ಮುಂದಿನ 48 ಗಂಟೆಯಲ್ಲಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 08: ಬಂಗಾಳ ಕೊಲ್ಲಿಯಲ್ಲಿ ತೀವ್ರವಾಗಿ ವಾಯುಭಾರ ಕುಸಿಸತವಾಗಿರುವ ಕಾರಣ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಸೃಷ್ಠಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದಲ್ಲಿ ಸಹ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ, ಬೆಂಗಳೂರು ಸೇರಿದಂತೆ ಒಳನಾಡಿನ ಅಲ್ಲಲ್ಲಿ ಸತತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಕೇರಳ, ತಮಿಳುನಾಡು, ಒಡಿಸ್ಸಾಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಎರಡರಲ್ಲೂ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕೇರಳದಲ್ಲಿ ಅಲರ್ಟ್ ಘೋಷಿಸಲಾಗಿದೆ. ಒಡಿಸ್ಸಾಕ್ಕೂ ತೀವ್ರ ಮಳೆಯ ಎಚ್ಚರಿಕೆ ನೀಡಿದೆ.












Click it and Unblock the Notifications