Lok Sabha Opinion Poll 2024: ದೇವರ ನಾಡಲ್ಲಿ ಕಾಂಗ್ರೆಸ್ ಜಯಭೇರಿ-ನಿಜವಾಗಲಿದ್ಯಾ ಈ ಭವಿಷ್ಯ?
ಇದೀಗ ದೇಶದೆಲ್ಲೆಡೆ ಲೋಕಸಭಾ ಚುನಾವಣೆ ಸಮರಕ್ಕೆ ಎಲ್ಲಾ ಪಕ್ಷಗಳು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ. ಈ ನಡುವೆ ಸಮೀಕ್ಷೆಗಳನ್ನು ಸಹ ಮಾಡಲಾಗುತ್ತದೆ. ಹಾಗಾದರೆ ಈ ಬಾರಿ ಎಬಿಪಿ- ಸಿ ವೋಟರ್ ಸಮೀಕ್ಷೆ ಪ್ರಕಾರ ಕರ್ನಾಟಕ ಮತ್ತು ಕೇರಳದಲ್ಲಿ ಯಾವ ಪಕ್ಷ ಗೆಲುವು ಸಾಧಿಸಲಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳ ಪೈಕಿ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು 22-24 ಸೀಟುಗಳ ಅಂತರದಲ್ಲಿ ಗೆಲುವು ಪಡೆಯಲಿದೆ ಎಂದು ಎಬಿಪಿ ಸಿ ವೋಟರ್ ಸಮೀಕ್ಷೆ ಹೇಳಿದೆ. ಇನ್ನು ಕೇರಳದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ ಎಂದು ಸಮೀಕ್ಷೆ ಹೇಳಿದೆ.

"ದೇವರ ನಾಡು" ಅಂತಲೇ ಹೆಸರುವಾಸಿಯಾಗಿರುವ ಕೇರಳದದಲ್ಲಿ ಲೋಕಸಭೆ ಚುನಾವಣೆ 2024 ಸಮೀಪಿಸುತ್ತಿದ್ದಂತೆ ಕಾಂಗ್ರಸ್‌ನಿಂದ ಗೆಲುವಿನ ನಿರೀಕ್ಷೆ ಹೆಚ್ಚುತ್ತಿದೆ. ರಾಜಕೀಯ ಪ್ರಾಮುಖ್ಯತೆಯೊಂದಿಗೆ, ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಮತ್ತೊಮ್ಮೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲು ನಾಮನಿರ್ದೇಶನ ಮಾಡಲಾಗಿದೆ.
ಈ ನಿರ್ಧಾರವು ಮುಂಬರುವ ಚುನಾವಣೆಯಲ್ಲಿ ಹೆಚ್ಚು ಪ್ರಭಾವವನ್ನು ಬೀರಲು ಕೇರಳಕ್ಕೆ ಪ್ರಮುಖ ವೇದಿಕೆಯಾಗಲಿದ್ದು, ಇದು I.N.D.I.A ಬಣವನ್ನು ಸಮರ್ಥವಾಗಿ ನಿಭಾಯಿಸುತ್ತದೆ. ಇನ್ನು 2024ರ ಲೋಕಸಭಾ ಚುನಾವಣೆಯ ಇತ್ತೀಚಿನ ABP C-Voter ಅಭಿಪ್ರಾಯ ಸಂಗ್ರಹ ದತ್ತಂಶವು ಕೇರಳದಲ್ಲಿ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (UPA)ಗೆ ಭರವಸೆಯ ನಿರೀಕ್ಷೆಗಳನ್ನು ಹುಟ್ಟಿಸಿದೆ.
2024ರ ಲೋಕಸಭಾ ಚುನಾವಣೆಯ ಇತ್ತೀಚಿನ ABP C-Voter ಅಭಿಪ್ರಾಯ ಸಂಗ್ರಹ ದತ್ತಾಂಶವನ್ನು ಗಮನಿಸುವುದಾದರೆ, ಯುಪಿಎ 44.5% ಮತಗಳನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲಿದೆ. ಎಲ್‌ಡಿಎಫ್ 31.4% ಯೋಜಿತ ಮತಗಳನ್ನು ಗಳಿಸುವುದರೊಂದಿಗೆ ಅಸಾಧಾರಣ ಸ್ಪರ್ಧಿಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಆದರೆ ಎನ್‌ಡಿಎ ನಿರೀಕ್ಷಿತ 19.8% ಮತಗಳನ್ನು ಗಳಿಸುವ ಮೂಲಕ ಹಿಂದುಳಿಯಲಿದೆ. ಇತರೆ ಪಕ್ಷಗಳು ಶೇಕಡಾ 4.3ರಷ್ಟು ಮತಗಳನ್ನು ಗಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ 16 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದ್ದರೆ, ಬಿಜೆಪಿ ಶೂನ್ಯ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆ ತಿಳಿಸಿದೆ. ಕೇರಳದ ರಾಜಕೀಯ ಕ್ಷೇತ್ರದಲ್ಲಿ, ಕಾಂಗ್ರೆಸ್ ಪಕ್ಷವು ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಸಜ್ಜಾಗುತ್ತಿದೆ. ಹಿಂದಿನ ಚುನಾವಣೆಗಳಲ್ಲಿ ತನ್ನ ಸಾಧನೆಯನ್ನು ಸಮರ್ಥಿಸಿಕೊಂಡಿದೆ. ಹಾಗೆಯೇ ಇದೀಗ ಗೆಲುವು ದಾಖಲಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.
I.N.D.I.A ಸ್ಥಾಪನೆಯೊಂದಿಗೆ, ಕಾಂಗ್ರೆಸ್ ತನ್ನ ಸ್ಥಾನವನ್ನು ಬಲಪಡಿಸಲು ಮತ್ತು ರಾಜ್ಯದಲ್ಲಿ ಆಡಳಿತಾರೂಢ ಸರ್ಕಾರದ ಮೈತ್ರಿಯ ಮಹತ್ವಾಕಾಂಕ್ಷೆಗಳನ್ನು ತಡೆಯುವ ಗುರಿಯನ್ನು ಹೊಂದಿದೆ. ಇನ್ನು ಎನ್‌ಡಿಎ ತನ್ನ ಹಿಂದಿನ ಚುನಾವಣಾ ಹಿನ್ನಡೆಗಳನ್ನು ತಡೆದು ಗೆಲುವು ಸಾಧಿಸಲು ನಿರ್ಧರಿಸಿದೆ ಮತ್ತು ಮುಂಬರುವ ಚುನಾವಣೆಗಳಲ್ಲಿ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದೆ.
ಚುನಾವಣಾ ಕದನ ತೀವ್ರಗೊಳ್ಳುತ್ತಿದ್ದಂತೆಯೇ ಎಡಪಕ್ಷಗಳು ಕೇರಳದಲ್ಲಿ 2024ರ ಲೋಕಸಭೆ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿವೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ತನ್ನ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಸಿಪಿಐ ಕೂಡ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.












Click it and Unblock the Notifications