತ್ತಾ?

ದೆಹಲಿ, ಜೂನ್‌ 05: ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಲಿರುವ ನರೇಂದ್ರ ಮೋದಿ ಅವರ ಹವಾ ದೇಶದಲ್ಲಿ ಕಡಿಮೆಯಾದಂತೆ ಕಾಣುತ್ತದೆ. 2024 ಲೋಕಸಭಾ ಚುನಾವಣೆಯಲ್ಲಿ ಎನ್‌ ಡಿಎ ಮೈತ್ರಿಕೂಟ 400 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು, ಆದರೆ, ಆ ನಿರೀಕ್ಷೆ ಹುಸಿಯಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ ಡಿಎ 292 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇಂಡಿಯಾ ಒಕ್ಕೂಟ 234 ಕ್ಷೇತ್ರಗಳನ್ನ ಗೆಲುವು ಸಾಧಿಸಿದೆ. ಎನ್‌ ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸದಲ್ಲಿತ್ತು. ಆದರೆ, 300 ರ ಗಡಿಯನ್ನು ದಾಟಿಲ್ಲ.

Lok Sabha Election Result Rahul Gandhi Gets More Votes Than Pm Modi

ಈ ಎಲ್ಲಾ ಅಂಕಿ ಅಂಶಗಳನ್ನ ಗಮನಿಸಿದರೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಕಡಿಮೆಯಾಗಿದೆಯೇ ಎಂಬ ಕುತೂಹಲ ಮೂಡಿದೆ. ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಮೊದಲ ಮತ ಎಣಿಕೆಯಲ್ಲಿ ಹಿನ್ನೆಲೆಯನ್ನ ಅನುಭವಿಸಿದ್ದು, ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಮೋದಿ ಈ ಬಾರಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮಾತ್ರ ಸ್ಪರ್ಧೆ ಮಾಡಿದ್ರ, ಮೋದಿ ಅವರು ವಾರಣಾಸಿಯಲ್ಲಿ 1,52,513 ಮತಗಳ ಅಂತದಲ್ಲಿ ಗೆಲುವು ಸಾಧಿಸಿದ್ದಾರೆ.

ಪ್ರಧಾನಿ ಮೋದಿಗೆ ಹೋಲಿಸಿದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷೇತ್ರವಾರು ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಬಾರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಎರಡು ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಿದ್ದು, ಎರಡು ಲೋಕಸಭಾ ಕ್ಷೇತ್ರದಲ್ಲೂ ರಾಹುಲ್‌ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಹೋಲಿಸಿದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷೇತ್ರವಾರು ಹೆಚ್ಚು ಮತಗಳನ್ನು ಪಡೆದಿದ್ದಾರೆ. ಅಲ್ಲದೇ ಗೆಲುವಿನ ಅಂತರವು ಮೋದಿಗಿಂತಲೂ ದುಪ್ಪಟ್ಟಿದೆ. ಮೋದಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸ್ಪರ್ಧೆ ನಡೆಸಿದ್ರೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಹುಲ್‌ ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಕೇರಳದ ವಯನಾಡ್‌ನಲ್ಲಿ ಸ್ಪರ್ಧೆ ಮಾಡಿದ್ದರು.

ಪ್ರಧಾನಿ ಮೋದಿ ವಾರಣಾಸಿಯಲ್ಲಿ 1,52,513 ಮತಗಳ ಅಂತದಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ರಾಯ್‌ಬರೇಲಿಯಲ್ಲಿ 3,90,030 ಮತಗಳು, ವಯನಾಡಿನಲ್ಲಿ 3,64,422 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಇಬ್ಬರು ನಾಯಕರು ಗೆಲುವು ಸಾಧಿಸಿದ್ದಾರೆ. ಆದರೆ, ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್‌ ಗೆಲುವು ಹೆಚ್ಚು ಪ್ರಬಲವಾಗಿದೆ.

ಇನ್ನೂ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಒಟ್ಟಾರೆ ಮತದಲ್ಲಿ ಶೇ 54.2 ರಷ್ಟು (6,12,970) ಮತ ಪಡೆದಿದ್ದಾರೆ. ರಾಹುಲ್‌ ಗಾಂಧಿ ರಾಯ್‌ಬರೇಲಿ ಕ್ಷೇತ್ರದ ಒಟ್ಟಾರೆ ಮತಗಳಲ್ಲಿ ಶೇ 66 ರಷ್ಟು (6,87,649) ಮತಗಳು ಮತಗಳನ್ನು ಪಡೆದಿದ್ದಾರೆ. ವಯನಾಡು ಕ್ಷೇತ್ರದಲ್ಲಿ ಒಟ್ಟಾರೆ ಮತಗಳಲ್ಲಿ ಶೇ. 59.69 (6,47,445) ಮತಗಳನ್ನು ಪಡೆದಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರದ ಮತಗಳ ಪೈಕಿ ನರೇಂದ್ರ ಮೋದಿಗಿಂತಲೂ ರಾಹುಲ್‌ ಗಾಂಧಿ ಹೆಚ್ಚು ಮತ ಪಡೆದಿದ್ದಾರೆ.

ಒಟ್ನಾಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಒಂದೇ ಕ್ಷೇತ್ರದಲ್ಲಿಸ್ಪರ್ಧಿಸಿದ್ದು, ಕಾಂಗ್ರೆಸ್‌ ನಾಯಕ ​ ರಾಹುಲ್‌ ಗಾಂಧಿ ಅವರು ಎರಡು ಕಡೆಗಳಲ್ಲಿ ಚುನಾವಣೆಗೆ ನಿಂತಿದ್ದು, ಎರಡು ಕ್ಷೇತ್ರದಲ್ಲೂ ಹೆಚ್ಚು ಮತಗಳ ಅಂತರದಲ್ಲಿ ಬಹುಮತ ಪಡೆದಯ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ. ಆದರೆ, ಈ ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಅವರು ಯಾವ ಕ್ಷೇತ್ರವನ್ನ ಬಿಟ್ಟುಕೊಡುತ್ತಾರೆ ಎಂಬುದನ್ನ ಕಾದುನೋಡ್ಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+