MP Election: 50% ಕಮಿಷನ್ ಆರೋಪದ ಪೋಸ್ಟರ್ ಬಿಟ್ಟ ಕಾಂಗ್ರೆಸ್!
ಭೋಪಾಲ್: ಕರ್ನಾಟಕ ವಿಧಾನಸಭೆ ಚುನಾವಣೆ ಬಳಿಕ ಅತ್ಯುತ್ಸಾಹದಲ್ಲಿ ಮುನ್ನುಗ್ಗಿರುವ ಕಾಂಗ್ರೆಸ್‌ಗೆ, ಮಧ್ಯಪ್ರದೇಶ ಚುನಾವಣೆ ಟ್ವಿಸ್ಟ್ ಕೊಡುವ ನಿರೀಕ್ಷೆ ಇದೆ. ಕರ್ನಾಟಕದ ರೀತಿ ಮಧ್ಯಪ್ರದೇಶದಲ್ಲಿ ಕೂಡ ಬಿಜೆಪಿ ಗೆದ್ದು ಬೀಗುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ತನ್ನ ಚುನಾವಣಾ ತಂತ್ರ ಚುರುಕಾಗಿಸಿದ್ದು, ಹಾಲಿ ಬಿಜೆಪಿ ಸರ್ಕಾರದ ವಿರುದ್ಧ 50% ಕಮಿಷನ್ ಆರೋಪ ಮುಂದಿಟ್ಟು ಕ್ಯಾಂಪೇನ್ ಶುರುಮಾಡಿದೆ.
ಅಂದಹಾಗೆ ಕರ್ನಾಟಕದ ಚುನಾಣೆಗೆ ಕೂಡ ಕಾಂಗ್ರೆಸ್ ಇದೇ ರೀತಿ ರಣತಂತ್ರ ರೂಪಿಸಿತ್ತು. ಈ ಹಿಂದೆ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿ ಇದ್ದ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿತ್ತು. ಈಗ ಮಧ್ಯಪ್ರದೇಶ ಸರ್ಕಾರದ ವಿರುದ್ಧ 50% ಕಮಿಷನ್ ಆರೋಪ ಮಾಡುತ್ತಾ ಎಲೆಕ್ಷನ್‌ಗೆ ಸಿದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಆರೋಪದ ಕುರಿತು ಬಿಜೆಪಿಯ ನಾಯಕರು ಸಿಡಿದೆದ್ದು, ಕಠಿಣ ಕ್ರಮಕ್ಕೂ ಮುಂದಾಗಿದ್ದಾರೆ. ಮಧ್ಯಪ್ರದೇಶದಲ್ಲಿ ತಮ್ಮದೇ ಸರ್ಕಾರ ಆಡಳಿತ ನಡೆಸುತ್ತಿರುವ ಹಿನ್ನೆಲೆ ಈಗಾಗಲೇ ಪ್ರಿಯಾಂಕಾ ವಿರುದ್ಧ ಹತ್ತಾರು ಕೇಸ್ ರಿಜಿಸ್ಟರ್ ಮಾಡಲಾಗಿದೆ. ಇದೇ ಹೊತ್ತಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್ ಕೊಟ್ಟಿದೆ.

50% ಕಮಿಷನ್ ಪೋಸ್ಟರ್ ರಿಲೀಸ್!
ಹೀಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಕೇಸ್ ದಾಖಲಾದ ಕೆಲ ದಿನದಲ್ಲೇ ರಾಜ್ಯದ ಕಾಂಗ್ರೆಸ್ ನಾಯಕರು ಶಾಕ್ ಕೊಟ್ಟಿದ್ದಾರೆ. ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಮಾಡಿರುವ 50% ಕಮಿಷನ್ ಆರೋಪವನ್ನ ಇನ್ನಷ್ಟು ದೊಡ್ಡದು ಮಾಡಿದ್ದಾರೆ. ಈ ಕುರಿತು ಪೋಸ್ಟರ್ ರಿಲೀಸ್ ಮಾಡಿರುವ ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು, ಯುದ್ಧಕ್ಕೆ ನಿಂತಿದ್ದಾರೆ. ಆದರೆ ಇದಕ್ಕೆ ವಿರುದ್ಧವಾಗಿ ಮತ್ತೊಂದು ತಂತ್ರ ರೂಪಿಸಲು ಮಧ್ಯಪ್ರದೇಶ ಬಿಜೆಪಿ ಕೂಡ ಇದೀಗ ಮುಂದಾಗಿದೆ. ಹೀಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಚುನಾವಣೆಯಲ್ಲಿ ಭರ್ಜರಿ ಫೈಟ್ ನಡೆಯುವ ನಿರೀಕ್ಷೆ ಇದೆ. ಈ ಮೂಲಕ ಪೋಸ್ಟರ್ ವಾರ್ ಕೂಡ ಬಲು ಜೋರಾಗುತ್ತಿದೆ.
