ಅತ್ಯಾಚಾರಿಗೆ ಗಲ್ಲುಶಿಕ್ಷೆ ವಿಧಿಸಿದ ಇಂದೋರ್ ನ್ಯಾಯಾಲಯ
ಇಂದೋರ್, ಮೇ 12: ನಾಲ್ಕು ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಗೆ ಇಂದೋರ್ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ಮಧ್ಯಪ್ರದೇಶದ ರಾಜ್ವಾರದಲ್ಲಿ ನಾಲ್ಕು ತಿಂಗಳ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಲ್ಲದೆ, ಮಗುವನ್ನು ಕೊಲೆ ಮಾಡಿದ್ದ. ಈ ಕುರಿತು ವಿಚಾರಣೆ ನಡೆಸಿದ ಮಧ್ಯಪ್ರದೇಶದ ಇಂದೋರ್ ಜಿಲ್ಲಾ ನ್ಯಾಯಾಲಯ ಆರೋಪಿಗೆ ಮರಣದಂಡನೆ ವಿಧಿಸಿ, ಐತಿಹಾಸಿಕ ತೀರ್ಪು ನೀಡಿದೆ.

ಈಗಾಗಲೇ ಪೋಕ್ಸೋ((Protection of Children from Sexual Offences Act) ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲುಶಿಕ್ಷೆ ನೀಡುವ ಕಾನೂನನ್ನು ಜಾರಿಗೆ ತರುತ್ತಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.












Click it and Unblock the Notifications