Loksabha Elections 2024: ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕೆ? ಸಮೀಕ್ಷೆ ಹೇಳಿದ್ದೇನು?
ಲೋಕಸಭೆ ಚುನಾವಣೆಗೆ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ ಎಂದು ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ಬಹಿರಂಗಪಡಿಸಿದೆ. ಶೇಕಡ 52 ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತಾರೆ ಎಂದು ಹೇಳಿರುವುದಾಗಿ ಸಮೀಕ್ಷೆ ತಿಳಿಸಿದೆ.
ಇಂಡಿಯಾ ಟುಡೇ-ಸಿವೋಟರ್ ಅವರು ನಡೆಸಿದ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯ ಭಾಗವಾಗಿ ಆಗಸ್ಟ್ ಆವೃತ್ತಿಯ ಸಂಶೋಧನೆಗಳು ಪ್ರತಿಕ್ರಿಯಿಸಿದವರಲ್ಲಿ 63 ಪ್ರತಿಶತದಷ್ಟು ಜನ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಕಾರ್ಯವೈಖರಿಯಿಂದ ತೃಪ್ತರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ಆದರೂ, ಕೆಲವು ತಿಂಗಳ ಹಿಂದಿನ ಸಮೀಕ್ಷೆಗೆ ಹೋಲಿಕೆ ಮಾಡಿದಾಗ ಅಂಕಿ ಅಂಶದಲ್ಲಿ ಕುಸಿತವನ್ನು ನೋಡಬಹುದು. ಈ ಮೊದಲು 72 ಪ್ರತಿಶತದಷ್ಟು ಜನರು ಪ್ರಧಾನಿ ಮೋದಿಯವರ ಕಾರ್ಯವೈಖರಿಯಿಂದ ತೃಪ್ತರಾಗಿದ್ದಾರೆಂದು ಹೇಳಿದ್ದರು.

ಪ್ರತಿಕ್ರಿಯಿಸಿದವರಲ್ಲಿ ಶೇಕಡಾ 13 ರಷ್ಟು ಜನರು ಪ್ರಧಾನಿ ಮೋದಿಯವರ ಕಾರ್ಯಕ್ಷಮತೆಯನ್ನು 'ಸರಾಸರಿ' ಎಂದು ಹೇಳಿದ್ದಾರೆ ಮತ್ತು ಶೇಕಡಾ 22 ರಷ್ಟು ಜನರು 'ಕಳಪೆ' ಎಂದು ಹೇಳಿದ್ದಾರೆ ಎಂದು ಸಮೀಕ್ಷೆಯು ಬಹಿರಂಗಪಡಿಸಿದೆ.
ಮೋದಿಗಾಗಿ ಬಿಜೆಪಿಗೆ ಮತ
ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು 2024 ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಭಾರತೀಯ ಜನತಾ ಪಕ್ಷಕ್ಕೆ ಮತ ಚಲಾಯಿಸುವುದಾಗಿ ಸಮೀಕ್ಷೆಯಲ್ಲಿ ಭಾಗವಹಿಸಿದ ಶೇಕಡ 44 ರಷ್ಟು ಮಂದಿ ಹೇಳಿದ್ದಾರೆ. ಶೇಕಡಾ 22ರಷ್ಟು ಮಂದಿ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಹಾಕುವುದಾಗಿ ಹೇಳಿದ್ದರೆ, ಶೇಕಡ 14ರಷ್ಟು ಮಂದಿ ಹಿಂದುತ್ವಕ್ಕಾಗಿ ಬಿಜೆಪಿಗೆ ಮತ ಹಾಕುತ್ತೇವೆ ಎಂದು ಹೇಳಿರುವುದಾಗಿ ಸಮೀಕ್ಷೆ ತಿಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅವರ ರಾಜಕೀಯ ಪ್ರತಿಸ್ಪರ್ಧಿಗಳಿಗಿಂತ ಮುಂದಿದೆ ಎಂದು ಸಮೀಕ್ಷೆ ಹೇಳಿದೆ. ಶೇಕಡಾ 52 ರಷ್ಟು ಜನರು ಪ್ರಧಾನಿಯಾಗಲು ನರೇಂದ್ರ ಮೋದಿ ಸೂಕ್ತ ಎಂದು ಹೇಳಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇಕಡಾ 16 ರಷ್ಟು ಜನರು ಮಾತ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಬಯಸಿದ್ದಾರೆ. ಉಳಿದವರು ದೇಶಾದ್ಯಂತ ಹಲವಾರು ನಾಯಕರ ಹೆಸರುಗಳನ್ನು ಹೇಳಿದ್ದಾರೆ. 2022ರ ಜನವರಿಗೆ ಹೋಲಿಕೆ ಮಾಡಿದಾಗ ನರೇಂದ್ರ ಮೋದಿಯವರ ಜನಪ್ರಿಯತೆಯಲ್ಲಿ ಯಾವುದೇ ಏರಿಳಿತ ಕಂಡಿಲ್ಲ, ಆದರೆ ರಾಹುಲ್ ಗಾಂಧಿ ಅವರ ಜನಪ್ರಿಯತೆ ಹೆಚ್ಚಾಗಿರುವುದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
2022ರ ಜನವರಿಯಲ್ಲಿ ಶೇಕಡಾ 7 ರಷ್ಟು ಮಂದಿ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಹೇಳಿದ್ದರೆ, 2023ರ ಆಗಸ್ಟ್‌ನಲ್ಲಿ ಅದು ಶೇಕಡಾ 16ಕ್ಕೆ ಹೆಚ್ಚಾಗಿದೆ.












Click it and Unblock the Notifications