ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕ ಕದನ LIVE: ತೃಣಮೂಲ ಕಾಂಗ್ರೆಸ್‌ ಶಾಸಕ ಅರ್ಜುನ್ ಸಿಂಗ್ ಬಿಜೆಪಿ ಸೇರ್ಪಡೆ

|
Google Oneindia Kannada News

ನವದೆಹಲಿ, ಮಾರ್ಚ್‌ 14: ಲೋಕಸಭಾ ಚುನಾವಣೆ ಕದನ ದಿನೇ-ದಿನೇ ಬಣ್ಣ ಪಡೆದುಕೊಂಡು ರಂಗೇರುತ್ತಿದೆ. ಬಿಜೆಪಿ-ಕಾಂಗ್ರೆಸ್‌ ಜೊತೆಗೆ ಮಹಾಘಟಬಂದನ್‌ ಈ ಬಾರಿಯ ಸಾರ್ವತ್ರಿಕ ಚುನಾವಣೆಗೆ ಜಿದ್ದಾ-ಜಿದ್ದಿತನ ಪ್ರಾಪ್ತಿಸಿದೆ.

ನಿನ್ನೆಯಷ್ಟೆ ಕಾಂಗ್ರೆಸ್‌ನ ಮಹತ್ವದ ಕಾರ್ಯಕಾರಿಣಿ ಸಭೆ ನಡೆದಿದ್ದು, ಬಿಜೆಪಿಯನ್ನು ಸೋಲಿಸುವ ಏಕೈಕ ಗುರಿಯನ್ನು ಕಾಂಗ್ರೆಸ್‌ ನಿನ್ನೆ ಘೋಷಿಸಿದೆ. ಪ್ರಿಯಾಂಕಾ ಗಾಂಧಿ ತಮ್ಮ ಮೊದಲ ರಾಜಕೀಯ ಭಾಷಣವನ್ನು ನಿನ್ನೆ ಮಾಡಿದ್ದು ಸಹ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷಗಳು ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿವೆ. ಕಾಂಗ್ರೆಸ್‌ 20 ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದರೆ. ಜೆಡಿಎಸ್‌ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

Lok sabha elections 2019 live political developments

ಪ್ರತಿದಿನ ನಡೆಯುವ ಲೋಕಸಭೆಗೆ ಸಂಬಂಧಿಸಿದ ಎಲ್ಲ ಸುದ್ದಿಗಳನ್ನು ಈ ಲೈವ್ ಪುಟದಲ್ಲಿ ನೀಡಲಾಗಿದೆ.

Newest FirstOldest First
2:20 PM, 14 Mar

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಘೋಷಣೆ. ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಣೆ, ಪಕ್ಷೇತರವಾಗಿ ಸ್ಪರ್ಧಿಸುವ ಸಾಧ್ಯತೆ.
2:08 PM, 14 Mar

ದೆಹಲಿಯ ಕಾಂಗ್ರೆಸ್ ಮುಖಂಡ ಟಾಮ್ ವಡಕ್ಕಮ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಪಾಕಿಸ್ತಾನದ ಮೇಲೆ ದಾಳಿ ಆದಾಗ ಕಾಂಗ್ರೆಸ್ ನಡೆದುಕೊಂಡ ರೀತಿ ನನಗೆ ಸರಿ ಬರಲಿಲ್ಲ ಅದಕ್ಕಾಗಿ ಪಕ್ಷ ತ್ಯಜಿಸಿದೆ ಎಂದು ಅವರು ಹೇಳಿದ್ದಾರೆ.
2:03 PM, 14 Mar

ಬಿಹಾರ ಬಿಜೆಪಿ ಚುನಾವಣಾ ಸಮಿತಿಯು ಇಂದು ಪಾಟ್ನಾದಲ್ಲಿ ಸಭೆ ನಡೆಸಿದೆ. ಬಿಹಾರದಲ್ಲಿ ಬಿಜೆಪಿಯು ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.
2:01 PM, 14 Mar

ತೃಣಮೂಲ ಕಾಂಗ್ರೆಸ್‌ ಶಾಸಕ ಅರ್ಜುನ್ ಸಿಂಗ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ವಿವಿಧ ರಾಜ್ಯಗಳಲ್ಲಿ ಬಿಜೆಪಿಗೆ ಸೇರ್ಪಡೆ ಆಗುತ್ತಿರುವ ಶಾಸಕರ ಸಂಖ್ಯೆ ದಿನೇ-ದಿನೇ ಹೆಚ್ಚಾಗುತ್ತಿದೆ.
12:05 PM, 14 Mar

ಕೇರಳದ ತ್ರಿಶೂರ್‌ಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕನಿಷ್ಟ ಆರ್ಥಿಕ ಭದ್ರತೆಯನ್ನು ಎಲ್ಲ ಬಡವರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.
10:56 AM, 14 Mar

ಪವನ್ ಕಲ್ಯಾಣ್ ಸ್ಥಾಪಿತ ಜನಸೇನಾ ಪಕ್ಷವು ವಿಧಾನಸಭಾ ಚುನಾವಣೆಗೆ 32 ಅಭ್ಯರ್ಥಿಗಳು ಹಾಗೂ ಲೋಕಸಭೆ ಚುನಾವಣೆಗೆ 4 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
10:48 AM, 14 Mar

ಆಂಧ್ರ ಪ್ರದೇಶದ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆರಹಿತ 16 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ.
Advertisement
10:46 AM, 14 Mar

ಪ್ರಿಯಾಂಕಾ ಗಾಂಧಿ ಅವರು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಆಗಿದ್ದಾರೆ. ಈ ನಡೆಯು ಎಸ್‌, ಬಿಎಸ್‌ಪಿಯ ದಲಿತ ರಾಜಕಾರಣಕ್ಕೆ ಪ್ರಿಯಾಂಕಾ ನೀಡಲು ಪ್ರಾರಂಭಿಸಿರುವ ಪೆಟ್ಟಿನ ಮೊದಲ ಹೊಡೆತ ಎಂದು ಬಿಂಬಿಸಲಾಗುತ್ತಿದೆ.

English summary
Lok Sabha Elections 2019: Political developments LIVE updates in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X