• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಜತೆ ವಿಧಾನಸಭೆ ಚುನಾವಣೆ ನಡೆಯಲ್ಲ

|

ಲೋಕಸಭೆ ಚುನಾವಣೆ ಜತೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಧಾನಸಭಾ ಚುನಾವಣೆ ನಡೆಯುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಭಾನುವಾರ ಹೇಳಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆ ಮಾತ್ರ ನಡೆಯಲಿದೆ. ಆ ನಂತರ ಭದ್ರತಾ ವ್ಯವಸ್ಥೆ ಪರಿಶೀಲಿಸಲು ಮೂವರನ್ನು ನೇಮಿಸಿ, ಅಲ್ಲಿ ವಿಧಾನಸಭಾ ಚುನಾವಣೆ ನಡೆಸಲಾಗುವುದು ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಆರು ಲೋಕಸಭಾ ಸ್ಥಾನಗಳಿಗೆ ಐದು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು. ಅನಂತನಾಗ್ ಲೋಕಸಭಾ ಕ್ಷೇತ್ರದಲ್ಲಿ ಭದ್ರತಾ ದೃಷ್ಟಿಯಿಂದ ಮೂರು ಹಂತಗಳಲ್ಲಿ ನಡೆಯಲಿದೆ.

ಲೋಕ ಸಮರ : 7 ಹಂತದಲ್ಲಿ ಮತದಾನ, ಮೇ 23ರಂದು ಫಲಿತಾಂಶ

ಈಚೆಗೆ ಚುನಾವಣೆ ಆಯೋಗವು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ, ರಾಜಕೀಯ ಪಕ್ಷಗಳು ಹಾಗೂ ಸರಕಾರಿ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಭದ್ರತಾ ಸಿಬ್ಬಂದಿಯ ಸಂಖ್ಯಾ ಕೊರತೆ, ಜಮ್ಮು-ಕಾಶ್ಮೀರದಲ್ಲಿನ ಇತ್ತೀಚಿನ ಹಿಂಸಾಚಾರ ಘಟನೆಗಳು ಗಮನದಲ್ಲಿ ಇಟ್ಟುಕೊಂಡು ವಿಧಾನಸಭಾ ಚುನಾವಣೆ ನಡೆಸುತ್ತಿಲ್ಲ ಎಂದು ಅರೋರಾ ಹೇಳಿದ್ದಾರೆ.

1996ರಿಂದ ಈಚೆಗೆ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಸರಿಯಾದ ಸಮಯಕ್ಕೆ ವಿಧಾನಸಭಾ ಚುನಾವಣೆ ನಡೆಯುತ್ತಿಲ್ಲ. ಮುಂದಿನ ಸಲ ಪ್ರಧಾನಿ ಮೋದಿ ಅವರ ಪ್ರಬಲ ನಾಯಕತ್ವಕ್ಕಾಗಿ ಹೊಗಳುವಾಗ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದಿದ್ದಾರೆ ನ್ಯಾಷನಲ್ ಕಾನ್ಫರೆನ್ಸ್ ನ ಒಮರ್ ಅಬ್ದುಲ್ಲಾ.

ಲೋಕಸಭೆ ಚುನಾವಣೆ 2019ರ ಮಾಹಿತಿ ಅಂಕಿ- ಅಂಶಗಳಲ್ಲಿ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಕೂಟ ಬೇರೆಯಾದ ನಂತರ ಕಳೆದ ವರ್ಷ ನವೆಂಬರ್ ನಿಂದ ರಾಷ್ಟ್ರಪತಿ ಆಳ್ವಿಕೆ ಇದೆ.

English summary
Assembly elections in Jammu and Kashmir will not to be held along with Lok Sabha polls, chief election commissioner Sunil Arora said on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X