ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿ ವೋಟರ್-ಎಬಿಪಿ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿಗೆ 3 ಸ್ಥಾನ ಕುಸಿತ

|
Google Oneindia Kannada News

ನವದೆಹಲಿ, ಜನವರಿ 24: ಲೋಕಸಭೆ ಚುನಾವಣೆ 2019ರ ಚುನಾವಣಾ ಪೂರ್ವ ಸಮೀಕ್ಷೆಯನ್ನು ಸಿ ವೋಟರ್ ನಡೆಸಿದ್ದು, ಎಬಿಪಿ ಸುದ್ದಿ ವಾಹಿನಿ ಈ ಸಮೀಕ್ಷೆಯ ಫಲಿತಾಂಶವನ್ನು ಪ್ರಕಟಿಸುತ್ತಿದೆ.

ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮುನ್ನಡೆ ಪಡೆದುಕೊಳ್ಳಲಿವೆ.

ಸಿ ವೋಟರ್ಸ್-ಎಬಿಪಿ ಸಮೀಕ್ಷೆ: ಉ. ಪ್ರದೇಶದಲ್ಲಿ ಬಿಜೆಪಿಗೆ 25 ಸ್ಥಾನ ಸಿ ವೋಟರ್ಸ್-ಎಬಿಪಿ ಸಮೀಕ್ಷೆ: ಉ. ಪ್ರದೇಶದಲ್ಲಿ ಬಿಜೆಪಿಗೆ 25 ಸ್ಥಾನ

ಒಟ್ಟು 22,309 ಸಮೀಕ್ಷೆ ಮಾದರಿಗಳನ್ನು ಬಳಸಿಕೊಳ್ಳಲಾಗಿದ್ದು, 2018ರ ಡಿಸೆಂಬರ್‌ನಿಂದ ಜನವರಿ ಮೂರನೇ ವಾರದವರೆಗೆ ಸಮೀಕ್ಷೆ ನಡೆಸಲಾಗಿದೆ. ಎಲ್ಲ ರಾಜ್ಯಗಳಲ್ಲಿನ ಎಲ್ಲ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ಸಮೀಕ್ಷೆ ನಡೆಸಲಾಗಿದೆ.

lok sabha lections 2019 c voter abp news desh ka mood survey karnataka bjp 14 congress 11 jds 3 seats

ದೇಶದಲ್ಲಿ ಕಳೆದ 24 ವರ್ಷಗಳಲ್ಲಿಯೇ ನಡೆದ ಅತಿ ದೊಡ್ಡ ಹಾಗೂ ನಿಖರ ಸ್ವತಂತ್ರ ಚುನಾವಣಾ ಪೂರ್ವ ಮಾದರಿ ಸಮೀಕ್ಷೆಯಾಗಿದೆ ಎಂದು ಸಿ ವೋಟರ್ ಹೇಳಿಕೊಂಡಿದೆ.

ಎಬಿಪಿ ನ್ಯೂಸ್ ಮತ್ತು ಸಿವೋಟರ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಕರ್ನಾಟಕದ ಫಲಿತಾಂಶ ಇಲ್ಲಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 18ಸ್ಥಾನ : ಇಂಡಿಯಾ ಟುಡೇ ಸಮೀಕ್ಷೆ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 18ಸ್ಥಾನ : ಇಂಡಿಯಾ ಟುಡೇ ಸಮೀಕ್ಷೆ

ರಾಜ್ಯದಲ್ಲಿ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ 28 ಲೋಕಸಭೆ ಕ್ಷೇತ್ರಗಳ ಪೈಕಿ 17ರಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು. ಆದರೆ, ಈ ಬಾರಿ ಚುನಾವಣೆಯಲ್ಲಿ ಅದು ಮೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ.

lok sabha lections 2019 c voter abp news desh ka mood survey karnataka bjp 14 congress 11 jds 3 seats

ಇಂಡಿಯಾ ಟುಡೆ ಸಮೀಕ್ಷೆ: ಲೋಕಸಭೆ ಚುನಾವಣೆ ಯಾವ ಪಕ್ಷಕ್ಕೆ ಗೆಲುವು? ಇಂಡಿಯಾ ಟುಡೆ ಸಮೀಕ್ಷೆ: ಲೋಕಸಭೆ ಚುನಾವಣೆ ಯಾವ ಪಕ್ಷಕ್ಕೆ ಗೆಲುವು?

ಬಿಜೆಪಿ 14 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 11 ಕ್ಷೇತ್ರಗಳಿಗೆ ಸಾಮರ್ಥ್ಯ ವೃದ್ಧಿಸಿಕೊಳ್ಳಲಿದೆ. ಎರಡು ಕ್ಷೇತ್ರದಲ್ಲಿ ಗೆದ್ದಿದ್ದ ಜೆಡಿಎಸ್, ಈ ಬಾರಿ ಮೂರಕ್ಕೇರಲಿದೆ ಎಂದು ಸಮೀಕ್ಷೆ ತಿಳಿಸಲಿದೆ.

English summary
ABP News and C Voter have conducted 'Desh Ka Mood' (Mood of the Nation) survey. Here is the result of Karnataka's 28 Lok Sabha seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X