LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ
ಅಡುಗೆ ಅನಿಲದ ಅಕ್ರಮ ದಾಸ್ತಾನು ತಡೆಯಲು ಮತ್ತು ಎಲ್ಲರಿಗೂ ಸಮಾನವಾಗಿ ಗ್ಯಾಸ್ ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶೀಯ ಎಲ್ಪಿಜಿ ಸಿಲಿಂಡರ್ (LPG Cylinder) ಮರು ಬುಕಿಂಗ್ ಅವಧಿಯನ್ನು ಹೆಚ್ಚಿಸಿದೆ. ಸಿಲಿಂಡರ್ ರಿಫಿಲ್ ಬುಕ್ಕಿಂಗ್ ಮಾಡಲು ಇರುವ ಕನಿಷ್ಠ ಕಾಯುವ ಅವಧಿಯನ್ನು 21ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಕ್ರಮದಿಂದ ಸಿಲಿಂಡರ್ಗಳ ಅತಿಯಾದ ಬುಕ್ಕಿಂಗ್ ಹಾಗೂ ಸಂಗ್ರಹಣೆ ನಿಯಂತ್ರಣವಾಗುವ ಜೊತೆಗೆ ಎಲ್ಲಾ ಗ್ರಾಹಕರಿಗೂ ಗ್ಯಾಸ್ ಸರಬರಾಜು ಸಮನಾಗಿ ತಲುಪಲು ಸಹಾಯವಾಗಲಿದೆ.
ಈ ಹಿಂದೆ ಇದ್ದ 21 ದಿನಗಳ ಕನಿಷ್ಠ ಕಾಯುವ ಅವಧಿಯನ್ನು ಈಗ 25 ದಿನಗಳಿಗೆ ಹೆಚ್ಚಿಸಲಾಗಿದೆ. ಅಂದರೆ, ಒಂದು ಸಿಲಿಂಡರ್ ಪಡೆದ 25 ದಿನಗಳ ನಂತರವಷ್ಟೇ ಮುಂದಿನ ಸಿಲಿಂಡರ್ ಬುಕ್ ಮಾಡಲು ಅವಕಾಶವಿರುತ್ತದೆ. ಗ್ಯಾಸ್ ಸಂಗ್ರಹಣೆ ತಡೆಯುವುದು ಮತ್ತು ಪೂರೈಕೆಯಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಸರ್ಕಾರದ ಈ ನಿರ್ಧಾರದ ಹಿಂದಿನ ಮುಖ್ಯ ಉದ್ದೇಶ ಎಂದು ಮೂಲಗಳು ತಿಳಿಸಿವೆ.

ಗೃಹ ಸಿಲಿಂಡರ್ಗೆ ಮೊದಲ ಆದ್ಯತೆ
ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಕಾಯ್ದಿರಿಸುತ್ತಿದ್ದ ಗ್ರಾಹಕರು, ಈಗ ಕೇವಲ 15 ದಿನಗಳಲ್ಲೇ ಮರುಬುಕಿಂಗ್ ಮಾಡುತ್ತಿರುವ ಪ್ರಕರಣಗಳು ಕಂಡುಬಂದಿವೆ. ಇದನ್ನು ತಡೆಯುವುದು ಸರ್ಕಾರದ ಉದ್ದೇಶವಾಗಿದೆ. ಎಲ್ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸುವಂತೆ ತೈಲ ಸಂಸ್ಕರಣಾಗಾರಗಳಿಗೆ ಸರ್ಕಾರ ಆದೇಶಿಸಿದೆ. ವಾಣಿಜ್ಯ ಸಿಲಿಂಡರ್ ಪೂರೈಕೆಗಿಂತ ಗೃಹಬಳಕೆಯ ಎಲ್ಪಿಜಿ ಪೂರೈಕೆಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚಿಸಿದೆ.
ಗೃಹಬಳಕೆಯ ಗ್ರಾಹಕರ ಹಿತಾಸಕ್ತಿಯೇ ನಮಗೆ ಮುಖ್ಯ ಎಂದು ತಿಳಿಸಿದೆ. ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಎಲ್ಪಿಜಿ ಪಾಲುದಾರ ರಾಷ್ಟ್ರಗಳಿಗಾಗಿ ಭಾರತ ಹುಡುಕಾಟ ನಡೆಸುತ್ತಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆಯಂತಹ ದೇಶಗಳು ಭಾರತಕ್ಕೆ ಎಲ್ಪಿಜಿ ಮಾರಾಟ ಮಾಡಲು ಮುಂದೆ ಬಂದಿವೆ ಎಂದು ಹೇಳಿದೆ.
ಪೆಟ್ರೋಲ್ ಬಂಕ್ಗಳಲ್ಲಿ ಇಂಧನದ ಕೊರತೆಯಿಲ್ಲ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸದ್ಯಕ್ಕೆ ಸ್ಥಿರವಾಗಿರಲಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 130 ಡಾಲರ್ ದಾಟದ ಹೊರತು ದೇಶೀಯ ಬೆಲೆಯಲ್ಲಿ ವ್ಯತ್ಯಯವಾಗದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 100 ಡಾಲರ್ ಆಸುಪಾಸಿನಲ್ಲಿದೆ. ದೇಶದ ಯಾವುದೇ ಪೆಟ್ರೋಲ್ ಬಂಕ್ಗಳಲ್ಲಿ ಇಂಧನದ ಕೊರತೆಯಿಲ್ಲ ಮತ್ತು ಪೂರೈಕೆ ಸುಗಮವಾಗಿದೆ ಎಂದು ಸರ್ಕಾರ ಭರವಸೆ ನೀಡಿದೆ. ಮಧ್ಯಪ್ರಾಚ್ಯದ ಪ್ರಮುಖ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತವು ಈಗಾಗಲೇ ಇತರ ಮಾರ್ಗಗಳಿಂದ ಕಚ್ಚಾ ತೈಲ ಖರೀದಿಯನ್ನು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಯಾನ ಇಂಧನ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಭಾರತವು ಎಟಿಎಫ್ ರಫ್ತು ಮಾಡುವ ದೇಶವಾಗಿರುವುದರಿಂದ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದೂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಂತರರಾಷ್ಟ್ರೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಭಾರತವು 'ಹಾರ್ಮುಜ್ ಜಲಸಂಧಿ'ಯನ್ನು ಹೊರತುಪಡಿಸಿ ಪರ್ಯಾಯ ಮಾರ್ಗಗಳ ಮೂಲಕ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಚುರುಕುಗೊಳಿಸಿದೆ. ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೂ ಭಾರತವು ಇತರ ದೇಶಗಳಿಗಿಂತ ಉತ್ತಮ ಸ್ಥಿತಿಯಲ್ಲಿದೆ. ಹಲವು ದೇಶಗಳು ಕೂಡ ಭಾರತದ ಇಂಧನ ಸಂಗ್ರಹ ಮತ್ತು ಸರಬರಾಜು ವ್ಯವಸ್ಥೆ ಬಗ್ಗೆ ಮಾಹಿತಿ ಕೇಳುತ್ತಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಎಲ್ಪಿಜಿ ದರಗಳು ಭಾರೀ ಏರಿಕೆ ಕಂಡಿರುವುದು ದೇಶದಾದ್ಯಂತ ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications