LPG Cylinder Price: ಬೆಂಗಳೂರು ಸೇರಿ ದೇಶಾದ್ಯಂತ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ: ಗುಡ್‌ನ್ಯೂಸ್
LPG Cylinder Price: ಬೆಂಗಳೂರು ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಭರ್ಜರಿ ಇಳಿಕೆಯಾಗಿದೆ. ಇರಾನ್ Vs ಅಮೆರಿಕ, ಇಸ್ರೇಲ್ ದೇಶಗಳ ನಡುವೆ ಇದೇ ಫೆಬ್ರವರಿಯಲ್ಲಿ ಪ್ರಾರಂಭವಾದ ಯುದ್ಧವು ಇನ್ನೂ ಮುಂದುವರಿದಿದೆ. ಈ ದೇಶಗಳ ನಡುವೆ ನಡೆದ ಯುದ್ಧವು ಸುದೀರ್ಘ ಅವಧಿಗೆ ಮುಂದುವರಿದಿದೆ. ಪಶ್ಚಿಮ ಏಷ್ಯಾದಲ್ಲಿನ ನಡೆಯುತ್ತಿರುವ ಸಂಘರ್ಷದ ಹೊರತಾಗಿಯೂ ತೈಲ ಮಾರುಕಟ್ಟೆ ಕಂಪನಿಗಳು ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿವೆ ಇದರ ಸಂಪೂರ್ಣ ವಿವರ ಇಲ್ಲಿದೆ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಆರಂಭವಾದ ನಂತರ ಇದೀಗ 2ನೇ ಬಾರಿಗೆ ಸರ್ಕಾರಿ ಸ್ವಾಮ್ಯದ ತೈಲೋತ್ಪನ್ನ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು ಇಳಿಕೆ ಮಾಡಿವೆ. ಈ ಮೂಲಕ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ನಿಟ್ಟುಸಿರು ಬಿಡುವಂತೆ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶುರುವಾದ ನಂತರ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಭಾರೀ ಹೆಚ್ಚಳವಾಗಿತ್ತು. ಅಲ್ಲದೆ ಗ್ಯಾಸ್ ಸಿಲಿಂಡರ್‌ಗಳ ಬೆಲೆಯೂ ಸಹ ಹೆಚ್ಚಳವಾಗಿತ್ತು.

ಪರಿಸ್ಥಿತಿ ಈ ರೀತಿ ಇರುವಾಗ ಕೇಂದ್ರ ಸರ್ಕಾರವು ಇದಕ್ಕೆ ಕೆಲವೊಂದು ಪರಿಹಾರಗಳನ್ನು ಕಂಡುಕೊಂಡಿತ್ತು. ಇದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಅಭಾವವು ಅಲ್ಪ ಪ್ರಮಾಣದಲ್ಲಿ ಇಳಿದಿತ್ತು. ಇದೀಗ ಬೆಲೆ ಸಹ ಇಳಿಕೆ ಆಗಿರುವುದು ಖುಷಿ ನೀಡಿದೆ. ಬೆಂಗಳೂರು ಸೇರಿದಂತೆ ಯಾವ ನಗರಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.
ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯು ಆಗಸ್ಟ್ 1ರಂದು 209 ರೂಪಾಯಿ ಇಳಿಕೆಯಾಗಿದ್ದು, ಇದೀಗ 2,872 ರೂಪಾಯಿ ಆಗಿದೆ. ಇದೇ ಜುಲೈ 1ರಂದು ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 183.50 ರೂಪಾಯಿ ಕಡಿಮೆ ಮಾಡಲಾಗಿತ್ತು. ಇನ್ನು ಕಳೆದ ತಿಂಗಳು ಸಿಲಿಂಡರ್ ಬೆಲೆಯು 3,113 ರೂಪಾಯಿ ಆಗಿತ್ತು. ಇದೀಗ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿರುವುದರ ನಡುವೆಯೂ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟಾಗಿದೆ
ಗ್ಯಾಸ್ ಸಿಲಿಂಡರ್ ಬೆಲೆಯು ಬೆಂಗಳೂರಿನಲ್ಲೂ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯು 200 ರೂಪಾಯಿ ಇಳಿಕೆಯಾಗಿದ್ದು, ಹೊಸ ಪರಿಷ್ಕರಣೆಯ ನಂತರ ವಾಣಿಜ್ಯ ಸಿಲಿಂಡರ್ ಬೆಲೆಯು 2,821 ರೂಪಾಯಿ ಆಗಿದೆ.
ಪೆಟ್ರೋಲ್ - ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಕಡಿಮೆ ಆಗಿರುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಇಳಿಕೆ ಆಗಿದೆ. ಹೀಗಾಗಿ ಇದೀಗ ಬೆಲೆ ಇಳಿಸುವುದಕ್ಕೆ ತೈಲ ಕಂಪನಿಗಳು ಮುಂದಾಗಿವೆ. ಆದರೆ, 14.2 ಕೆ.ಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ, ಗೃಹ ಬಳಕೆಯ ಸಿಲಿಂಡರ್ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯು 942 ರೂಪಾಯಿ ಆಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಮಹತ್ವದ ಬದಲಾವಣೆ ಆಗಿಲ್ಲ.


Click it and Unblock the Notifications
