ಕಾಂಗ್ರೆಸ್ 4ನೇ ಪಟ್ಟಿಯಲ್ಲಿ ಶಶಿ ತರೂರ್ ಸೇರಿ 27 ಅಭ್ಯರ್ಥಿಗಳು
ನವದೆಹಲಿ, ಮಾರ್ಚ್ 17: ಲೋಕಸಭೆ ಚುನಾವಣೆ 2019ಗಾಗಿ ಕಾಂಗ್ರೆಸ್ ಪಕ್ಷವು 27 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಪ್ರಕಟಿಸಿದೆ. ನಾಲ್ಕನೇ ಪಟ್ಟಿಯಲ್ಲಿ ಶಶಿ ತರೂರ್, ನಬಮ್ ಟುಕಿ ಪ್ರಮುಖ ಹೆಸರುಗಳಾಗಿವೆ.
ನಾಲ್ಕನೇ ಪಟ್ಟಿಯಲ್ಲಿ ಕೇರಳದ 12, ಉತ್ತರಪ್ರದೇಶದ 7, ಛತ್ತೀಸ್ ಗಡ 5, ಅರುಣಾಚಲ ಪ್ರದೇಶದಲ್ಲಿ 2 ಹಾಗೂ ಅಂಡಮಾನ್ ಮತ್ತು ನಿಕೋಬಾರ್ ನ 1 ಕ್ಷೇತ್ರಗಳ ಅಭ್ಯರ್ಥಿಗಳು ಸೇರಿದಂತೆ ಒಟ್ಟು 35 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
Congress releases fourth list of 27 candidates (12 Kerala, 7 Uttar Pradesh, 5 Chhattisgarh, 2 Arunachal Pradesh and 1 Andaman & Nicobar islands) for the upcoming Lok Sabha polls. pic.twitter.com/E47vi4a8mt
— ANI (@ANI) March 16, 2019
2014ರಲ್ಲಿ ಉತ್ತರ ಪ್ರದೇಶದಲ್ಲಿ 80 ಕ್ಷೇತ್ರಗಳ ಪೈಕಿ 2 ಸ್ಥಾನ ಗಳಿಸಿದ ಕಾಂಗ್ರೆಸ್ ಈ ಬಾರಿ ಉತ್ತಮ ಫಲಿತಾಂಶ ನೀಡುವ ಉತ್ಸಾಹದಲ್ಲಿದೆ. ಉತ್ತರಪ್ರದೇಶದಲ್ಲಿ ಏಪ್ರಿಲ್ 11, 18, 23 ಹಾಗೂ 29 ಮತ್ತು ಮೇ 6, 12 ಹಾಗೂ 19 ರಂದು ಚುನಾವಣೆ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ತನ್ನ 18 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶುಕ್ರವಾರದಂದು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಸುಷ್ಮಿತ ದೇವ್, ಗೌರವ್ ಗೊಗಾಯಿ ಹಾಗೂ ಮುಕುಲ್ ಸಂಗ್ಮಾ ಅವರ ಹೆಸರಿತ್ತು. ಎರಡನೇ ಪಟ್ಟಿಯಲ್ಲಿ ಮಹಾರಾಷ್ಟ್ರದ 5 ಹಾಗೂ ಉತ್ತರ ಪ್ರದೇಶದ 16 ಸೇರಿದಂತೆ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಮಾರ್ಚ್ 07ರಂದು ಮೊದಲ ಪಟ್ಟಿಯಲ್ಲಿ ಉತ್ತರಪ್ರದೇಶದ 11 ಹಾಗೂ ಗುಜರಾತಿನ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು.ಕಾಂಗ್ರೆಸ್ ಇಲ್ಲಿಯವರೆಗೆ ಲೋಕಸಭೆ ಚುನಾವಣೆಗೆ 54 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications