Lok Sabha debate: ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಅಮಿತ್ ಶಾ ಆದೇಶ; ರಾಹುಲ್ ಗಾಂಧಿ ಗಂಭೀರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದಂತೆ ಬುಧವಾರ ಲೋಕಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದ ನಡೆದಿದೆ. ಪರೀಕ್ಷಾ ಅಕ್ರಮಗಳ ತಡೆ ಮಸೂದೆ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಹುಲ್ ಗಾಂಧಿ ಅವರ ಈ ಹೇಳಿಕೆಯಿಂದ ಸದನದಲ್ಲಿ ಕೆಲಕಾಲ ಗದ್ದಲ ಉಂಟಾಯಿತು.

ರಾಹುಲ್ ಗಾಂಧಿ ಮಾತನಾಡುತ್ತಾ, "ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸುವಂತೆ ಗೃಹ ಸಚಿವರೇ ಆದೇಶ ನೀಡಿದ್ದರು. ನಮ್ಮ ವಿದ್ಯಾರ್ಥಿಗಳ ರಕ್ತದಲ್ಲಿ ಪೆಲ್ಲೆಟ್‌ಗಳು ಸೇರುವಂತೆ ಮಾಡಿದ್ದು ಹಾಗೂ ಅವರ ಮೇಲೆ ಗುಂಡಿನ ದಾಳಿ ನಡೆಸಲು ಆದೇಶಿಸಿದ್ದು ಗೃಹ ಸಚಿವರೇ" ಎಂದು ಆರೋಪಿಸಿದರು. ಈ ಹೇಳಿಕೆ ನೀಡುವ ಸಂದರ್ಭದಲ್ಲಿ ಅಮಿತ್ ಶಾ ಅವರು ಸದನದಲ್ಲಿ ಉಪಸ್ಥಿತರಿರಲಿಲ್ಲ.

Lok Sabha

ರಾಹುಲ್ ಗಾಂಧಿ ಅವರ ಆರೋಪಕ್ಕೆ ಆಡಳಿತರೂಢ ಬಿಜೆಪಿ ಹಾಗೂ ಎನ್‌ಡಿಎ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಸೂಕ್ತ ಸಾಕ್ಷ್ಯಾಧಾರಗಳನ್ನ ಒದಗಿಸಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು, "ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಂತಹ ಆರೋಪಗಳನ್ನು ಮಾಡುವುದು ಸರಿಯಲ್ಲ. ಸದನದಲ್ಲಿ ಹೇಳಿಕೆ ನೀಡುವಾಗ ಸಂಸದೀಯ ನಿಯಮಗಳನ್ನ ಪಾಲಿಸಬೇಕು" ಎಂದು ರಾಹುಲ್ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದರು.

ರಾಹುಲ್ ಗಾಂಧಿ ಆರೋಪ: ಆರ್‌ಎಸ್‌ಎಸ್ ಮತ್ತು ನೀಟ್ ವಿವಾದದ ಪ್ರಸ್ತಾಪ

ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂದರೆ ಆರ್‌ಎಸ್‌ಎಸ್‌ ವಿರುದ್ಧವೂ ಕಿಡಿಕಾರಿದ್ದು, ದೇಶದ ಶಿಕ್ಷಣ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಕಲಿಸುವ ಪಠ್ಯಕ್ರಮವನ್ನ ಆರ್‌ಎಸ್‌ಎಸ್ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದರು. "ಆರ್‌ಎಸ್‌ಎಸ್ ರೂಪಿಸುವ ಕಲ್ಪನಾತೀತ ಹಾಗೂ ಅರ್ಥಹೀನ ಇತಿಹಾಸವನ್ನ ವಿದ್ಯಾರ್ಥಿಗಳು ಓದುವಂತೆ ಒತ್ತಾಯಿಸಲಾಗುತ್ತಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇವಲ ಒಂದು ಸಂಕೇತವಷ್ಟೇ. ಯುವಜನರು ಅಂಧಭಕ್ತರಾಗಬೇಕೆಂಬುದು ಅವರ ಉದ್ದೇಶ" ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿದ ಅವರು, ಯುವಜನತೆಯ ಈ ಹೋರಾಟ ತಮಗೆ ಹೊಸ ಭರವಸೆ ಮೂಡಿಸಿದೆ ಎಂದು ಹೇಳಿದರು.

ಜಿತೇಂದ್ರ ಸಿಂಗ್ ಸ್ಪಷ್ಟನೆ: ಗುಂಡು ಹಾರಿಸಿಲ್ಲ, ಕೇವಲ ಅಶ್ರುವಾಯು ಬಳಕೆ

ರಾಹುಲ್ ಗಾಂಧಿ ಅವರ ಆರೋಪಗಳಿಗೆ ಕೇಂದ್ರ ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್, ವಿಪಕ್ಷಗಳ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದರು. "ಪ್ರತಿಭಟನೆ ವೇಳೆ ಯಾವುದೇ ಗುಂಡು ಹಾರಿಸಿಲ್ಲ, ಕೇವಲ ಅಶ್ರುವಾಯು ಮಾತ್ರ ಬಳಸಲಾಗಿದೆ ಎಂಬುದನ್ನು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಆದೇಶ ನೀಡುವ ಅಧಿಕಾರ ಸ್ಥಳೀಯ ಮ್ಯಾಜಿಸ್ಟ್ರೇಟ್ ಅವರಿಗೆ ಇರುತ್ತದೆಯೇ ಹೊರತು ಸಚಿವರಿಗಲ್ಲ" ಎಂದು ಸ್ಪಷ್ಟನೆ ನೀಡಿದರು.

ಜೊತೆಗೆ, ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬಳಸಿದ ಭಾಷೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿತೇಂದ್ರ ಸಿಂಗ್, "ವಿರೋಧ ಪಕ್ಷದ ನಾಯಕರಾಗಿ ಸಂಸತ್ತಿನಲ್ಲಿ ಇಂತಹ ಅಸಂಸದೀಯ ಭಾಷೆ ಬಳಸಿರುವುದು ಆಘಾತಕಾರಿಯಾಗಿದೆ. ದೇಶದ ಯುವಕರನ್ನು 'ಇಡಿಯಟ್ಸ್' ಎಂದು ಕರೆಯುವುದಕ್ಕಿಂತ ದುರದೃಷ್ಟಕರ ಸಂಗತಿ ಇನ್ನೊಂದಿದೆಯೇ?" ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+