ಮಧ್ಯಪ್ರದೇಶ: ಮುಸ್ಲಿಮರ ತಿರಂಗಾ ಯಾತ್ರೆಗೆ ಅಡ್ಡಿಪಡಿಸಿದ ಭಜರಂಗದಳ, ವಿಎಚ್ಪಿ ಸದಸ್ಯರು- ವಿಡಿಯೋ
ಗುನಾ (ಮಧ್ಯಪ್ರದೇಶ) ಆಗಸ್ಟ್ 17: ಮುಸ್ಲಿಮರು ಆಯೋಜಿಸಿದ್ದ ತಿರಂಗ ಯಾತ್ರೆಗೆ ಭಜರಂಗದಳ ಮತ್ತು ವಿಎಚ್ಪಿ ಸದಸ್ಯರು ಅಡ್ಡಿಪಡಿಸಿದ ಘಟನೆ ಮಧ್ಯಪ್ರದೇಶ ಗುನಾದಲ್ಲಿ ನಡೆದಿದೆ. ಇದು ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿದೆ.
ಮಧ್ಯಪ್ರದೇಶ ಗುನಾದಲ್ಲಿ ಬುಧವಾರ ಮುಸ್ಲಿಮರು ಆಯೋಜಿಸಿದ್ದ ತಿರಂಗ ಯಾತ್ರೆ (ತ್ರಿವರ್ಣ ಧ್ವಜ ಮೆರವಣಿಗೆ)ಯನ್ನು ನಡೆಸಿದ್ದರು. ಈ ಯಾತ್ರೆ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಯಾತ್ರೆ ವೇಳೆ ಭಜರಂಗದಳ ಮತ್ತು ವಿಎಚ್ಪಿ (ವಿಶ್ವ ಹಿಂದೂ ಪರಿಷತ್) ಸದಸ್ಯರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಗೆ ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದು ಬಳಿಕ ಎರಡು ಗುಂಪುಗಳ ಘರ್ಷಣೆಗೆ ಕಾರಣವಾಗಿದೆ. ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ, ವಿಎಚ್ಪಿ ಮತ್ತು ಬಜರಂಗದಳದ ಕಾರ್ಯಕರ್ತರು ಆ ಪ್ರದೇಶದಲ್ಲಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಲು ಪ್ರಾರಂಭಿಸಿದರು. ಮುಚ್ಚುವಿಕೆಯನ್ನು ಅನುಸರಿಸದ ಅಂಗಡಿಯನ್ನು ಗುಂಪುಗಳು ಧ್ವಂಸಗೊಳಿಸಿದವು ಮತ್ತು ಬಲವಂತವಾಗಿ ಮುಚ್ಚಿವೆ.
Muslims were taking out the Tiranga Yatra in Madhya Pradesh's Guna when the alleged Bajrang Dal and VHP workers brought the Tiranga Yatra from the front and shouted Jai Shri Ram slogans in the procession being taken out by the Muslims. The Muslims were provoked, and later When… pic.twitter.com/7OPrR85YVu
— Meer Faisal (@meerfaisal01) August 16, 2023
ವಾಗ್ವಾದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯದವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ಘಟನೆಯ ಸಾಕ್ಷಿಯಾಗಿ ವೀಡಿಯೊವನ್ನು ನೀಡಿದ್ದಾರೆ. ಅಡ್ಡಿಪಡಿಸುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಒದಗಿಸಿದ ವಿಡಿಯೋ ತುಣುಕಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ಪರಿಶೀಲನೆ ಆರಂಭಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications