Madhya Pradesh: ಬೈಕ್‌ಗೆ ದಿಗ್ವಿಜಯ ಸಿಂಗ್ ಕಾರು ಡಿಕ್ಕಿ: ಸವಾರ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಕಾರು ರಾಜ್ಯದ ರಾಜ್‌ಗಢ ಜಿಲ್ಲೆಯಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಸುದ್ದಿ ವರದಿಯಾಗಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಸಾಗುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಭಾರೀ ಅಪಘಾತ ಸಂಭವಿಸಿರುವುದು ಬೆಳಕಿಗೆ ಬಂದಿದೆ. ದಿಗ್ವಿಜಯ ಸಿಂಗ್ ಅವರ ಕಾರು ಗುರುವಾರ ರಾಜ್ಯದ ರಾಜ್‌ಗಢ ಜಿಲ್ಲೆಯಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದ ಕೂಡಲೇ ವಾಹನ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾನೆ.
ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಬಬ್ಲು (28) ಎಂದು ಗುರುತಿಸಲಾಗಿದ್ದು, ಡಿಕ್ಕಿಯ ರಭಸಕ್ಕೆ ಗಾಳಿಯಲ್ಲಿ ಹಾರಿ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ದಿಗ್ವಿಜಯ ಸಿಂಗ್ ತಮ್ಮ ಕಾರಿನಿಂದ ಕೆಳಗಿಳಿದು ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೈಕ್ ಚಾಲಕನ ತಲೆಗೆ ತೀವ್ರ ಗಾಯಗಳಾಗಿವೆ.

ಅಪಘಾತ ಸಂಭವಿಸಿದ ಜಿರಾಪುರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ, ವ್ಯಕ್ತಿಯನ್ನು ಭೋಪಾಲ್‌ಗೆ ಕಳುಹಿಸಲಾಯಿತು. ಅಪಘಾತದ ಸಿಸಿಟಿವಿ ಫೂಟೇಜ್ ಬೈಕ್ ಹಠಾತ್ ತಿರುವು ನೀಡುವುದನ್ನು ತೋರಿಸಿದೆ. ಅಪಘಾತವನ್ನು ತಡೆಯಲು ದಿಗ್ವಿಜಯ ಸಿಂಗ್ ಅವರ ಕಾರನ್ನು ಸಮಯಕ್ಕೆ ನಿಲ್ಲಿಸಲು ಸಾಧ್ಯವಾಗಲಿಲ್ಲ.
ಈ ಬಗ್ಗೆ ಮಾತನಾಡಿದ ದಿಗ್ವಿಜಯ ಸಿಂಗ್, ನಾನು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇನೆ ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ದಿಗ್ವಿಜಯ ಸಿಂಗ್ ಅವರ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಾರನ್ನು ವಶಪಡಿಸಿಕೊಂಡ ನಂತರ ಕಾಂಗ್ರೆಸ್ ನಾಯಕ ಬಿಯೋರಾ ಶಾಸಕರ ಕಾರಿನಲ್ಲಿ ಹೊರಟರು.












Click it and Unblock the Notifications