Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ
ಲಕ್ನೋ ಮೇ 3: ಕಾಂಗ್ರೆಸ್ ನಾಯಕ ಹಾಗೂ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಹೌದು... ಕಾಂಗ್ರೆಸ್ ಕೊನೆಗೂ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿದೆ. ಇಂದು ರಾಹುಲ್ ಗಾಂಧಿ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.
#WATCH | Uttar Pradesh: Congress MP Rahul Gandhi files nomination from Raebareli for the upcoming #LokSabhaElection2024
— ANI (@ANI) May 3, 2024
BJP has fielded Dinesh Pratap Singh from Raebareli. pic.twitter.com/R0IYOCnJA1

ರಾಹುಲ್ ಗಾಂಧಿ ತಮ್ಮ ಪಕ್ಷದ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಆಗಮಿಸಿ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದರು. ಶುಕ್ರವಾರ (ಮೇ 3) ಬೆಳಗ್ಗೆಯಷ್ಟೇ ಕಾಂಗ್ರೆಸ್ ಪಕ್ಷವು ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು.
ಕಾಂಗ್ರೆಸ್‌ನ ಈ ಪಟ್ಟಿ ಭಾರೀ ಕುತೂಹಲವನ್ನು ಮೂಡಿಸಿದೆ. ಪಟ್ಟಿ ಬಿಡುಗಡೆ ಮಾಡಿದ ಕೆಲವೇ ಹೊತ್ತಿನ ನಂತರ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.
ರಾಹುಲ್ ಗಾಂಧಿ ಅವರು ಅಮೇಠಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಮೇಠಿ ಬದಲಿಗೆ ರಾಯ್ ಬರೇಲಿಯಿಂದ ರಾಹುಲ್ ಗಾಂಧಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ಷೇತ್ರದಿಂದ ಈ ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದರು. ಬಳಿಕ ಪ್ರಿಯಾಂಕಾ ಗಾಂಧಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಅಂತಿಮವಾಗಿ ರಾಹುಲ್ ಗಾಂಧಿ ಅವರು ಸ್ಪರ್ಧಿಸುತ್ತಿದ್ದಾರೆ.












Click it and Unblock the Notifications