ದೇಶದ ಜನತೆಗೆ ಮೋದಿ ಭರ್ಜರಿ ಗಿಫ್ಟ್: ಅಡುಗೆ ಅನಿಲ ಬೆಲೆ 200 ಇಳಿಕೆ!?

ದೆಹಲಿ,ಆಗಸ್ಟ್‌ 29: ದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ.ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ರೂ 200 ಹೆಚ್ಚುವರಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಆಗಸ್ಟ್ 30 ರಿಂದ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಆಗಸ್ಟ್ 30 ರಿಂದ 200 ರೂಪಾಯಿ ಇಳಿಕೆಯಾಗಲಿದ್ದು, ಕೇಂದ್ರ ಕ್ಯಾಬಿನೆಟ್ ಸಿಲಿಂಡರ್ ಇಳಿಕೆಗೆ ಅನುಮತಿ ನೀಡಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಸಿಎನ್‌ಬಿಸಿಟಿ ವರದಿ ಪ್ರಕಾರ ಅಡುಗೆ ಅನಿಲ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಲಿದೆ ಎಂದು ಇಂಡಿಯಾ ಟಿವಿ ನ್ಯೂಸ್‌ ವರದಿ ಮಾಡಿದೆ.

LPG Cylinder Prices May Come Down By Rs 200, Govt To Announce Decision Soon

ಕಳೆದ ಕೆಲವು ತಿಂಗಳುಗಳಿಂದ ಬಹುತೇಕ ಎಲ್ಲ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚೇ ಇರುವ ಕಾರಣ ಮಧ್ಯಮ ವರ್ಗದವರಿಗೆ ಇದೊಂದು ಸಂತಸದ ಸುದ್ದಿಯಾಗಿದೆ. ಎಲ್‌ಪಿಜಿ ದರ ಕಡಿತದಿಂದ ಜನರಿಗೆ ದೊಡ್ಡ ನೆಮ್ಮದಿ ಸಿಗಲಿದ್ದು, 14 ಕೆಜಿ ಎಲ್‌ಜಿಪಿ ಸಿಲಿಂಡರ್‌ನ ಪ್ರಸ್ತುತ ಬೆಲೆ ಸುಮಾರು 1,100 ರೂ.

ಸದ್ಯ 14.2 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ ಕರ್ನಾಟಕದಲ್ಲಿ 1,105.50 ರೂಪಾಯಿ ಇದ್ದರೆ, ದೆಹಲಿಯಲ್ಲಿ 1053, ಮುಂಬೈನಲ್ಲಿ 1052.50 ರೂಪಾಯಿ, ಚೆನ್ನೈನಲ್ಲಿ 1079 ರೂಪಾಯಿ ದರವಿದೆ. ಈ ಬೆಲೆಯಲ್ಲಿ 200 ರೂಪಾಯಿ ಕಡಿತಗೊಳ್ಳಲಿದೆ ಎಂದು ವರದಿಯಾಗಿದೆ.

LPG Cylinder Prices May Come Down By Rs 200, Govt To Announce Decision Soon

ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸಹಾಯಕವಾಗಲಿದೆ. ಪ್ರಮುಖ ರಾಜ್ಯಗಳು- ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಈ ವರ್ಷದ ಕೊನೆಯಲ್ಲಿ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ.

ಆಗಸ್ಟ್ 27 ರ ಭಾನುವಾರದಂದು, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು 450 ರೂಗಳಿಗೆ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸುವುದು ಸೇರಿದಂತೆ ಹಲವಾರು ಚುನಾವಣಾ ಘೋಷಣೆಗಳನ್ನು ಮಾಡಿದರು. ಮಹಿಳೆಯರಿಗೆ ಪವಿತ್ರವಾದ ಶ್ರಾವಣ ಮಾಸದಲ್ಲಿ 450 ರೂ.ಗೆ ಅಡುಗೆ ಅನಿಲ ಸಿಗುತ್ತದೆ. ನಂತರ ಈ ನಿಟ್ಟಿನಲ್ಲಿ ಶಾಶ್ವತ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+