ಮಧ್ಯಪ್ರದೇಶ; ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ!
ಭೋಪಾಲ್, ನವೆಂಬರ್ 16: ಮಧ್ಯಪ್ರದೇಶ ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರಂದು ನಡೆಯಲಿದೆ. ರಾಜ್ಯದ ಆಡಳಿತ ಪಕ್ಷ ಬಿಜೆಪಿ. ಆದರೆ ಚುನಾವಣಾ ಪೂರ್ವ ಸಮೀಕ್ಷೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿದೆ.
ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 17ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 116.

ವಿವಿಧ ಸಂಸ್ಥೆಗಳ ಜೊತೆಗೆ ರಾಷ್ಟ್ರೀಯ ವಾಹಿನಿಗಳು ಮಧ್ಯಪ್ರದೇಶ ರಾಜ್ಯದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯನ್ನು ನಡೆಸಿವೆ. LokPoll ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಗಳ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ; LokPoll ಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ ರಾಜ್ಯದ ಆಡಳಿತ ಪಕ್ಷ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ 84-98 ಸ್ಥಾನಗಳಲ್ಲಿ ಜಯಗಳಿಸಲಿದೆ. ಪಕ್ಷ ಶೇ 39 ರಿಂದ 41ರಷ್ಟು ಮತಗಳಿಸಲಿದೆ.
ರಾಜ್ಯದ ಪ್ರತಿಪಕ್ಷವಾದ ಕಾಂಗ್ರೆಸ್ 130-142 ಸ್ಥಾನಗಳಲ್ಲಿ ಜಯಗಳಿಸಲಿದೆ. ಪಕ್ಷ ಶೇ 45 ರಿಂದ 47ರಷ್ಟು ಮತಗಳನ್ನು ಗಳಿಸಲಿದೆ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.
Presenting you our revised final numbers for the upcoming #MadhyaPradesh elections:
— Lok Poll (@LokPoll) November 15, 2023
▪️INC 130 - 142
▪️BJP 84 - 98
▪️OTH 0 - 4
Sample size: 72,405 #MadhyaPradeshElections2023 #Elections2023 #AssemblyElections2023 pic.twitter.com/fg9y0MBxbC
ಈ ಬಾರಿಯ ಚುನಾವಣೆಯಲ್ಲಿ ಇತರರು 0-4 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. ಶೇ 8 ರಿಂದ 10ರಷ್ಟು ಮತಗಳನ್ನು ಪಡೆಯಲಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆಯ ಅಂತಿಮ ಅಂಕಿ-ಸಂಖ್ಯೆಗಳ ಪ್ರಕಾರ ಬಿಜೆಪಿ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಳ್ಳಲಿದೆ.
ಮೈತ್ರಿ ಸರ್ಕಾರ ಮಾಡಿದ್ದ ಕಾಂಗ್ರೆಸ್; 2018ರ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಕಾಂಗ್ರೆಸ್ 114 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿತ್ತು. ಬಿಜೆಪಿ 109 ಸ್ಥಾನ ಗೆದ್ದಿತ್ತು. ಬಿಎಸ್‌ಪಿ 2, ಎಸ್‌ಪಿ 1 ಮತ್ತು 4 ಪಕ್ಷೇತರ ಶಾಸಕರು ಗೆಲುವು ಸಾಧಿಸಿದ್ದರು.
ಕಾಂಗ್ರೆಸ್ ಎಸ್‌ಪಿ ಮತ್ತು ಬಿಎಸ್‌ಪಿ ಶಾಸಕರ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಕಮಲ್ ನಾಥ್ ಮುಖ್ಯಮಂತ್ರಿಯಾಗಿದ್ದರು. ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು.
ಆಗ ಕಾಂಗ್ರೆಸ್ ಪಕ್ಷದಲ್ಲಿದ್ದ ಹಾಲಿ ಕೇಂದ್ರ ವಿಮಾನಯಾನ ಖಾತೆ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದರು. ಅವರ ಬೆಂಬಲಿಗ ಶಾಸಕರು ಸಹ ಬಿಜೆಪಿ ಸೇರಿದ್ದರಿಂದ ಸಂಖ್ಯಾಬಲ ಕೊರತೆ ಎದುರಿಸಿದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು.
ಬಳಿಕ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾಗಿದ್ದರು. ಈಗ ಮತ್ತೆ ರಾಜ್ಯದಲ್ಲಿ ಚುನಾವಣೆ ಎದುರಾಗಿದೆ. ಆದರೆ ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳು ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿವೆ ಎಂದು ಹೇಳಿವೆ.
ರಾಜ್ಯದ ಮತ್ತು ರಾಷ್ಟ್ರೀಯ ಮಾಧ್ಯಮಗಳ ಚುನಾವಣಾ ವಿಶ್ಲೇಷಣೆ ಪ್ರಕಾರ ಮಧ್ಯಪ್ರದೇಶ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಸ್ವತಃ ಶಿವರಾಜ್ ಸಿಂಗ್ ಚೌವ್ಹಾಣ್ ಪಕ್ಷದಲ್ಲೇ ವಿರೋಧ ಎದುರಿಸುತ್ತಿದ್ದಾರೆ. ಆದ್ದರಿಂದ ಬಿಜೆಪಿ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಹಲವು ದಾಳ ಉರುಳಿಸಿದೆ.
ಚುನಾವಣೆಗೆ ಬಿಜೆಪಿ 7 ಸಂಸದರು, 3 ಕೇಂದ್ರ ಸಚಿವರು, ಬಿಜೆಪಿಯ ಪ್ರಧಾನ ಕಾರ್ಯದರ್ಶಿಯನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಸುಮಾರು 14 ಸಮಾವೇಶಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಕೇಂದ್ರ ಸಚಿವರು, ಸಂಸದರು, ಗುಜರಾತ್ ಮತ್ತು ವಿವಿಧ ರಾಜ್ಯಗಳಿಂದ ಕಾರ್ಯಕರ್ತರು ಆಗಮಿಸಿ ಪ್ರಚಾರವನ್ನು ನಡೆಸಿದ್ದಾರೆ.












Click it and Unblock the Notifications