13ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವೆಂಕಯ್ಯ ನಾಯ್ಡು
ನವದೆಹಲಿ, ಆಗಸ್ಟ್ 11: ದೇಶದ 13ನೇ ಉಪರಾಷ್ಟ್ರಪತಿಯಾಗಿ ಎಂ ವೆಂಕಯ್ಯ ನಾಯ್ಡು ಪ್ರಮಾಣವಚನ ಸ್ವೀಕರಿಸಿದರು.
ವೆಂಕಯ್ಯ ನಾಯ್ಡು ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಷ್ಟ್ರಪತಿ ಭವನದಲ್ಲಿ ಈ ಕಾರ್ಯಕ್ರಮ ನಡೆಯಿತು.

ಮಾಜಿ ಪ್ರಧಾನಿ ಡಾ ಮನ್ ಮೋಹನ್ ಸಿಂಗ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ವೆಂಕಯ್ಯ ನಾಯ್ಡು ಪಟೇಲ್ ಚಾಕ್ ಗೆ ತರಳಿ ಸರ್ದಾರ್ ವಲ್ಲಭಭಾಯಿ ಪಟೇಲ್, ಡಿಡಿಯು ಪಾರ್ಕ್ ನಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರಿಗೆ ಹಾಗೂ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಮ ನಮನ ಸಲ್ಲಿಸಿದರು.












Click it and Unblock the Notifications