ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಭಾರೀ ಆಘಾತ?!
Recommended Video

ನವದೆಹಲಿ, ಡಿಸೆಂಬರ್ 12: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಸದ್ಯದ ಟ್ರೆಂಡ್ ಹೀಗೆಯೇ ಮುಂದುವರಿದರೆ 2019 ರ ಲೋಕಸಭಾ ಚುನಾವಣೆಯ ಹೊತ್ತಿಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಇಂಥದೇ ಆಘಾತ ಎದುರಿಸಬೇಕಾಗಬಹುದು ಎಂಬುದು ಲೆಕ್ಕಾಚಾರ.
2014 ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಯಲ್ಲಿ ಏಕಾಏಕಿ ಕುಸಿತ ಕಂಡುಬರಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.
ಬಿಜೆಪಿ ಆಡಳಿತದಲ್ಲಿದ್ದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಈ ರಾಜ್ಯಗಳು ಬಿಜೆಪಿಗೆ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೂ ಮಹತ್ವದವು. ಆದರೆ ಇಲ್ಲಿ ಬಿಜೆಪಿಯ ಕಳಪೆ ಪ್ರದರ್ಶನ ಮತ್ತು ಛತ್ತೀಸ್ ಗಢದ ಹೀನಾಯ ಸೋಲು ಲೋಕಸಭಾ ಚುನಾವಣೆಯ ದಿಕ್ಕನ್ನೇ ಬದಲಿಸಬಹುದು ಎಂದು ಅಂದಾಜಿಸಲಾಗಿದೆ.

ರಾಜಸ್ಥಾನದಲ್ಲಿ ಎಷ್ಟು ಸೀಟು?
ಇದೇ ರೀತಿಯ ಟ್ರೆಂಡ್ ಮುಂದುವರಿದರೆ ರಾಜಸ್ಥಾನದ ಒಟ್ಟು 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 13 ಕ್ಷೇತ್ರಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್ 12 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ ಕಾಂಗ್ರೆಸ್ಸಿಗಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದರೂ ಇದು ಬಿಜೆಪಿಗೆ ಹಿನ್ನಡೆಯೇ. ಏಕೆಂದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜಸ್ಥಾನದ ಎಲ್ಲಾ 25 ಕ್ಷೇತ್ರಗಳಲ್ಲೂ ಗೆದ್ದು, ಕ್ಲೀನ್ ಸ್ವೀಪ್ ಮಾಡಿತ್ತು! ಆದರೆ ಈ ಬಾರಿ 12 ಕ್ಕು ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಒಂದು ಸ್ಥಾನಗಳಲ್ಲೂ ಗೆದ್ದಿರದ ಕಾಂಗ್ರೆಸ್ ಈ ಬಾರಿ 12ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬುದು ಅಂದಾಜು.

ಮಧ್ಯಪ್ರದೇಶದ ಕತೆ ಏನು?
ಮಧ್ಯಪ್ರದೇಶದಲ್ಲಿ ಒಟ್ಟು 29 ಲೋಕಸಭಾ ಕ್ಷೇತ್ರಗಳಿವೆ. ಇವುಗಳಲ್ಲಿ 2014 ರಲ್ಲಿ ಬಿಜೆಪಿ 27 ಸ್ಥಾನ ಗೆದ್ದರೆ, ಕಾಂಗ್ರೆಸ್ ಕೇವಲ 2 ಸ್ಥಾನ ಗೆದ್ದಿತ್ತು. ಆದರೆ ಪಂಚರಾಜ್ಯ ಫಲಿತಾಂಶದ ಟ್ರೆಂಡ್ ಮುಂದುವರಿದರೆ, ಮಧ್ಯಪ್ರದೇಶದಲ್ಲಿಬಿಜೆಪಿ 10 ಸ್ಥಾನ ಕಳೆದುಕೊಂಡು 17 ಮತ್ತು ಕಾಂಗ್ರೆಸ್ 12 ಸ್ಥಾನ ಪಡೆಯಲಿವೆ.

ಛತ್ತೀಸ್ ಗಢದಲ್ಲಿ ಹೀನಾಯ ಸೋಲು?
ವಿಧಾನಸಭಾ ಚುನಾವಣೆಯಂತೆಯೇ, ಲೋಕಸಭಾ ಚುನಾವಣೆಯಲ್ಲೂ ಛತ್ತೀಸ್ ಗಢದಲ್ಲಿ ಬಿಜೆಪಿ ಹೀನಾಯ ಸೋಲು ಕಾಣಲಿದೆ. ಒಟ್ಟು 11 ಸ್ಥಾನಗಳಲ್ಲಿ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲ್ಲಲಿದೆ, ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 10 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂಬುದು ಸದ್ಯದ ಟ್ರೆಂಡ್ ಪ್ರಕಾರ ಮಾಡಿದ ಅಂದಾಜು ಲೆಕ್ಕಾಚಾರ.

ಪಂಚರಾಜ್ಯ ಫಲಿತಾಂಶ
ಛತ್ತೀಸ್ ಗಢ, ತೆಲಂಗಾಣ, ಮಿಜೋರಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿ.11 ರಂದು ಹೊರಬದ್ದಿದ್ದು, ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ಪಕ್ಷ ಗೆದ್ದಿದ್ದರೆ, ಮಿಜೋರಾಂ ನಲ್ಲಿ ಎಂಎನ್ ಎಫ್ ಜಯಗಳಿಸಿದೆ. ಉಳಿದಂತೆ ಬಿಜೆಪಿ ಆಡಳಿತದಲ್ಲಿದ್ದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ಮೂರೂ ರಾಜ್ಯಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications