Lucknow building collapse: ಲಕ್ನೋದಲ್ಲಿ ವಸತಿ ಕಟ್ಟಡ ಕುಸಿದು ಮೂರು ಸಾವು, ಹಲವರು ಸಿಲುಕಿರುವ ಶಂಕೆ

ಉತ್ತರ ಪ್ರದೇಶದ ಲಕ್ನೋದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಹಲವರು ಅವಶೇಶಗಳ ಅಡಿ ಸಿಲುಕಿದ್ದಾರೆ.

ಲಕ್ನೋ, ಜನವರಿ. 24: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.

ಘಟನೆಯಲ್ಲಿ ಎಂಟು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಯುಪಿ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಅವರು ಸ್ಥಳದಲ್ಲಿದ್ದು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ ತಂಡಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

Lucknow building collapses, Three dead, several trapped

ಲಕ್ನೋದ ಹಜರತ್‌ಗಂಜ್‌ನಲ್ಲಿ ಈ ದುರಂತ ಘಟನೆ ನಡೆದಿದೆ. ಹಜರತ್‌ಗಂಜ್ ಪ್ರದೇಶವು ಹಳೆಯ ಕಟ್ಟಡಗಳಿಂದ ಕೂಡಿದೆ. ಮಂಗಳವಾರ ಕುಸಿದು ಬಿದ್ದ ನಾಲ್ಕು ಅಂತಸ್ತಿನ ವಸತಿ ಕಟ್ಟಡವನ್ನು ಅಲಯ ಅಪಾರ್ಟ್‌ಮೆಂಟ್ ಎಂದು ಕರೆಯಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು,ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಿರುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+