ಬಿಜೆಪಿಗೆ ಕೈಗೆ ಮತ್ತೆ ಮಧ್ಯಪ್ರದೇಶ; ಎಕ್ಸಿಟ್ ಪೋಲ್‌ಗಳು ಹೇಳಿದ್ದೇನು?
ಭೋಪಾಲ್, ಡಿಸೆಂಬರ್ 01; ಮಧ್ಯಪ್ರದೇಶ ರಾಜ್ಯದಲ್ಲಿ ಈ ಬಾರಿ ಅಧಿಕಾರ ಯಾರಿಗೆ?. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ.
ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಗುರುವಾರ ಪಂಚ ರಾಜ್ಯಗಳ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಿವಿಧ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.

ಗುರುವಾರ ಸಂಜೆ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶ ರಾಜ್ಯದಲ್ಲಿ ಅಧಿಕಾರಕ್ಕೆ ತೀವ್ರ ಪೈಪೋಟಿ ಇದೆ ಎಂಬ ಚಿತ್ರಣವನ್ನು ನೀಡಿವೆ. ಕೆಲವು ಸಮೀಕ್ಷೆಗಳ ಪ್ರಕಾರ ರಾಜ್ಯ ಮತ್ತೆ ಬಿಜೆಪಿ ಕೈ ಸೇರಲಿದೆ. ಕೆಲವು ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.
ಸಮೀಕ್ಷೆಗಳ ಫಲಿತಾಂಶ; Republic TV-Matrize ಚುನಾವಣೋತ್ತರ ಸಮೀಕ್ಷೆ ಬಿಜೆಪಿ ಸರಳ ಬಹುಮತಕ್ಕಿಂತ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸುವ ಮೂಲಕ ಅಧಿಕಾರ ಪಡೆಯಲಿದೆ ಎಂದು ಅಂದಾಜಿಸಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 116. ಸಮೀಕ್ಷೆ ಪ್ರಕಾರ ಬಿಜೆಪಿ 118-130 ಸ್ಥಾನ ಗೆದ್ದರೆ, ಕಾಂಗ್ರೆಸ್ 97-107 ಸೀಟು ಗೆಲ್ಲಲಿದೆ. ಇತರರು 0-2 ಸ್ಥಾನದಲ್ಲಿ ಜಯಗಳಿಸಲಿದ್ದಾರೆ.
ಕಾಂಗ್ರೆಸ್‌ನ ಕಮಲ್‌ನಾಥ್ ಮತ್ತು ಬಿಜೆಪಿಯ ಶಿವರಾಜ್ ಸಿಂಗ್ ಚೌವ್ಹಾಣ್ ನಡುವೆ ರಾಜ್ಯದಲ್ಲಿ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ಅಧಿಕಾರ ಹಿಡಿದರೆ ಕಮಲ್‌ನಾಥ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ಖಚಿತ. ಆದರೆ ಬಿಜೆಪಿ ಗೆದ್ದರೆ ಶಿವರಾಜ್ ಸಿಂಗ್ ಚೌವ್ಹಾಣ್ ಸಿಎಂ ಆಗುವುದರಲ್ಲಿ ಅನುಮಾನವಿದೆ.
ಮತ್ತೊಂದು ಕಡೆ TV 9 Bharatvarsh-Polstrat ಚುನಾವಣೋತ್ತರ ಸಮೀಕ್ಷೆ ಕಾಂಗ್ರೆಸ್ 111-121 ಸೀಟು ಗೆಲ್ಲುವ ಮೂಲಕ ಅಧಿಕಾರ ಪಡೆಯಲಿದೆ. ಬಿಜೆಪಿ 106-116 ಸೀಟು, ಇತರರು 0-6 ಸೀಟು ಎಂದು ಲೆಕ್ಕಾಚಾರವಿದೆ. ಈ ಸಮೀಕ್ಷೆ ಪ್ರಕಾರ ಬಿಜೆಪಿಗೆ ಅಧಿಕಾರ ಕೈ ತಪ್ಪಲಿದೆ.
ಮಧ್ಯ ಪ್ರದೇಶದ ಚುನಾವಣೆ ಬಗ್ಗೆ ಮೊದಲು ಪ್ರಕಟವಾಗಿದ್ದು Jan Ki Baat ಚುನಾವಣೋತ್ತರ ಸಮೀಕ್ಷೆ. ಇದರ ಪ್ರಕಾರ ಕಾಂಗ್ರೆಸ್ 102-125 ಸೀಟು, ಬಿಜೆಪಿ 100-123 ಸೀಟು, ಇತರರು 5 ಸೀಟುಗಳಲ್ಲಿ ಗೆಲುವು ಕಾಣಲಿದ್ದಾರೆ.
ಚುನಾವಣಾ ಸಮೀಕ್ಷೆ ಎಂದು ಬಂದಾಗ ಜನರು ಕಣ್ಣು ಹಾಯಿಸುವುದು ಚಾಣಾಕ್ಯ ಸಂಸ್ಥೆ ನಡೆಸುವ ಸಮೀಕ್ಷೆಯ ಬಗ್ಗೆ. News 24-Today's Chanakya ಸಮೀಕ್ಷೆ ಪ್ರಕಾರ ಮಧ್ಯಪ್ರದೇಶದಲ್ಲಿ ಬಿಜೆಪಿ 151, ಕಾಂಗ್ರೆಸ್ 74 ಮತ್ತು ಇತರರು 5 ಸ್ಥಾನಗಳಲ್ಲಿ ಗೆಲ್ಲಲಿದ್ದಾರೆ.
ಮಧ್ಯಪ್ರದೇಶದ ಅಧಿಕಾರ ಯಾರ ಕೈ ಸೇರಲಿದೆ? ಎಂಬುದನ್ನು ತಿಳಿಯಲು ಡಿಸೆಂಬರ್ 3ರ ತನಕ ಕಾಯಬೇಕಿದೆ. ಭಾನುವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 12.30ರ ವೇಳೆಗೆ ಫಲಿತಾಂಶದ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.
2018ರಲ್ಲಿ ನಡೆದ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತ ಸಿಗದ ಕಾರಣ ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತ್ತು. ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದರು.
ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾದರು. ಈಗ 2024ರ ಲೋಕಸಭೆ ಚುನಾವಣೆಗೂ ಮೊದಲು ಚುನಾವಣೆ ನಡೆಯುತ್ತಿರುವ 5 ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು. 29 ಲೋಕಸಭಾ ಕ್ಷೇತ್ರಗಳಲ್ಲಿ ರಾಜ್ಯ ಒಳಗೊಂಡಿದೆ. ಆದ್ದರಿಂದ ವಿಧಾನಸಭೆ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಮಧ್ಯಪ್ರದೇಶ ವಿವಿಧ ಎಕ್ಸಿಟ್ ಪೋಲ್‌ಗಳ ಅಂಕಿ-ಸಂಖ್ಯೆ
| Sl. No. | Source | BJP | Congress | Others |
| 1 | Dainik Bhaskar | 105-120 | 95-115 | 0 |
| 2 | India Today-Axis My India | 68-90 | 140-162 | 0-2 |
| 3 | Times Now-ETG | 109-125 | 105-117 | 0 |
| 4 | India TV-CNX | 140-159 | 70-89 | 0-2 |
| 5 | Jan Ki Baat | 100-123 | 102-126 | 5 |
| 6 | News 24-Today's Chanakya | 151 | 74 | 5 |
| 7 | Republic TV-Matrize | 118-130 | 97-107 | 0-2 |
| 8 | TV9 Bharatvarsh-Polstart | 106-116 | 111-121 | 0-6 |
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications