ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಹಕರಿಗೆ ಶಾಕ್ : ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 100 ರೂ. ಏರಿಕೆ

|
Google Oneindia Kannada News

ನವದೆಹಲಿ, ಡಿಸೆಂಬರ್ 01: ಲಾಕ್‌ಡೌನ್ ಬಳಿಕ ದಿನೇ ದಿನೇ ದೇಶದಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ.

ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ದರ ಹೆಚ್ಚಿಸಿವೆ. ಇದೀಗ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 100 ರೂ. ಏರಿಸಲಾಗಿದೆ.

100 ರೂ. ಏರಿಕೆಯೊಂದಿಗೆ ಸದ್ಯಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ 2,101 ರೂ.ಗೆ ಲಭ್ಯವಾಗುತ್ತಿದೆ. ಈ ಹಿಂದೆ, ನವೆಂಬರ್ 1 ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ದರವನ್ನು 266 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಗೃಹ ಬಳಕೆ ಎಲ್‌ಪಿಜಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

LPG Price Hike: Commercial LPG Price Increased By Rs 100

ತೈಲ, ತರಕಾರಿ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರು ಈಗಾಗಲೇ ಕಂಗಾಲಾಗಿದ್ದಾರೆ. ಈ ನಡುವೆಯೇ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಲಾಗಿದೆ. ವಾಣಿಜ್ಯ ಸಿಲಿಂಡರ್‌ ಬೆಲೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಆಹಾರ ಮತ್ತು ಪಾನೀಯಗಳ ಬೆಲೆ ಕೂಡ ದುಬಾರಿಯಾಗಲಿದೆ.

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ. ಈ ಬೆಲೆ ಏರಿಕೆ ಬಳಿಕ ದೇಶದ ರಾಜಧಾನಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 2101 ರೂಪಾಯಿಗೆ ಏರಿದೆ. ಈ ಹಿಂದೆ ನವೆಂಬರ್ 1 ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 266 ರೂ.ಗಳಷ್ಟು ಹೆಚ್ಚಿಸಲಾಗಿತ್ತು.

ಕಮರ್ಷಿಯಲ್ ಸಿಲಿಂಡರ್ ಬೆಲೆ 100 ರೂ. ಏರಿಕೆಯಾದ ಬಳಿಕ ಕೋಲ್ಕತ್ತಾದಲ್ಲಿ ಸಿಲಿಂಡರ್ ಬೆಲೆ 2177 ರೂ.ಗೆ ಏರಿಕೆಯಾಗಿದ್ದು, ಮುಂಬೈನಲ್ಲಿ 19 ಕೆಜಿ ಸಿಲಿಂಡರ್ 2051 ರೂ.ಗೆ ಮಾರಾಟವಾಗುತ್ತಿದೆ. ಇನ್ನು ಚೆನ್ನೈನಲ್ಲಿ ಕಮರ್ಷಿಯಲ್ ಸಿಲಿಂಡರ್‌ಗೆ 2,234 ರೂಪಾಯಿ ಪಾವತಿಸಬೇಕಾಗುತ್ತದೆ.

ಈ ಹಿಂದೆ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಸಹ ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದ್ದವು. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಂದು 43 ಮತ್ತು ಅಕ್ಟೋಬರ್ 1 ರಂದು 75 ರೂ.ಯಷ್ಟು ಹೆಚ್ಚಿಸಲಾಗಿತ್ತು.

ವಾಣಿಜ್ಯ ಸಿಲಿಂಡರ್‌ನ ದರದಲ್ಲಿ ಮಾತ್ರ ಹೆಚ್ಚಳವಾಗಿದ್ದು, ಗೃಹಬಳಕೆಯ LPG ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದು ಇಲ್ಲಿ ಸಮಾಧಾನದ ಸಂಗತಿ.

ಆದರೆ, ತೈಲ ಕಂಪನಿಗಳು ಸಾಮಾನ್ಯ ಜನರ ಗೃಹ ಬಳಕೆಗಾಗಿ 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸದಿರುವುದುಬಹುದೊಡ್ಡ ನೆಮ್ಮದಿಯ ವಿಚಾರವಾಗಿದೆ. ಇದರ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್ ಬೆಲೆ 899.50 ರೂ.ನಲ್ಲಿ ಬದಲಾಗದೆ ಉಳಿದಿದೆ.

ದೆಹಲಿಯಲ್ಲಿ ಈಗ ಸಬ್ಸಿಡಿರಹಿತ 14.2 ಕೆಜಿ ಸಿಲಿಂಡರ್ ಬೆಲೆ 899.50 ರೂ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 926 ರೂ., ಮುಂಬೈನಲ್ಲಿ 899.50 ರೂ., ಚೆನ್ನೈನಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಈಗ 915.50 ರೂ.

ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಅನಿಲದ ಬೆಲೆ 100 ರೂ.ನಿಂದ 2100.50 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 101 ರೂಪಾಯಿ ಏರಿಕೆಯಾಗಿ 2,174.5 ರೂಪಾಯಿಗೆ ತಲುಪಿದೆ. ಮೊದಲು ಇದರ ಬೆಲೆ 2073.5 ರೂ.

ಮುಂಬೈನಲ್ಲಿ ವಾಣಿಜ್ಯ ಗ್ಯಾಸ್ ಬೆಲೆ 2,051 ರೂ.ಗೆ ಏರಿಕೆಯಾಗಿದೆ. ಮೊದಲು ಬೆಲೆ 1,950 ರೂ. ಇಲ್ಲಿ 101 ರೂಪಾಯಿ ಏರಿಕೆಯಾಗಿದೆ. ಅದೇ ಸಮಯದಲ್ಲಿ ಚೆನ್ನೈನಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2,234.50 ರೂ.ಗೆ ಏರಿದೆ. ಈ ಹಿಂದೆ ಬೆಲೆ 2,133 ರೂಪಾಯಿ ಇತ್ತು.

English summary
The price of Liquefied Petroleum Gas or LPG, used for commercial purposes, was hiked yet again on November 1, as per reports quoting news agency ANI. According to a notification, the price of 19 kg commercial cylinder was hiked on Wednesday, December 01, by as much as Rs 100.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X