ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಲೆ. ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಸಿಡಿಎಸ್ ಮುಖ್ಯಸ್ಥ

|
Google Oneindia Kannada News

ನವದೆಹಲಿ, ಸೆ. 28 : ಭಾರತ ಸರ್ಕಾರವು ಬುಧವಾರದಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ರಕ್ಷಣಾ ಸಿಬ್ಬಂದಿಯ ಮುಂದಿನ ಮುಖ್ಯಸ್ಥರನ್ನಾಗಿ (ಸಿಡಿಎಸ್) ನೇಮಿಸಿದೆ.

ಇದರ ಜೊತೆಗೆ ಚೌಹಾಣ್ ಅವರು ಸೇನಾ ವ್ಯವಹಾರಗಳ ಇಲಾಖೆ, ಭಾರತ ಸರ್ಕಾರದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್, PVSM, UYSM, AVSM, SM, VSM, ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಈಸ್ಟರ್ನ್ ಕಮಾಂಡ್ ಆಗಿ ಸೇವೆ ಸಲ್ಲಿಸಿದ್ದಾರೆ.

Lt General Anil Chauhan (Retired) will be next Chief of Defence Staff

ರಕ್ಷಣಾ ಸಚಿವಾಲಯದ ಪ್ರಕಾರ, ಸುಮಾರು 40 ವರ್ಷಗಳ ತನ್ನ ವೃತ್ತಿಜೀವನದಲ್ಲಿ, ಸಿಬ್ಬಂದಿ ನೇಮಕಾತಿಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ಭಾರತದಲ್ಲಿ ಪ್ರತಿಬಂಡಾಯ ಕಾರ್ಯಾಚರಣೆಗಳಲ್ಲಿ ವ್ಯಾಪಕ ಅನುಭವವನ್ನು ಹೊಂದಿದ್ದಾರೆ.

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು 1981 ರಲ್ಲಿ ಭಾರತೀಯ ಸೇನೆಯ 11 ಗೂರ್ಖಾ ರೈಫಲ್ಸ್‌ಗೆ ನಿಯೋಜಿಸಲಾಗಿತ್ತು. ಅವರು ಕಾಲಾಳು ದಳದ ವಿಭಾಗಕ್ಕೆ ಕಮಾಂಡರ್ ಆಗಿದ್ದರು.

ಸೆಪ್ಟೆಂಬರ್ 2019 ರಲ್ಲಿ ಪೂರ್ವ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿದ್ದರು. ಮೇ 31, 2021 ರಂದು ಸೇವೆಯಿಂದ ನಿವೃತ್ತರಾಗುವವರೆಗೆ ಅಧಿಕಾರವನ್ನು ಹೊಂದಿದ್ದರು.

English summary
Lieutenant General Anil Chauhan (Retired) will be next Chief of Defence Staff (CDS) announced Ministry of Defence. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X