#WATCH | Bhopal: Former Madhya Pradesh CM and Congress leader Kamal Nath and party workers show posters alleging 50% commission corruption charge against Madhya Pradesh govt pic.twitter.com/sGX5tEbX9C
— ANI MP/CG/Rajasthan (@ANI_MP_CG_RJ) August 18, 2023
ಶಿವರಾಜ್ ಸಿಂಗ್ ವಿರುದ್ಧ ಆರೋಪ
ಇಂದು ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ನೇತೃತ್ವದಲ್ಲಿ 50% ಕಮಿಷನ್ ಆರೋಪದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಹೀಗೆ ಪೋಸ್ಟರ್ ರಿಲೀಸ್ ಮಾಡಿ ಮಾತನಾಡಿದ ಕಮಲ್ ನಾಥ್, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯದಲ್ಲಿ ರೈತರು, ಯುವಕರು, ಉದ್ಯಮಿಗಳು ಸೇರಿದಂತೆ ಎಲ್ಲರನ್ನೂ ವಂಚಿಸಿದ್ದಾರೆಂದು ಆರೋಪ ಮಾಡಿದ್ದಾರೆ. ಅಲ್ಲದೆ ಭ್ರಷ್ಟಾಚಾರಕ್ಕೆ ಬಲಿಯಾಗದ ಅಥವಾ ಭ್ರಷ್ಟಾಚಾರಕ್ಕೆ ಸಾಕ್ಷಿ ಆಗದ ಒಬ್ಬ ವ್ಯಕ್ತಿಯೂ ರಾಜ್ಯದಲ್ಲಿ ಇಲ್ಲ ಎಂದಿದ್ದಾರೆ. ಕಮಲ್ ನಾಥ್‌ಗೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರು ಮುನಿಸುವ ಮರೆತು ಸಾಥ್ ನೀಡುತ್ತಿದ್ದಾರೆ.

ಕರ್ನಾಟಕದ ಚುನಾವಣೆ ಮಾದರಿ!
ಮಧ್ಯಪ್ರದೇಶ ಬಹುದೊಡ್ಡ ರಾಜ್ಯವಾಗಿದ್ದು, ಈ ಬಾರಿ ಕಾಂಗ್ರೆಸ್ ಪರ ಅಲೆ ಇರುವುದು ಸಮೀಕ್ಷೆಗಳ ಮೂಲಕ ಗೊತ್ತಾಗುತ್ತಿದೆ. ಹೀಗಾಗಿ ಮಧ್ಯಪ್ರದೇಶದಲ್ಲಿ ಗೆಲ್ಲುವ ಪ್ರತಿಯೊಂದು ಅವಕಾಶವನ್ನೂ ಉಪಯೋಗಿಸಿಕೊಳ್ಳುತ್ತಿದೆ ಕಾಂಗ್ರೆಸ್. ಈ ಹಿನ್ನೆಲೆ ಕರ್ನಾಟಕ ಚುನಾವಣೆ ವೇಳೆ ಬಳಸಿದ್ದ ಸ್ಟ್ರಾಟಜಿ ಬಳಕೆಯಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಲಾಗಿತ್ತು. ಇದೀಗ ಹತ್ತು ಪರ್ಸೆಂಟ್ ಏರಿಕೆ ಮಾಡಿರುವ ಕಾಂಗ್ರೆಸ್ ನಾಯಕರು, ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ.
VIDEO | "Madhya Pradesh CM Shivraj Singh Chouhan has cheated farmers, youth, businessmen, and others in the state. There won't be a single person in the state who would not have been either a victim of corruption or have witnessed corruption happening around him," says state… pic.twitter.com/4wURDb88R9
— Press Trust of India (@PTI_News) August 18, 2023
ಬಿಜೆಪಿ ನಾಯಕರಿಂದ ಭರ್ಜರಿ ಪ್ರಚಾರ
ಅತ್ತ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ನಡುವೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಮಧ್ಯಪ್ರದೇಶಕ್ಕೆ ಬಿಜೆಪಿ ಪಕ್ಷದ ಕೇಂದ್ರ ನಾಯಕರು ಬರುತ್ತಿದ್ದು, ಕಾಂಗ್ರೆಸ್ ವಿರುದ್ಧ ಭರ್ಜರಿ ವಾಗ್ದಾಳಿ ನಡೆಸುತ್ತಿದ್ದಾರೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದೊಡ್ಡ ವಾಗ್ಯುದ್ಧ ನಡೆಯುತ್ತಿದ್ದು, ಮತದಾರರ ಮನ ಒಲಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಶುರುವಾಗಿದೆ. ಆದ್ರೆ ಮತದಾರ ಯಾರ ಪರ ನಿಲ್ಲುತ್ತಾನೆ? ಇಲ್ಲ ಇಬ್ಬರ ನಡುವೆ ಮೂರನೇ ವ್ಯಕ್ತಿಗೆ ಇಲ್ಲಿ ಲಾಭವಾಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications