LPG Price Hike: ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ದಿಢೀರ್ ಹೆಚ್ಚಳ, ಇಂದಿನಿಂದಲೇ ಜಾರಿ!, ಎಲ್ಲೆಲ್ಲಿ ಎಷ್ಟು?, ಇಲ್ಲಿದೆ ವಿವರ
ನವದೆಹಲಿ, ಅಕ್ಟೋಬರ್, 1: ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇದಿನಿಂದ ಹೆಚ್ಚಿಸಿವೆ ಎಂದು ಎಎನ್‌ಐನಿಂದ ತಿಳಿದುಬಂದಿದೆ. ಈ ಪ್ರಕಾರ ಇಂದು (ಅಕ್ಟೋಬರ್ 1) ಜಾರಿಗೆ ಬರುವಂತೆ 19 ಕೆ.ಜಿ.ಯ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂಪಾಯಿ ಹೆಚ್ಚಿಸಲಾಗಿದೆ. ಈಗ ನವದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ 1731.50 ರೂಪಾಯಿಗೆ ಮಾರಾಟ ಆಗುತ್ತಿದೆ ಎಂದು ತಿಳಿದುಬಂದಿದೆ.

ಒಂದು ತಿಂಗಳ ಹಿಂದೆ, ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು 200 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಆದರೆ ಈಗ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರವನ್ನು ದಿಢೀರ್ 209 ರೂಪಾಯಿನಷ್ಟು ಏರಿಕೆ ಮಾಡಿದ್ದು, ಇದರಿಂದ ಈಗಾಗಲೇ ದಿನಸಿ ಧಾನ್ಯಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೀಡಾಗಿರುವ ಹೊಟೇಲ್ ಹಾಗೂ ಇತರ ಆಹಾರೋದ್ಯಮ ನಡೆಸುತ್ತಿರುವವರಿಗೆ ಮತ್ತಷ್ಟು ಸಂಕಷ್ಟ ಆಗಲಿದೆ.
Oil marketing companies have increased the prices of commercial LPG gas cylinders. The rate of 19 Kg commercial LPG gas cylinders has been increased by Rs 209 with effect from tomorrow i.e. October 1. Delhi retail sales price of 19 Kg commercial LPG cylinder will be Rs…
— ANI (@ANI) September 30, 2023
ಅಕ್ಟೋಬರ್ 1 ರಿಂದ ಅಂದರೆ ಇಂದಿನಿಂದ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ದರಗಳು ಸ್ಥಿರವಾಗಿರುತ್ತವೆ. ಪ್ರಮುಖ ನಗರಗಳಲ್ಲಿ 14.20 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ದರಗಳನ್ನು ನೋಡುವುದಾದರೆ, ನವದೆಹಲಿಯಲ್ಲಿ 903 ರೂಪಾಯಿ, ಕೋಲ್ಕತ್ತಾದಲ್ಲಿ 929 ರೂಪಾಯಿ, ಮುಂಬೈನಲ್ಲಿ 902.50 ರೂಪಾಯಿ ಮತ್ತು ಚೆನ್ನೈನಲ್ಲಿ 918.50 ರೂಪಾಯಿ ಆಗಿದೆ.
ಇನ್ನು ತೈಲ ಕಂಪನಿಗಳು ಸೆಪ್ಟೆಂಬರ್ 2023ರಲ್ಲಿ ದೇಶೀಯ ಮತ್ತು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದತವನ್ನು ಕಡಿಮೆ ಮಾಡಿದ್ದು, ನವದೆಹಲಿಯಲ್ಲಿ 19 ಕೆ.ಜಿ.ಸಿಲಿಂಡರ್ ಬೆಲೆ 1,522 ರೂಪಾಯಿಗೆ ಇಳಿಸಲಾಗಿದೆ. ಇದೀಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ ಹಿನ್ನೆಲೆ ಹೋಟೆಲ್ ರೆಸ್ಟೋರೆಂಟ್‌ಗಳಲ್ಲಿ ಊಟದ ದರವನ್ನು ಹೆಚ್ಚಿಸಲು ಕಾರಣವಾಗಬಹುದು.
ಈ ತಿಂಗಳ ಆರಂಭದಲ್ಲಿ, ಕೇಂದ್ರ ಸಚಿವ ಸಂಪುಟವು ಉಜ್ವಲ ಯೋಜನೆಯಡಿ ಹೆಚ್ಚುವರಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಅನುಮೋದಿಸಿತು, ಇದನ್ನು ಮುಂದಿನ ಮೂರು ವರ್ಷಗಳಲ್ಲಿ ನೀಡಲಾಗುವುದು. ಈ ಸಂಪರ್ಕಗಳ ಒಟ್ಟು ವೆಚ್ಚ 1,650 ಕೋಟಿ ರೂಪಾಯಿ ಆಗಿರಲಿದೆ.
ಉಜ್ವಲ ಯೋಜನೆಯಡಿ ನೀಡಲಾಗುತ್ತಿರುವ ಅಸ್ತಿತ್ವದಲ್ಲಿರುವ ಠೇವಣಿ-ಮುಕ್ತ ಸಂಪರ್ಕಗಳ ಮುಂದುವರಿಕೆಯಲ್ಲಿ ಈ ಹೊಸ ಸಂಪರ್ಕಗಳನ್ನು ನೀಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮೀಣ ಕುಟುಂಬಗಳ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಡುಗೆಗಾಗಿ ಮರವನ್ನು ಅವಲಂಬಿಸಿರುವ ಕುಟುಂಬಗಳಿಗೆ 75 ಲಕ್ಷ ಹೊಸ ಸಂಪರ್ಕಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಈ ಠೇವಣಿ-ಮುಕ್ತ ಸಂಪರ್ಕಗಳನ್ನು ನೀಡುವ ವೆಚ್ಚವನ್ನು ಕೇಂದ್ರ ಸರ್ಕಾರವು ಭರಿಸಲಿದೆ, ನಂತರ ಅದನ್ನು ತೈಲ ಮಾರುಕಟ್ಟೆ ಕಂಪನಿಗಳು ಮರುಪಾವತಿ ಮಾಡುತ್ತವೆ ಎಂದು ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications