ಬಿಜೆಪಿಯ ಮೊದಲ ಪಟ್ಟಿ: ಇಬ್ಬರು ಕನ್ನಡಿಗರಿಗೆ ಸ್ಥಾನ
ನವದೆಹಲಿ, ಫೆ.28: ಮುಂದಿನ ವಾರ ಘೋಷಣೆಯಾಗಲಿರುವ ಲೋಕಸಭಾ ಚುನಾವಣೆಗಾಗಿ ಪ್ರಮುಖ ರಾಜಕೀಯ ಪಕ್ಷವಾದ ಬಿಜೆಪಿಯು 54 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳು ಪ್ರಕಟಿಸಿದೆ.
ನಿನ್ನೆ ಶಿವರಾತ್ರಿಯಲ್ಲಿ ಸಭೆ ಸೇರಿದ್ದ ಬಿಜೆಪಿಯ ವರಿಷ್ಠರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಘೋಷಿಸದಿದ್ದರೂ ಇಬ್ಬರು ಕನ್ನಡಿಗರನ್ನು ಅಭ್ಯರ್ಥಿಯನ್ನಾಗಿಸಿದೆ. ಮುಂಬೈನ ಈಶಾನ್ಯದಿಂದ ಕೀರ್ತಿ ಸೋಮಯ್ಯ ಮತ್ತು ಮುಂಬೈ ಉತ್ತರದಿಂದ ಗೋಪಾಲ್ ಶೆಟ್ಟಿ ಅವರನ್ನು ಕಣಕ್ಕಿಳಿಸಿದೆ.

5 ರಾಜ್ಯಗಳ 54 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯ ಹಿಂದಿನ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ನಾಗ್ಪುರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಮಹಾರಾಷ್ಟ್ರದ 16 ಕ್ಷೇತ್ರಗಳು, ಪಶ್ಚಿಮ ಬಂಗಾಳದ 17, ಅರುಣಾಚಲ ಪ್ರದೇಶದ 2, ಒಡಿಶಾದ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. (ಪಟ್ಟಿ ಪರಿಶೀಲನೆಗಾಗಿ ಇಲ್ಲಿ ಕ್ಲಿಕ್ಕಿಸಿ).












Click it and Unblock the Notifications