ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲ 4 ಹಂತಕ್ಕೆ 377 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

|
Google Oneindia Kannada News

ನವದೆಹಲಿ, ಏಪ್ರಿಲ್ 03: ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಮಂಗಳವಾರದಂದು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದೆ. ತ್ರಿಸ್ಸೂರ್ ಕ್ಷೇತ್ರದಿಂದ ಸೂಪರ್ ಸ್ಟಾರ್ ಸುರೇಶ್ ಗೋಪಿಗೆ ಟೀಕೆಟ್ ನೀಡಲಾಗಿದೆ. ಉಳಿದಂತೆ ಗುಜರಾತಿನ ಮಹೆಸಾನಾ ಹಾಗೂ ಸೂರತ್ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಗುಜರಾತಿನ ಮಹೆಸಾನ ಕ್ಷೇತ್ರದಿಂದ ಶಾರದಾ ಬೆನ್ ಪಟೇಲ್ ಹಾಗೂ ಸೂರತ್ ಕ್ಷೇತ್ರದಿಂದ ದರ್ಶನಾ ಜರ್ದೋಶ್ ಅವರಿಗೆ ಟಿಕೆಟ್ ಸಿಕ್ಕಿದೆ. ಈ ಮೂಲದ ಏಳು ಹಂತದ ಚುನಾವಣೆಯಲ್ಲಿ ಮೊದಲ ನಾಲ್ಕು ಹಂತಕ್ಕೆ ಎಲ್ಲಾ ಅಭ್ಯರ್ಥಿಗಳನ್ನು ಬಿಜೆಪಿ ಹೆಸರಿಸಿದೆ.

Lok Sabha elections 2019: BJP announces 377 candidates for first 4 phases

ಒಟ್ಟು 377 ಅಭ್ಯರ್ಥಿಗಳನ್ನು ಹೆಸರಿಸಲಾಗಿದ್ದು, ಒಡಿಶಾದ 11 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಏಪ್ರಿಲ್ 11ರಿಂದ ಮೇ 19 ರ ವರೆಗೆ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಹೊರಬರಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಸಿ ಕ್ಷೇತ್ರದಿಂದ ಈ ಬಾರಿಯೂ ಸಂಸತ್ತಿಗೆ ಆಯ್ಕೆ ಬಯಸಿದ್ದಾರೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎಲ್ ಕೆ ಅಡ್ವಾಣಿ ಅವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉತ್ತರಪ್ರದೇಶದ ಲಕ್ನೋ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.(ಪಿಟಿಐ)

English summary
The BJP on Tuesday announced the names of three more Lok Sabha candidates, fielding Malayalam film actor Suresh Gopi from Thrissur in Kerala. Besides this, the party has announced two more candidates from Gujarat -- Sharda Ben Patel from Mahesana and Darshana Jardosh from Surat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X