ಲೋಕಸಭೆ ಚುನಾವಣೆ 2019 ಫಲಿತಾಂಶ LIVE : ಮೋದಿ ಸುನಾಮಿಗೆ ವಿಪಕ್ಷ ಕಂಗಾಲು
ನವದೆಹಲಿ, ಮೇ 23 : ವಿರೋಧ ಪಕ್ಷಗಳ ನಿರೀಕ್ಷೆಗಳೆಲ್ಲ ಧೂಳಿಪಟವಾಗಿದ್ದು, ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದ ಎನ್ಡಿಎ ಮತ್ತೆ ಆಡಳಿತ ನಡೆಸಲಿದ್ದು, ನರೇಂದ್ರ ಮೋದಿಯವರು ಎರಡನೇ ಬಾರಿ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ.
ಭಾರತೀಯ ಜನತಾ ಪಕ್ಷ ಏಕಾಂಗಿಯಾಗಿ 300ರ ಗಡಿ ದಾಟಿದ್ದು, ಎನ್ಡಿಎ ಜೊತೆ 350ರ ಗಡಿಯನ್ನು ದಾಟಿದೆ. ಆದರೆ, ಕಾಂಗ್ರೆಸ್ 2014ರಲ್ಲಿ ಇದ್ಧ ಸ್ಥಿತಿಯಲ್ಲಿಯೇ ಇದ್ದು, ಹೀನಾಯ ಸೋಲು ಕಂಡಿದೆ.
ಮತಎಣಿಕೆ ಆರಂಭವಾದಾಗಿನಿಂದ ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬೀಳುವವರೆಗೆ ಸಮಗ್ರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಈ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಂಡಿದ್ದು, 28 ಕ್ಷೇತ್ರಗಳಲ್ಲಿ 25ರಲ್ಲಿ ಗೆದ್ದು ಬೀಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೊಂದು ಕ್ಷೇತ್ರದಲ್ಲಿ ಜಯಗಳಸಿದರೆ, ಒಂದು ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ.

ಗುಜರಾತ್, ಛತ್ತೀಸ್ ಗಢ, ಉತ್ತರಾಖಂಡ್, ಹಿಮಾಚಲ ಪ್ರದೇಶ, ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ ಕ್ಲೀನ್ ಸ್ವೀಪ್ ಮಾಡಿದೆ. ಕಳೆದ ಚುನಾವಣೆಯಲ್ಲಿಯೂ ಇದೇ ರೀತಿ ಫಲಿತಾಂಶ ಹೊರಬಿದ್ದಿತ್ತು. ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿಯೂ ಇದೇ ರೀತಿ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆದ್ದು ಸೋತಿದೆ.
ಎಆಹುಲ್ ಗಅಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಸುಳ್ಳು- ರಣದೀಪ್ ಸಿಂಗ್ ಸುರ್ಜೇವಾಲಾ
ಹದಿನಾರನೇ ಲೋಕಸಭೆಯನ್ನು ವಿಸರ್ಜಿಸುವ ಕೇಂದ್ರ ಸಚಿವ ಸಂಪುಟದ ಪ್ರಸ್ತಾಪಕ್ಕೆ ರಾಷ್ಟ್ರಪತಿಗಳಿಂದ ಅನುಮೋದನೆ
"ನಾನು ಇದನ್ನು ಒಪ್ಪುವುದಿಲ್ಲ" ಎಂಬ ಶೀರ್ಷಿಕೆಯೊಂದಿಗೆ ಪದ್ಯವೊಂದನ್ನು ಬರೆದು ಫಲಿತಾಂಶಕ್ಕೆ ಪ್ರತಿಕ್ರಿಯೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಪ್ರಾರಂಭ. ರಾಜ್ಯದಲ್ಲಿ ಎಚ್.ಕೆ.ಪಾಟೀಲ್ ರಾಜೀನಾಮೆ. ಗುಜರಾತ್, ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಭೋಪಾಲದ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ ಪ್ರಜ್ಞಾ ಸಿಂಗ್ ಠಾಕೂರ್. ಅವರು ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಅವರನ್ನು 3,64,822 ಮತಗಳ ಅಂತರದಿಂದ ಸೋಲಿಸಿ, ಭೋಪಾಲ್ ನ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.
ನವದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ ಅವರನ್ನು ಭೇಟಿಯಾದ ನರೇಂದ್ರ ಮೋದಿ, ಅಮಿತ್ ಶಾ
PM Narendra Modi: Called on respected Advani ji. The BJP’s successes today are possible because greats like him spent decades building the party and providing a fresh ideological narrative to the people. pic.twitter.com/1QebIbmm8V
— ANI (@ANI) May 24, 2019
11,000 ಮತಗಳಿಂದ ಒಡಿಶಾ ಪುರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರ ಸೋಲು. ಬಿಜೆಡಿಯ ಪಿನಾಕಿ ಮಿಶ್ರಾ ಗೆಲುವು
Top Fight - ಪುರಿ
ಪಿನಾಕಿ ಮಿಶ್ರಾ
(BJD)
Won
ಸತ್ಯ ಪ್ರಕಾಶ್ ನಾಯಕ್
(INC)
Lost
ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿಸದ ಕುವೈತ್ ರಾಜ ಸಬಾಹ್ ಅಲ್ ಅಹ್ಮದ್ ಅಲ್ ಜಾಬರ್ ಅಲ್ ಸಬಾಹ್
MEA: Emir of Kuwait Sabah Al-Ahmad Al-Jaber Al-Sabah(in file pic) sent a congratulatory message to PM Modi for his electoral victory. Crown Prince Sheikh Nawaf Al-Ahmad Al-Jaber Al-Sabah & the PM Sheikh Jaber Al-Mubarak Al-Hamad Al-Sabah sent similar messages to PM pic.twitter.com/3VtJ0Y1sof
— ANI (@ANI) May 24, 2019
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ ಕೆನಡಾ ಅಧ್ಯಕ್ಷ ಜಸ್ಟಿನ್ ಟ್ರುಡೋ
Canadian PM Justin Trudeau:On behalf of Govt of Canada,I congratulate PM Narendra Modi on his re-election.I look forward to continuing to work with him to improve lives of Canadians&Indians alike through education&innovation, investing in trade&investment,&fighting climate change pic.twitter.com/kGuWvoC1v7
— ANI (@ANI) May 24, 2019
ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ
ಮೇ 30 ರಂದು ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ನ ಜಗನ್ಮೋಹನ್ ರೆಡ್ಡಿ ಪ್ರಮಾಣವಚನ
Top Fight - ಪುರಿ
ಡಾ. ಸಂಬಿತ್ ಪಾತ್ರಾ
(BJP)
Won
ಸತ್ಯ ಪ್ರಕಾಶ್ ನಾಯಕ್
(INC)
Lost
Top Fight - ಲಖನೌ
ರಾಜನಾಥ್ ಸಿಂಗ್
(BJP)
Won
ಪೂನಂ ಸಿನ್ಹಾ
(SP)
Lost
Top Fight - ಫಿಲಿಬಿತ್
ವರುಣ್ ಗಾಂಧಿ
(BJP)
Won
ಹೇಮರಾಜ್ ವರ್ಮಾ
(SP)
Lost
Top Fight - ಅಜಂ ಗಢ
ಅಖಿಲೇಶ್ ಯಾದವ್
(SP)
Won
ದಿನೇಶ್ ಯಾದವ್ ನಿರಾಹುವಾ
(BJP)
Lost
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗಳಿಸಿದ ಮತಗಳು - 703,660. ಪ್ರತಿಸ್ಪರ್ಧಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಗಳಿಸಿದ ಮತಗಳು - 577,784. ಗೆಲುವಿನ ಅಂತರ - 125,876
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗಳಿಸಿದ ಮತಗಳು - 703,660. ಪ್ರತಿಸ್ಪರ್ಧಿಸ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಗಳಿಸಿದ ಮತಗಳು - 577,784. ಗೆಲುವಿನ ಅಂತರ - 125,876
ಸೋಲಿನ ಪರಾಮರ್ಶೆ ಮತ್ತು ಮುಂದಿನ ಚಟುವಟಿಕೆಗಳನ್ನು ನಿರ್ಧರಿಸಲು ಮೇ 25ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ದೆಹಲಿಯಲ್ಲಿ ಭೇಟಿಯಾಗಲಿದೆ.
Congress Working Committee to meet on May 25 in Delhi. pic.twitter.com/24DRLVOri9
— ANI (@ANI) May 23, 2019
ತಮ್ಮನ್ನು ಭರ್ಜರಿಯಾಗಿ ಗೆಲ್ಲಿಸಿದ ಬೆಂಗಳೂರು ಉತ್ತರ ಕ್ಷೇತ್ರದ ಮತದಾರರಿಗೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರು ಧನ್ಯವಾದ ಅರ್ಪಿಸಿದ್ದಾರೆ. ಅವರು ಕೃಷ್ಣ ಬೈರೇ ಗೌಡರನ್ನು ಸೋಲಿಸಿ ಸಂಸತ್ತು ಪ್ರವೇಶಿಸಿದ್ದಾರೆ.
I Bow to My voters of Bengaluru North Constituency . Your support is priceless . I am at your service as always . Thank u again 🙏🙏 ನನ್ನನ್ನು ಗೆಲ್ಲಿಸಿದ ಬೆಂಗಳೂರು ಉತ್ತರ ಕ್ಷೇತ್ರದ ಮತದಾರರುಗಳಿಗೆ ವಿನಂಬ್ರ ವಂದನೆಗಳು .ನಿಮ್ಮ ಬೆಂಬಲ ನನಗೆ ಶಕ್ತಿ ನೀಡಿದೆ . ನಿಮ್ಮ ಸೇವೆಗೆ ಸದಾ ನಿಮ್ಮೊಂದಿಗಿದ್ದೇನೆ
— Sadananda Gowda (@DVSBJP) May 23, 2019
ಉತ್ತರ ಪ್ರದೇಶದ ಮಥುರಾದಲ್ಲಿ ಬಿಜೆಪಿಯ ಹೇಮಾ ಮಾಲಿನಿ ಅವರು ನರೇಂದ್ರ ಸಿಂಗ್ ಅವರ ವಿರುದ್ಧ 2 ಲಕ್ಷ 90 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಕಾರ್ತಿ ಚಿದಂಬರಂ ಅವರು ಶಿವಗಂಗಾ ಲೋಕಸಭಾ ಕ್ಷೇತ್ರದಲ್ಲಿ 3,32,244 ಮತಗಳ ಅಂತರ ಕಾಪಾಡಿಕೊಂಡು ಭರ್ಜರಿ ಗೆಲುವಿನ ಹಾದಿಯಲ್ಲಿದ್ದಾರೆ.
ಪುರಿ ಜಗನ್ನಾಥನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ್ದರೂ ಮತಎಣಿಕೆಯಲ್ಲಿ ಬಿಜೆಪಿಯ ವಕ್ತಾರ ಸಂಬಿತ್ ಪಾತ್ರಾ ಅವರು ಪುರಿ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ.
ಅನಿರೀಕ್ಷಿತ ಸೋಲಿನಿಂದ ಕಂಗೆಟ್ಟಿರುವ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದು, ಅದನ್ನು ಸೋನಿಯಾ ಗಾಂಧಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications