ಸೋಮವಾರದಿಂದ ಲೋಕಸಭೆ ಅಧಿವೇಶನ: ಸ್ಪೀಕರ್ ಯಾರು?
ನವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿಯೇ ನಡೆಯಲಿದೆ.

ಜೂನ್ 26ರಂದು ಲೋಕಸಭೆ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ, ಜೂನ್ 27ರಂದು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಹಂಗಾಮಿ ಸ್ಪೀಕರ್ ಆಯ್ಕೆ ವಿಚಾರ ಕಲಾಪದಲ್ಲಿ ಕೋಲಾಹಲ ಎಬ್ಬಿಸುವ ನಿರೀಕ್ಷೆ ಇದೆ.
ಕಾಂಗ್ರೆಸ್ ಟೀಕೆ: ಪ್ರತಿಪಕ್ಷ ಕಾಂಗ್ರೆಸ್ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಕಾಂಗ್ರೆಸ್‌ನ ಕೆ. ಸುರೇಶ್ ಆಯ್ಕೆ ಮಾಡಬೇಕಿತ್ತು. ಆದರೆ ಆಡಳಿತ ಪಕ್ಷ ಸಂಪ್ರದಾಯವನ್ನು ಮುರಿದಿದೆ ಎಂಬುದು ಪ್ರತಿಪಕ್ಷದ ಆರೋಪವಾಗಿದೆ.
ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕಿರಣ್ ರಿಜಿಜು ಮಾತನಾಡಿ, "ಭರ್ತೃಹರಿ ಮಹತಾಬ್ 7 ಬಾರಿ ನಿರಂತರವಾಗಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆ. ಸುರೇಶ್ 1998, 2004ರಲ್ಲಿ ಸೋಲು ಅನುಭವಿಸಿದ್ದರು. ಅವರು ಒಟ್ಟು 4 ಬಾರಿ ಲೋಕಸಭೆಗೆ, ಎರಡು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ" ಎಂದು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಭರ್ತೃಹರಿ ಮಹತಾಬ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗಲಿದೆ.
ಲೋಕಸಭೆ ಕಾರ್ಯದರ್ಶಿ ಉತ್ಕಲ್ ಕುಮಾರ್ ಸಿಂಘ್ ಮತ್ತು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ನೇತೃತ್ವದಲ್ಲಿ ಲೋಕಸಭೆಯ ಎಲ್ಲಾ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಲೋಕಸಭೆಯ ನಾಯಕ, ಪ್ರಧಾನಿ ನರೇಂದ್ರ ಮೋದಿ ಮೊದಲು ವಾರಣಾಸಿಯ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಕಾಂಗ್ರೆಸ್‌ನ ಕೆ. ಸುರೇಶ್, ಡಿಎಂಕೆಯ ಟಿ. ಆರ್. ಬಾಲು, ಬಿಜೆಪಿಯ ರಾಧಾ ಮೋಹನ್ ಸಿಂಗ್, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಅವರನ್ನು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಸಹಾಯಕರಾಗಿ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ನೇಮಿಸಲಾಗಿದೆ.
ಬುಧವಾರ ಲೋಕಸಭೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದು, ತಮ್ಮ ಸಂಪುಟದ ಸಚಿವರನ್ನು ಸದನಕ್ಕೆ ಪರಿಚಯಿಸಲಿದ್ದಾರೆ.
ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಜುಲೈ 28ರಂದು ಚರ್ಚೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸದನವನ್ನು ಉದ್ದೇಶಿಸಿ ಜುಲೈ 2 ಅಥವ 3ರಂದು ಉತ್ತರ ನೀಡಲಿದ್ದಾರೆ.
ಸದಸ್ಯರ ಪ್ರಮಾಣ ವಚನ, ರಾಷ್ಟ್ರಪತಿಗಳ ಭಾಷಣ, ಪ್ರಧಾನಿಗಳ ಉತ್ತರದ ಬಳಿಕ ಲೋಕಸಭೆ, ರಾಜ್ಯಸಭೆ ಕಲಾಪ ಮುಕ್ತಾಯವಾಗಲಿದೆ. ಹೊಸದಾಗಿ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಸರ್ಕಾರ 2024-25ನೇ ಸಾಲಿನ ಬಜೆಟ್ ಮಂಡಿಸಬೇಕಿದೆ. ಜುಲೈ 22ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಲೋಕಸಭೆ ಸ್ಪೀಕರ್ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಬಿಜೆಪಿ ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಜೊತೆ ಸಮನ್ವಯ ಸಾಧಿಸಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಟಿಡಿಪಿ & ಜೆಡಿಯು ಸ್ಪೀಕರ್ ಹುದ್ದೆಗಾಗಿ ಬೇಡಿಕೆ ಇಟ್ಟಿವೆ. ಆದ್ದರಿಂದ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications