Get Updates
Get notified of breaking news, exclusive insights, and must-see stories!

ಕಾಂಗ್ರೆಸ್‌ ಹೊರಗಿಟ್ಟು 'ಹೊಸ ರಂಗ' ರಚನೆಗೆ ಒಂದಾದ ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್!

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಇತರ ವಿರೋಧ ಪಕ್ಷಗಳೊಂದಿಗೆ ಒಗ್ಗಟ್ಟಿನ ಹೋರಾಟ ನಡೆಸುವ ಕಾಂಗ್ರೆಸ್ ಯೋಜನೆಗೆ ಪೆಟ್ಟು ಬಿದ್ದಿದೆ.

ಕೋಲ್ಕತ್ತಾ, ಮಾರ್ಚ್ 17: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ದೂರ ಉಳಿಯುವುದಾಗಿ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಂಡಿದ್ದು, ಹೊಸ ರಂಗ ರಚನೆಗೆ ಒಪ್ಪಿಗೆ ಸೂಚಿಸಿವೆ. ಇದಕ್ಕಾಗಿಯೇ ಶುಕ್ರವಾರ ಇಬ್ಬರು ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಇತರ ವಿರೋಧ ಪಕ್ಷಗಳೊಂದಿಗೆ ಒಗ್ಗಟ್ಟಿನ ಹೋರಾಟ ನಡೆಸುವ ಕಾಂಗ್ರೆಸ್ ಯೋಜನೆಗೆ ಇದರಿಂದಾಗಿ ಪೆಟ್ಟು ಬಿದ್ದಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಅಂತರದಲ್ಲಿ ಇರಿಸಿ, ಎರಡು ಪಕ್ಷಗಳನ್ನು ಸಮಾನವಾಗಿ ಪರಿಗಣಿಸುವ ನೀತಿಯನ್ನು ಅನುಸರಿಸುವುದಾಗಿ ಸೂಚಿಸಿವೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಇತರ ವಿರೋಧ ಪಕ್ಷಗಳೊಂದಿಗೆ ಒಗ್ಗಟ್ಟಿನ ಹೋರಾಟ ನಡೆಸುವ ಕಾಂಗ್ರೆಸ್ ಯೋಜನೆಗೆ ಪೆಟ್ಟು ಬಿದ್ದಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀಮತಿ ಬ್ಯಾನರ್ಜಿ ಅವರು ಮುಂದಿನ ವಾರ ಬಿಜು ಜನತಾ ದಳದ ಮುಖ್ಯಸ್ಥರಾಗಿರುವ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷಗಳ ಗುಂಪಿನ ಪ್ರಮುಖ ನಾಯಕ ಎಂದು ಬಿಂಬಿಸುವ ಬಿಜೆಪಿಯ ಪ್ರಯತ್ನವನ್ನು ಎದುರಿಸುವ ಗುರಿಯನ್ನು ಈ ತಂತ್ರ ಹೊಂದಿದೆ. ಇತ್ತೀಚೆಗೆ ಲಂಡನ್‌ನಲ್ಲಿ ಭಾಷಣ ಮಾಡುವಾಗ ಭಾರತದ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ. ಇದರಿಂದ ಇತರ ವಿರೋಧ ಪಕ್ಷಗಳು ಬಿಜೆಪಿ ರಾಹುಲ್ ಗಾಂಧಿಯನ್ನು ಬಳಸಿಕೊಂಡು ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಶಂಕಿಸುತ್ತಿವೆ.

"ರಾಹುಲ್ ಗಾಂಧಿ ವಿದೇಶದಲ್ಲಿ ಹೇಳಿಕೆ ನೀಡಿದ್ದಾರೆ. ಅವರು ಕ್ಷಮೆಯಾಚಿಸುವವರೆಗೂ ಬಿಜೆಪಿ ಸಂಸತ್ತಿನ ಕಾರ್ಯವನ್ನು ಮಾಡಲು ಬಿಡುವುದಿಲ್ಲ. ಇದರರ್ಥ ಅವರು ಕಾಂಗ್ರೆಸ್ ಅನ್ನು ಬಳಸಿಕೊಂಡು ಸಂಸತ್ತು ಕಾರ್ಯಕಲಾಪಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಬಿಜೆಪಿಗೆ ಸಹಾಯಕವಾಗಲು ರಾಹುಲ್ ಗಾಂಧಿ ವಿರೋಧ ಪಕ್ಷದ ಮುಖ್ಯಸ್ಥನಾಗಬೇಕು ಎಂದು ಬಿಜೆಪಿ ಬಯಸುತ್ತಿದೆ" ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಇತರ ವಿರೋಧ ಪಕ್ಷಗಳೊಂದಿಗೆ ಒಗ್ಗಟ್ಟಿನ ಹೋರಾಟ ನಡೆಸುವ ಕಾಂಗ್ರೆಸ್ ಯೋಜನೆಗೆ ಪೆಟ್ಟು ಬಿದ್ದಿದೆ.

"ಕಾಂಗ್ರೆಸ್ ವಿರೋಧ ಪಕ್ಷದ 'ಬಿಗ್ ಬಾಸ್' ಎಂದು ಭಾವಿಸುವುದು ತಪ್ಪು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 23 ರಂದು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. ನಾವು ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವ ಯೋಜನೆಯನ್ನು ಇತರ ವಿರೋಧ ಪಕ್ಷಗಳೊಂದಿಗೆ ಚರ್ಚಿಸುತ್ತೇವೆ. ಇದು ತೃತೀಯ ರಂಗ ಎಂದು ನಾವು ಹೇಳುತ್ತಿಲ್ಲ. ಆದರೆ ಪ್ರಾದೇಶಿಕ ಪಕ್ಷಗಳಿಗೆ ಬಿಜೆಪಿ ವಿರುದ್ಧ ಹೋರಾಡುವ ಶಕ್ತಿ ಇದೆ" ಎಂದು ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ.

ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳಲು ಬಯಸುವುದಾಗಿ ಸ್ಪಷ್ಟಪಡಿಸಿದ್ದಾರೆ. "ಬಂಗಾಳದಲ್ಲಿ, ನಾವು ಮಮತಾ ದೀದಿಯವರೊಂದಿಗೆ ಇದ್ದೇವೆ. ಇದೀಗ, ನಮ್ಮ ನಿಲುವು ಬಿಜೆಪಿ ಮತ್ತು ಕಾಂಗ್ರೆಸ್ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳುವುದ ಆಗಿದೆ" ಎಂದು ಅಖಿಲೇಶ್ ಯಾದವ್ ಕೋಲ್ಕತ್ತಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ನಮ್ಮ ಸಂವಿಧಾನವನ್ನು ರಕ್ಷಿಸಲು ಸಮಾಜವಾದಿ ಪಕ್ಷ ಯಾವುದೇ ತ್ಯಾಗಕ್ಕೂ ಸಿದ್ಧವಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯವಾದರೆ, ದೇಶಾದ್ಯಂತ ಬಿಜೆಪಿಯನ್ನು ಸೋಲಿಸಬಹುದು" ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಇದರ ಜೊತೆಗೆ 'ಬಿಜೆಪಿ ಲಸಿಕೆ' ಪಡೆಯುವವರಿಗೆ ಸಿಬಿಐ, ಇಡಿ ಅಥವಾ ಐಟಿಯಿಂದ ತೊಂದರೆಯಾಗುವುದಿಲ್ಲ ಎಂದು ಅವರು ಬಿಜೆಪಿಗೆ ಸೇರಿದ ನಂತರ ಕೇಂದ್ರ ತನಿಖಾ ಸಂಸ್ಥೆಗಳಿಂದ ಪ್ರಕರಣಗಳನ್ನು ಕೈಬಿಟ್ಟ ವಿರೋಧ ಪಕ್ಷದ ಮಾಜಿ ನಾಯಕರನ್ನು ಉಲ್ಲೇಖಿಸಿ ಕಿಡಿಕಾರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+