Lok Sabha Election Results LIVE: ಶನಿವಾರ ಮುರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿ
ನವದೆಹಲಿ, ಜೂನ್ 4: ಏಪ್ರಿಲ್ 19ರಿಂದ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆದು ಇಂದು (ಜೂನ್ 4) ಫಲಿತಾಂಶ ಹೊರಬಿದಿದ್ದು. ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ 294 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 231 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಒಕ್ಕೂಟ ಹಾಗೂ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಇಂಡಿಯಾ ಒಕ್ಕೂಟ ನಡುವಿನ ಸೆಣಸಾಟಕ್ಕೆ ಅಂತಿಮ ತೆರೆ ಇಂದು ಸಿಕ್ಕಿದೆ. ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಮೋದಿ ಮತ್ತೊಮ್ಮ ಪ್ರಧಾನಿ ಗದ್ದುಗೆ ಏರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಶನಿವಾರ ಜೂನ್ 01ರಂದು ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಗಳು ಮತ್ತೊಮ್ಮೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರಿ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್ 52 ಸ್ಥಾನಗಳನ್ನು ಪಡೆದಿತ್ತು. ಡಿಎಂಕೆ 24 ಇತರರು 164 ಸ್ಥಾನಗಳನ್ನು ಪಡೆದಿತ್ತು.

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 282 ಕಾಂಗ್ರೆಸ್ 44 ಎಐಎಡಿಎಂಕೆ 37 ಇತರರು 180 ಸ್ಥಾನಗಳನ್ನು ಪಡೆದಿದ್ದವು. ಈ ಬಾರಿಯ ಚುನಾವಣಾ ಸಮೀಕ್ಷೆಗಳು ಎನ್‌ಡಿಎ ಒಕ್ಕೂಟಕ್ಕೆ 350ಕ್ಕೂ ಹೆಚ್ಚಿನ ಸ್ಥಾನಗಳನ್ನು ಬರಲಿದೆ ಎಂದು ತಿಳಿಸಿದೆ. ಈ ನಿಟ್ಟಿನಲ್ಲಿ ಈಗ ನಡೆಯುತ್ತಿರುವ ಮತ ಎಣಿಕೆಯು ಯಾರ ಕೈಗೈ ದೇಶದ ಅಧಿಕಾರ ಹೋಗುತ್ತದೆ ಎಂದು ತಿಳಿಸುತ್ತದೆ.
ಬಿಜೆಪಿ ನೇತೃತ್ವದ ಎನ್‌ಡಿಎ 2024 ರ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆದ್ದಿದ್ದು ಶನಿವಾರ ಹೊಸ ಸರ್ಕಾರವನ್ನು ರಚಿಸಲಿದೆ, ನರೇಂದ್ರ ಮೋದಿ ಅವರು ಐತಿಹಾಸಿಕ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ "ಜನರ ಇಚ್ಛೆಯನ್ನು ಬುಡಮೇಲು ಮಾಡುತ್ತಿದ್ದರೂ" ಸದ್ಯಕ್ಕೆ ಇಂಡಿಯಾ ಬಣವು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜೆಡಿಎಸ್ ನಾಯಕ, ಮಂಡ್ಯದಲ್ಲಿ ಭರ್ಜರಿ ಗೆಲುವ ಸಾಧಿಸಿರುವ ಎಚ್.ಡಿ. ಕುಮಾರಸ್ವಾಮಿ ಸಚಿನ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ನನಗೆ ಕೃಷಿ ಖಾತೆಯಲ್ಲಿ ಆಸಕ್ತಿ ಇದೆ ಎಂದಿದ್ದು, ಎನ್‌ಡಿಎ ಸರ್ಕಾರದಲ್ಲಿ ಕೃಷಿ ಸಚಿವರಾಗುವ ಉತ್ಸಾಹದಲ್ಲಿದ್ದಾರೆ.
ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸ್ಪಷ್ಟವಾದ ಬಹುಮತ ಇಲ್ಲದ ಕಾರಣ "ಸೂಕ್ತ ಸಮಯಕ್ಕಾಗಿ ಕಾಯಲು" ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿಕೆ ಕುನ್ಹಾಲಿಕುಟ್ಟಿ ಹೇಳಿದ್ದಾರೆ.
ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಅದರ ಮಿತ್ರಪಕ್ಷಗಳು ಮೋದಿಯವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿವೆ.
ಲೋಕಸಭೆ ಚುನಾವಣೆ ಫಲಿತಾಂಶವು ಬಿಜೆಪಿಗೆ ತಕ್ಕ ಉತ್ತರವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಇಂಡಿಯಾ ಒಕ್ಕೂಟದ ನಾಯಕರ ಸಭೆಯ ನಂತರ ಮಾತನಾಡಿದ ಖರ್ಗೆ, ಮೈತ್ರಿಯು ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಹೋರಾಟವನ್ನು ಮುಂದುವರೆಸುತ್ತದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಸ್ಪರ್ಧಿಸಿದ್ದಕ್ಕಾಗಿ ಭಾರತೀಯ ಬಣದ ಎಲ್ಲಾ ಪಾಲುದಾರರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಧನ್ಯವಾದ ಅರ್ಪಿಸಿದರು.
ಉತ್ತರಪ್ರದೇಶದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ
ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿದೆ ಎಂದು ನಾನು ಭಾವಿಸುತ್ತೇನೆ. ಈಗ ಎಸ್‌ಪಿ ನಾಯಕರ ಮೇಲೆ ಅವಲಂಬಿತವಾಗಿದೆ, ಆದರೆ ಉತ್ತರಪ್ರದೇಶದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ" ಎಂದು ಸಮಾಜವಾದಿ ಪಕ್ಷದ ನಾಯಕಿ ಡಿಂಪಲ್ ಯಾದವ್ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ 292 ಸ್ಥಾನಗಳಲ್ಲಿ ಜಯಗಳಿಸಿರುವ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆ ಮಾಡಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 8ರ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡುವ ನಿರೀಕ್ಷೆ ಇದೆ. 3ನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ
ಅಚ್ಚರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ, ಇಂಡಿಯಾ ಬ್ಲಾಕ್ ಮತ್ತು ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸಭೆ ಕರೆದಿವೆ.
ಲೋಕಸಭೆ ಚುನಾವಣೆ 2024ರಲ್ಲಿ ಇಂಡಿಯಾ ಮೈತ್ರಿಕೂಟ 234 ಸ್ಥಾನಗಳಲ್ಲಿ ಜಯಗಳಿಸಿದೆ. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಯ ಉದ್ಧವ್ ಠಾಕ್ರೆ ಹೇಳಿದ್ದಾರೆ. ದೆಹಲಿಯಲ್ಲಿ ಇಂದು 'ಇಂಡಿಯಾ' ಮೈತ್ರಿಕೂಟದ ಮಹತ್ವದ ಸಭೆ ನಡೆಯಲಿದೆ.
ಬಹುಪಾಲು ರಾಜ್ಯಗಳಲ್ಲಿ ಮೋದಿ ವಿರುದ್ಧದ ತೀರ್ಪು
ಇದು ತಮಿಳುನಾಡು ಮತ್ತು ಭಾರತದ ಬಹುಪಾಲು ರಾಜ್ಯಗಳಲ್ಲಿ ಮೋದಿ ವಿರುದ್ಧದ ತೀರ್ಪು. ತಮಿಳುನಾಡಿನ ಮಟ್ಟಿಗೆ ಹೇಳುವುದಾದರೆ, ಡಿಎಂಕೆ ನೇತೃತ್ವದ ಭಾರತ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿದೆ. ಇದು ವಾಸ್ತವವಾಗಿ 3 ವಿಷಯಗಳಿಗಾಗಿ - ಇದು ಬಿಜೆಪಿ ಮತ್ತು ಮೋದಿ ವಿರುದ್ಧದ ಮತ, ಇದು ತಮಿಳುನಾಡಿನಲ್ಲಿ ಉತ್ತಮ ಆಡಳಿತಕ್ಕಾಗಿ, ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಎಂದು ಕರೂರಿನ ಕಾಂಗ್ರೆಸ್ ಸಂಸದೆ ಎಸ್ ಜೋತಿಮಣಿ ಹೇಳಿದ್ದಾರೆ.
ಇಂಡಿಯಾ ಯಶಸ್ವಿಗೆ ಮುಸ್ಲಿಂ ಮತಗಳು ನೀರ್ಣಾಯಕ
ಇಂಡಿಯಾ ಮೈತ್ರಿಕೂಟಕ್ಕೆ ಹೆಚ್ಚು ಮತ ಬರಲು, ಯಶಸ್ಸಿಗೆ ಮುಸ್ಲಿಮರ ಮತಗಳು ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಇವರು ಬಿಜೆಪಿ ವಿರುದ್ಧ ನಿರ್ಣಾಯಕವಾಗಿ ಮತ ಚಲಾಯಿಸಿದ್ದಾರೆ. ಇತರ ಜಾತಿ ಸಮುದಾಯ ನಾಯಕರು ಇಂಡಿಯಾ ಒಕ್ಕೂಟ ಭಾಗವಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷಕ್ಕೆ ಮತ್ತು ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಸ್ಪಷ್ಟವಾದ ಲಾಭವನ್ನು ನೀಡುವ ಮೂಲಕ ಬಿಜೆಪಿಗೆ ಸ್ಪಷ್ಟ ಬಹುಮತವನ್ನು ಪಡೆಯುವುದನ್ನು ಈ ನೀರ್ಣಾಯಕ ಮತದಾರರು ತಡೆದರು.
ಮಹಾರಾಷ್ಟ್ರದ ಬೀಡ್ ಕ್ಷೇತ್ರದ ಕೊನೆಯ ಫಲಿತಾಂಶ ಘೋಷಣೆ ಆಗಿದೆ. ಅಲ್ಲಿ ಎನ್‌ಸಿಪಿ (ಶರದ್ ಪವಾರ್) ಅಭ್ಯರ್ಥಿ ಬಜರಂಗದಳ ಮನೋಹರ್ ಸೋನವಾನೆ ಅವರು ಬಿಜೆಪಿಯ ಪಂಕಜಾ ಮುಂಡೆ ಅವರನ್ನು 6,553 ಮತಗಳಿಂದ ಸೋಲಿಸಿದ್ದಾರೆ. ಇಲ್ಲಿ ಅಧಿಕಾರ ಎನ್‌ಸಿಪಿ ಪಾಲಾಗಿದೆ.
EC ಎಲ್ಲಾ ಲೋಕಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟ
ದೇಶದಲ್ಲಿ ಬಿಜೆಪಿ 240, ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಚುನಾವಣಾ ಆಯೋಗದ ಪ್ರಕಾರಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಎಲ್ಲ 543 ಸ್ಥಾನಗಳಲ್ಲಿ ಬಿಜೆಪಿ 240 ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿದೆ.
ದಲಿತ ರಾಜಕಾರಣಕ್ಕೆ ಹೊಸ ತಿರುವು
ಕಳೆದ 10 ವರ್ಷಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರ್ಚಸ್ಸು ಕುಸಿಯುತ್ತಿದ್ದು, ಭಾರತದ ದಲಿತ ರಾಜಕಾರಣವು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಚೊಚ್ಚಲ ಚುನಾವಣೆಯಲ್ಲಿ ಉತ್ತರ ಪ್ರಾಡ್‌ನ ನಗೀನಾದಿಂದ ಗೆಲ್ಲುವುದರೊಂದಿಗೆ ಹೊಸ ತಿರುವು ಪಡೆದುಕೊಂಡಿದೆ.
ಲೋಕಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಅಂತಿಮವಾಗಿ 241 ಸೀಟುಗಳಲ್ಲಿ ಗೆಲುವು ಸಾಧಿಸಿದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಅತಿ ದೊಡ್ಡ ಪಕ್ಷವಾಗಿದೆ.
ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, "ನನ್ನ ಸ್ನೇಹಿತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ನರೇಂದ್ರ ಮೋದಿ ಬಿಜೆಪಿಯ ವಿಜಯದ ನಂತರ ಮೂರನೇ ಅವಧಿಗೆ ಭಾರತಕ್ಕೆ ಸೇವೆ ಸಲ್ಲಿಸುವ ಅವರ ದೂರದೃಷ್ಟಿ ಮತ್ತು ಸಮರ್ಪಣೆಯನ್ನು ಜನರು ಅಂಗೀಕರಿಸಿದ್ದಾರೆ. ಹೊಸ ಸರ್ಕಾರದೊಂದಿಗೆ ನಮ್ಮ ಬಾಂಧವ್ಯವನ್ನು ಹೆಚ್ಚಿಸಲು ನಾನು ಎದುರು ನೋಡುತ್ತಿದ್ದೇನೆ." ಎಂದು ಹೇಳಿದ್ದಾರೆ
ಬಿಜೆಪಿ ಪಕ್ಷ ಬಹುಮತ ಪಡೆಯುವಲ್ಲಿ ವಿಫಲವಾಗಿರುವುದಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಚಕ್ರವರ್ತಿ ಈಗ ಬೆತ್ತಲಾಗಿದ್ದಾನೆ. ಬೇರೆ ಯಾರದ್ದೋ ಬೆಂಬಲದೊಂದಿಗೆ ಆತ ಈಗ ನಡೆಯಬೇಕಿದೆ. ಆತನ ಅಂಹಕಾರ ಮುರಿದು, ಸ್ಥಾನ ತೋರಿಸಿದ್ದಕ್ಕಾಗಿ ಇಂಡಿಯಾ ಮತ್ತು ಜವಾಬ್ದಾರಿಯುತ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮವಾಗಿ ಹೋರಾಡಿದ್ದೇವೆ. ಈ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಜೈ ಹಿಂದ್' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಬಿಜೆಪಿ ಆಡಳಿತದ ವಿರುದ್ಧ ಹಲವು ವಿಡಿಯೋಗಳ ಸರಣಿ ಮಾಡಿದ್ದ ಯೂಟ್ಯೂಬರ್ ಧ್ರುವ ರಾಥಿ, ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದು ಜನಸಾಮಾನ್ಯರ ಗೆಲುವು ಎಂದು ಹೇಳಿದ್ದಾರೆ.
ಎನ್‌ಡಿಎ ಸರ್ಕಾರವನ್ನು ರಚಿಸುತ್ತದೆ ಎಂಬುದು ಸ್ಪಷ್ಟವಾದ ನಂತರ ದೆಹಲಿಯ ಬಿಜೆಪಿಯ ಪ್ರಧಾನ ಕಚೇರಿಯಿಂದ ದೇಶವನ್ನುದ್ದೇಶಿಸಿ ನರೇಂದ್ರ ಮೋದಿ ಮಾತನಾಡಿ, ಮತದಾರರಿಗೆ ಧನ್ಯವಾದ ಅರ್ಪಿಸಿದರು. ಇಂದಿನ ಗೆಲುವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ವಿಜಯವಾಗಿದೆ ಎಂದು ಹೇಳಿದರು.
ಇಂಡಿಯಾ ಒಕ್ಕೂಟವು ಎನ್‌ಡಿಎಗೆ ಪೈಪೋಟಿ ಕೊಟ್ಟ ನಂತರ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಇಂದಿನ ಜನಾದೇಶವು ದೇಶದ ಜನರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ದೇಶವನ್ನು ನಡೆಸಲು ಬಯಸುವುದಿಲ್ಲ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 'ಜೈ ಜಗನ್ನಾಥ' ಘೋಷಣೆಯೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು, ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳನ್ನು ಗೆದ್ದಿದ್ದು ಸರ್ಕಾರ ರಚನೆ ಮಾಡಲಿದೆ.
ಮಾಜಿ ಕ್ರಿಕೆಟಿಗ ಯೂಸೂಫ್ ಪಠಾಣ್ ಗೆಲುವು
ಲೋಕಸಭೆಯ ವಿರೋಧ ಪಕ್ಷ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಮಾಜಿ ಕ್ರಿಕೆಟಿಗ ಯೂಸೂಫ್ ಪಠಾಣ್ ಅವರು ಸೋಲಿಸಿದ್ದಾರೆ.
Top Fight - ಧರ್ಮಪುರಿ
ಎ. ಮಣಿ
(DMK)
Won
ಅಶೋಕನ್
(AIADMK)
Lost
Top Fight - ಮುಂಬೈ ಉತ್ತರ ಮಧ್ಯ
ವರ್ಷಾ ಏಕನಾಥ್ ಗಾಯಕವಾಡ
(ಕಾಂಗ್ರೆಸ್)
Won
ಅಡ್ವ್ ಉಜ್ವಲ್ ನಿಕಮ್
(ಬಿಜೆಪಿ)
Lost
Top Fight - ಭಟಿಂಡಾ
ಹರ್ಸಿಮ್ರತ್ ಕೌರ್ ಬಾದಲ್
(ಎಸ್ಎಡಿ)
Won
ಜೀತ್ಮೊಹಿಂದರ್ ಸಿಂಗ್ ಸಿಧು
(ಕಾಂಗ್ರೆಸ್)
Lost
Top Fight - ಮಥುರಾ
ಶ್ರೀಮತಿ. ಹೇಮಾ ಮಾಲಿನಿ
(ಬಿಜೆಪಿ)
Won
ಮುಖೇಶ್ ಧಂಗರ್
(ಕಾಂಗ್ರೆಸ್)
Lost
Top Fight - ರಾಯ್ ಬರೇಲಿ
ರಾಹುಲ್ ಗಾಂಧಿ
(ಕಾಂಗ್ರೆಸ್)
Won
ದಿನೇಶ್ ಪ್ರತಾಪ್ ಸಿಂಗ್
(ಬಿಜೆಪಿ)
Lost
ಇಂಡಿಯಾ ಒಕ್ಕೂಟ ಕೂಡ ಸರ್ಕಾರ ರಚನೆ ಮಾಡಲು ಪ್ರಯತ್ನ ಮಾಡುವುದು ಎಂದು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೂಚನೆ ಕೊಟ್ಟಿದ್ದಾರೆ. ಮಾಜಿ ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ ಮತ್ತು ಜನತಾ ದಳ ಯುನೈಟೆಡ್ ಪಕ್ಷಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡುವುದಾಗಿ ಹೇಳಿದ್ದಾರೆ.












Click it and Unblock the Notifications