ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮಿತ್ ಶಾ ಕೊಲೆ ಆರೋಪಿ ಹೇಳಿಕೆ: ರಾಹುಲ್ ಗಾಂಧಿಗೆ ಕ್ಲೀನ್ ಚಿಟ್

|
Google Oneindia Kannada News

Recommended Video

Lok Sabha Elections 2019: ಅಮಿತ್ ಶಾ ಅವರನ್ನು 'ಕೊಲೆ ಆರೋಪಿ' ಎಂದು ಉಲ್ಲೇಖಿಸಿದ್ದ ರಾಹುಲ್ ಗಾಂಧಿ

ನವದೆಹಲಿ, ಮೇ 2: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು 'ಕೊಲೆ ಆರೋಪಿ' ಎಂದು ಉಲ್ಲೇಖಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.

ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಮೋದಿ, ಶಾ ವಿರುದ್ಧ ದೂರು: ಮೇ 6ರ ಒಳಗೆ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸೂಚನೆ ಮೋದಿ, ಶಾ ವಿರುದ್ಧ ದೂರು: ಮೇ 6ರ ಒಳಗೆ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸೂಚನೆ

ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಏಪ್ರಿಲ್ 23ರಂದು ನಡೆದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು, 'ಕೊಲೆ ಪ್ರಕರಣದ ಆರೋಪಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ. ವಾಹ್! ಎಷ್ಟು ವೈಭವೋಪೇತ... ಜೇ ಶಾ ಅವರ ಹೆಸರು ಕೇಳಿದ್ದೀರಾ? ಅವರೊಬ್ಬ ಜಾದೂಗಾರ. ಮೂರೇ ತಿಂಗಳಿನಲ್ಲಿ 50 ಸಾವಿರ ರೂಪಾಯಿಯನ್ನು 80 ಕೋಟಿಯನ್ನಾಗಿ ಪರಿವರ್ತಿಸಿದ್ದರು' ಎಂದು ರಾಹುಲ್ ಗಾಂಧಿ ಹೇಳಿದ್ದರು.

 Lok Sabha elections 2019 EC clean chit to Rahul Gandhi on Murder accused Amit Shah comment

ಇದರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಜತೆಗೆ ಬಿಜೆಪಿ ಸದಸ್ಯರೊಬ್ಬರು ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣವನ್ನೂ ದಾಖಲಿಸಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಮೋದಿಗೆ ಕ್ಲೀನ್ ಚಿಟ್ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗದಿಂದ ಮೋದಿಗೆ ಕ್ಲೀನ್ ಚಿಟ್

ಸೊಹ್ರಾಬುದ್ದೀನ್ ಶೇಕ್‌ ನಕಲಿ ಎನ್‌ಕೌಂಟರ್ ಆರೋಪ ಪ್ರಕರಣದಲ್ಲಿ ಅಮಿತ್ ಶಾ ಅವರನ್ನು ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯ 2015ರ ಜನವರಿಯಲ್ಲಿ ತೀರ್ಪು ನೀಡಿತ್ತು. ಆದರೆ, ಅಮಿತ್ ಶಾ ಅವರನ್ನು ರಾಹುಲ್ ಗಾಂಧಿ ಕೊಲೆ ಆರೋಪಿ ಎಂದು ಕರೆದಿದ್ದಾರೆ ಎಂದು ಕೃಷ್ಣವದನ್ ಬ್ರಹ್ಮಭಟ್ ಎಂಬುವವರು ದೂರು ನೀಡಿದ್ದರು.

English summary
Lok Sabha elections 2019: Election Commission gave clean chit to Congress President Rahul Gandhi on the complaint for calling BJP President Amit Shah a murder accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X