ಮಧ್ಯಪ್ರದೇಶ ಕಾಂಗ್ರೆಸ್ ಪ್ರಣಾಳಿಕೆ: ಎಲ್ಲರಿಗೂ 25 ಲಕ್ಷ ಆರೋಗ್ಯ ವಿಮೆ, ಐಪಿಎಲ್ ತಂಡ ರಚನೆಯ ಭರವಸೆ
ಭೋಪಾಲ್, ಅಕ್ಟೋಬರ್ 17: ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದ್ದಾರೆ.
ಪ್ರತಿಪಕ್ಷ ಕಾಂಗ್ರೆಸ್ ತನ್ನ 106 ಪುಟಗಳ ಪ್ರಣಾಳಿಕೆಯಲ್ಲಿ 59 ಭರವಸೆಗಳನ್ನು ಪಟ್ಟಿ ಮಾಡಿದ್ದು, ರೈತರು, ಮಹಿಳೆಯರು ಮತ್ತು ಸರ್ಕಾರಿ ನೌಕರರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳಿಗೆ ಭರವಸೆಗಳನ್ನು ನೀಡಿದೆ. ರಾಜ್ಯದ ಎಲ್ಲಾ ನಾಗರಿಕರಿಗೆ 25 ಲಕ್ಷ ರೂಪಾಯಿ ಆರೋಗ್ಯ ವಿಮೆ ರಕ್ಷಣೆ, ಒಬಿಸಿಗಳಿಗೆ 27% ಮೀಸಲಾತಿ ಮತ್ತು ರಾಜ್ಯದ ಐಪಿಎಲ್ ತಂಡವನ್ನು ರಚಿಸುವುದು ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದ್ದಾರೆ.

ನಾವು 25 ಲಕ್ಷ ರೂಪಾಯಿ ಆರೋಗ್ಯ ವಿಮೆಯನ್ನು ಒದಗಿಸುತ್ತೇವೆ, ಇದು ಎಲ್ಲಾ ಜನರಿಗೆ 10 ಲಕ್ಷದ ಅಪಘಾತ ರಕ್ಷಣೆಯನ್ನು ಹೊಂದಿದೆ ಎಂದು ಕಮಲ್ ನಾಥ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಮಧ್ಯಪ್ರದೇಶ ಕೂಡ ರಾಜ್ಯದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಂಡವನ್ನು ಹೊಂದಿರುತ್ತದೆ ಎಂದು ಅವರು ಹೇಳಿದರು.
ಕಮಲ್ ನಾಥ್ ಅವರು ₹ 2 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮತ್ತು ಮಹಿಳೆಯರಿಗೆ ತಿಂಗಳಿಗೆ ₹ 1,500 ಆರ್ಥಿಕ ನೆರವು ಘೋಷಿಸಿದರು. ₹ 500ಕ್ಕೆ ಎಲ್‌ಪಿಜಿ ಸಿಲಿಂಡರ್ ನೀಡುವುದಾಗಿ, ಶಾಲಾ ಶಿಕ್ಷಣವನ್ನು ಉಚಿತವಾಗಿ ನೀಡುವುದು, ಹಳೆ ಪಿಂಚಣಿ ಯೋಜನೆ ಜಾರಿ ಮತ್ತು ಯುವಕರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ ₹ 1,500 ರಿಂದ ₹ 3,000 ವರೆಗೆ ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿದರು. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಚುನಾವಣೆ ನಿಗದಿಯಾಗಿದೆ.
2018 ರ ಚುನಾವಣೆಯಲ್ಲಿ, ಕಾಂಗ್ರೆಸ್ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿತ್ತು. ಆದರೆ, ಕಾಂಗ್ರೆಸ್ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಬೆಂಬಲಿಗರ ಜೊತೆ ಬಿಜೆಪಿ ಸೇರಿದರು. 15 ತಿಂಗಳು ಅಧಿಕಾರ ನಡೆಸಿದ್ದ ಕಮಲ್ ನಾಥ್ ನೇತೃತ್ವದ ಸರ್ಕಾರವು ಪತನವಾಯಿತು. ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿತ್ತು.
ಅಕ್ಟೋಬರ್ 9 ರಂದು ಬಿಜೆಪಿ ತನ್ನ ನಾಲ್ಕನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದುವರೆಗೆ ಏಳು ಸಂಸದರ ಹೆಸರನ್ನು ಘೋಷಿಸಿದೆ. ಇದು ಮಧ್ಯಪ್ರದೇಶ ಬಿಜೆಪಿಯಲ್ಲಿ ಆಂತರಿಕ ಕಲಹವನ್ನು ಉಂಟುಮಾಡಿರುವುದು ಬೆಳಕಿಗೆ ಬಂದಿದೆ. ಮೇಲಾಗಿ ಶಿವರಾಜ್ ಸಿಂಗ್ ಚೌಹಾಣ್ ಆಡಳಿತದ ವಿರುದ್ಧದ ಅಲೆಯೂ ಕಾಣಿಸುತ್ತಿದೆ. ಇದು ಬಿಜೆಪಿಗೆ ಸಂಕಷ್ಟ ತಂದೊಡ್ಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.












Click it and Unblock the Notifications