ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ : ಕೆ.ಸಿ.ವೇಣುಗೋಪಾಲ್‌ಗೆ ಟಿಕೆಟ್ ಇಲ್ಲ

Recommended Video

      Lok Sabha Elections 2019 : ಲೋಕಸಭಾ ಚುನಾವಣೆ 2019ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ

      ಬೆಂಗಳೂರು, ಮಾರ್ಚ್ 20 : ಲೋಕಸಭಾ ಚುನಾವಣೆ 2019ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದುವರೆಗೂ ಪಕ್ಷ 146 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

      ಮಂಗಳವಾರ 9 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇವರಲ್ಲಿ 7 ಅಭ್ಯರ್ಥಿಗಳು ಕೇರಳ ರಾಜ್ಯದವರು, ಇಬ್ಬರು ಅಭ್ಯರ್ಥಿಗಳು ಮಹಾರಾಷ್ಟ್ರದವರಾಗಿದ್ದಾರೆ.

      ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಮತ್ತು ಕೇರಳದ ಅಲಪ್ಪುವಾ ಕ್ಷೇತ್ರದ ಹಾಲಿ ಸಂಸದ ಕೆ.ಸಿ.ವೇಣುಗೋಪಾಲ್ ಅವರಿಗೆ ಟಿಕೆಟ್ ನೀಡಿಲ್ಲ. 'ಈ ಬಾರಿಯ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ' ಎಂದು ಕೆಲವು ದಿನಗಳ ಹಿಂದೆ ಕೆ.ಸಿ.ವೇಣುಗೋಪಾಲ್ ಹೇಳಿದ್ದರು.

      congress

      ಕೇರಳದಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 23ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಅಲಪ್ಪುವಾ ಕ್ಷೇತ್ರದಲ್ಲಿ ಸಿಪಿಐಎಂ ಪ್ರಭಾವಿ ಶಾಸಕ ಎ.ಎಂ.ಆರೀಫ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

      ಲೋಕಸಭಾ ಚುನಾವಣೆಗೆ ಇದು ಕಾಂಗ್ರೆಸ್ ಬಿಡುಗಡೆ ಮಾಡುತ್ತಿರುವ 6ನೇ ಪಟ್ಟಿಯಾಗಿದೆ. ಇದುವರೆಗೂ ಕಾಂಗ್ರೆಸ್ 146 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

      ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದೆ. ಮಾ.21ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ.

      ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+