LPG Good News: ಶೀಘ್ರವೇ ಇವರಿಗೂ ಸಿಗಲಿದೆ ಎಲ್ಪಿಜಿ ಸಂಪರ್ಕ, ಇಲ್ಲಿದೆ ಗುಡ್ನ್ಯೂಸ್
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಈಗಾಗಲೇ ಎಲ್ಪಿಜಿ ಸಿಲಿಂಡರ್ ಸಂಪರ್ಕಗಳನ್ನು ನೀಡಿದೆ. ಅಲ್ಲದೆ ಸಬ್ಸಿಡಿ ಮೂಲಕ ಮನೆ ಮನೆಗೆ ಎಲ್ಪಿಜಿ ಪೂರೈಕೆ ಮಾಡುತ್ತಿದೆ. ಇದೀಗ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಉಜ್ವಲ ಯೋಜನೆಯಡಿ ಕೊಳಚೆ ಪ್ರದೇಶಗಳಲ್ಲಿ ವಾಸಿಸುವವರಿಗೂ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ. ಮಾಲಿನ್ಯ ನಿಯಂತ್ರಣ ಹಾಗು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ಸರ್ಕಾರವು ಉಜ್ವಲ ಯೋಜನೆಯನ್ನು ಕೊಳೆಗೇರಿ ನಿವಾಸಿಗಳಿಗೂ ವಿಸ್ತರಿಸಲಿದೆ ಎಂದು ವರದಿಯಾಗಿದೆ.
ಕೊಳಚೆ ಪ್ರದೇಶಗಳಲ್ಲಿ ಅಡುಗೆಗಾಗಿ ಒಲೆಗಳನ್ನು ಇಂದಿಗೂ ಬಳಕೆ ಮಾಡಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ಮಾತ್ರವಲ್ಲದೆ, ಆರೋಗ್ಯಕ್ಕೂ ಹಾನಿಕಾರಕ ಎಂದು ಹೇಳಲಾಗಿದೆ. ಶುದ್ಧ ಇಂಧನ ಮತ್ತು ಸುಸ್ಥಿರ ಜೀವನವನ್ನು ಉತ್ತೇಜಿಸಲು ಮಾಲಿನ್ಯಕಾರಕ ಅಡುಗೆ ಇಂಧನಗಳನ್ನು ಅವಲಂಬಿಸಿರುವ ಕುಟುಂಬಗಳನ್ನು ಗುರುತಿಸಲು ಕೊಳಚೆ ಪ್ರದೇಶಗಳಲ್ಲಿ ನಗರಾದ್ಯಂತ ಸಮೀಕ್ಷೆ ನಡೆಸುವಂತೆ ದೆಹಲಿ ಸಿಎಂ ರೇಖಾ ಗುಪ್ತಾ ದೆಹಲಿ ನಗರ ಆಶ್ರಯ ಸುಧಾರಣಾ ಮಂಡಳಿಗೆ ಸೂಚನೆ ನೀಡಿದ್ದಾರೆ.

ದೆಹಲಿ ಸರ್ಕಾರವು ಉಜ್ವಲ ಯೋಜನೆಯಡಿಯಲ್ಲಿ ಅಂತಹ ಮನೆಗಳಿಗೆ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಯೋಜನೆ ರೂಪಿಸಿದೆ. ಈ ಕಾರ್ಯಕ್ರಮವು ವಿಶೇಷವಾಗಿ ಹೆಚ್ಚಿನ ಜನಸಂಖ್ಯಾ ಸಾಂದ್ರತೆಯಿರುವ ಪ್ರದೇಶಗಳಲ್ಲಿ. ಸಾರ್ವಜನಿಕ ಆರೋಗ್ಯವನ್ನು ಹೆಚ್ಚಿಸಲು ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತದೆ ಎಂದು ಗುಪ್ತಾ ಹೇಳಿದ್ದಾರೆ. ಮಾಲಿನ್ಯ ನಿಯಂತ್ರಣ ಕಾರ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದು ಅವರು ಒತ್ತಿ ಹೇಳಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಒಂದು ಪ್ರಮುಖ ಸರ್ಕಾರಿ ಯೋಜನೆಯಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಮನೆಗಳಿಗೆ ಶುದ್ಧ ಅಡುಗೆ ಇಂಧನ ಎಲ್ಪಿಜಿ ಪೂರೈಸುತ್ತದೆ. ವಾಯು ಮಾಲಿನ್ಯ ಮತ್ತು ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಉರುವಲು, ಕಲ್ಲಿದ್ದಲು ಮತ್ತು ಹಸುವಿನ ಸಗಣಿ ಮೇಲಿನ ಅವಲಂಬನೆಯನ್ನು ಕಡಿತಗೊಳಿಸುವ ಮೂಲಕ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಿಸುವುದು ಈ ಯೋಜನೆಯ ಗುರಿ.
ಒಲೆಗಳು ಮತ್ತು ಕಲ್ಲಿದ್ದಲು ಬರ್ನರ್ಗಳಿಂದ ಬರುವ ಹೊಗೆಯು ವಾಯು ಮಾಲಿನ್ಯಕ್ಕೆ ಕಾರಣವಾಗುವುದಲ್ಲದೆ, ನಿವಾಸಿಗಳಿಗೆ ಗಂಭೀರ ಆರೋಗ್ಯ ಅಪಾಯಗಳನ್ನುಂಟುಮಾಡುತ್ತದೆ ಎಂದು ಸಿಎಂ ಗುಪ್ತಾ ಹೇಳಿದ್ದಾರೆ. ಕೊಳೆಗೇರಿಗಳಲ್ಲಿನ ಒಲೆಗಳು, ಬೆಂಕಿಗೂಡುಗಳಿಂದ ಹೊರಬರುವ ಹೊಗೆ ಪರಿಸರವನ್ನು ಕಲುಷಿತಗೊಳಿಸುತ್ತವೆ. ಅಲ್ಲಿ ವಾಸಿಸುವ ಕುಟುಂಬಗಳ ಆರೋಗ್ಯಕ್ಕೂ ಗಂಭೀರ ಅಪಾಯ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳು ಕಣಗಳನ್ನು ನಿಯಂತ್ರಿಸಲು ನೀರು ಸಿಂಪರಣೆ, ಯಾಂತ್ರಿಕ ಧೂಳು ನಿಗ್ರಹ ಮತ್ತು ರಸ್ತೆ ದುರಸ್ತಿ ಸೇರಿದಂತೆ ಲಭ್ಯವಿರುವ ಎಲ್ಲಾ ನೈರ್ಮಲ್ಯ ಸಂಪನ್ಮೂಲಗಳನ್ನು ಬಳಸುತ್ತಿವೆ. ಇದು ಮಾಲಿನ್ಯ ಮುಕ್ತ ದೆಹಲಿಗೆ ತಮ್ಮ ಆಡಳಿತದ ಬದ್ಧತೆ. ಎಲ್ಲ ನಿವಾಸಿಗಳಿಗೆ ಶುದ್ಧ ಗಾಳಿ ಮತ್ತು ಆರೋಗ್ಯಕರ ಜೀವನ ಪರಿಸ್ಥಿತಿಗಳನ್ನು ಖಚಿತಪಡಿಸಿಕೊಳ್ಳಲು ಇಲಾಖೆಗಳು ನಗರದಾದ್ಯಂತ ಸಮನ್ವಯ ಸಾಧಿಸುತ್ತಿವೆ ಎಂದಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications