Madhya Pradesh; ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸಿದ ಕಾಂಗ್ರೆಸ್
ಭೋಪಾಲ್, ಡಿಸೆಂಬರ್ 17; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದಿದೆ. ಮೋಹನ್ ಯಾದವ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮತ್ತೊಂದು ಕಡೆ ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್‌ನಲ್ಲಿಯೂ ಮಹತ್ವದ ಬದಲಾವಣೆಯಾಗಿದೆ.
ನವೆಂಬರ್ 17ರಂದು ಒಂದೇ ಹಂತದಲ್ಲಿ ಮಧ್ಯಪ್ರದೇಶ ರಾಜ್ಯದ 230 ಸದಸ್ಯ ಬಲದ ವಿಧಾನಸಭೆಗೆ ಮತದಾನ ನಡೆದಿತ್ತು. ಡಿಸೆಂಬರ್ 3ರಂದು ಮತ ಎಣಿಕೆ ನಡೆದಿತ್ತು. 163 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮರಳಿ ಅಧಿಕಾರ ಪಡೆದಿತ್ತು. ಕಾಂಗ್ರೆಸ್ 66 ಕ್ಷೇತ್ರದಲ್ಲಿ ಗೆಲುವು ಕಂಡಿತ್ತು.

ರಾಜ್ಯದ ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ. ಜಿತು ಪಟ್ವಾರಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯದ ಕಾಂಗ್ರೆಸ್ ಅಧ್ಯಕ್ಷರು ಬದಲಾವಣೆಯಾಗಲಿದ್ದಾರೆ ಎಂಬ ಸುದ್ದಿ ನಿಜವಾಗಿದೆ.
ಕಮಲ್ ನಾಥ್ ವಿರುದ್ಧ ಆಕ್ರೋಶ; ಮಾಜಿ ಮಖ್ಯಮಂತ್ರಿ ಕಮಲ್ ನಾಥ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಾಗಿದ್ದರು. ಅವರ ನೇತೃತ್ವದಲ್ಲಿಯೇ ಪಕ್ಷ ಚುನಾವಣೆ ಎದುರಿಸಿತ್ತು. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಅವರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು, ಆದರೆ ಪಕ್ಷ ಈ ಸುದ್ದಿಗಳನ್ನು ನಿರಾಕರಿಸಿತ್ತು.
ಶನಿವಾರ ಕಮಲ್ ನಾಥ್ ಅವರ ಸ್ಥಾನಕ್ಕೆ ಹಿಂದುಳಿದ ವರ್ಗಗಳ ನಾಯಕರಾದ ಜಿತು ಪಟ್ವಾರಿ ನೇಮಕ ಮಾಡಲಾಗಿದೆ. ಪಟ್ವಾರಿ 2023ರ ಚುನಾವಣೆಯಲ್ಲಿ ರಾವು ವಿಧಾನಸಭಾ ಕ್ಷೇತ್ರದಲ್ಲಿ 35 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು.
ಆದರೆ ಮಧ್ಯಪ್ರದೇಶ ರಾಜ್ಯದಲ್ಲಿ ಶೇ 50ರಷ್ಟು ಹಿಂದುಳಿದ ವರ್ಗಗಳ ನಾಯಕರು ಇದ್ದಾರೆ. 2024ರಲ್ಲಿ ಲೋಕಸಭೆ ಚುನಾವಣೆ ಎದುರಾಗುವುದರಿಂದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನು ಬದಲಾವಣೆ ಮಾಡುವ ಮೂಲಕ ಕಾಂಗ್ರೆಸ್ ಹೊಸ ತಂತ್ರ ಪ್ರಯೋಗ ಮಾಡಿದೆ.
77 ವರ್ಷದ ಕಮಲ್ ನಾಥ್ ಬದಲು ಯುವ ನಾಯಕ 50 ವರ್ಷದ ಜಿತು ಪಟ್ವಾರಿರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಾಗಿ ನೇಮಕ ಮಾಡಿದೆ. ಈ ಮೂಲಕ ಕಮಲ್ ನಾಥ್ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕೇಂದ್ರ ಸಚಿವರಾಗಿ, 9 ಬಾರಿ ಸಂಸದರಾಗಿ, 5 ವರ್ಷಕ್ಕೂ ಹೆಚ್ಚಿ ಕಾಲ ಮಧ್ಯಪ್ರದೇಶ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಕಮಲ್ ನಾಥ್ 15 ತಿಂಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳಲ್ಲಿ ಜಯಗಳಿಸಿತ್ತು. ಎಸ್‌ಪಿ, ಬಿಎಸ್‌ಪಿ ನೆರವಿನಿಂದ ಸರ್ಕಾರವನ್ನು ಕಾಂಗ್ರೆಸ್ ರಚಿಸಿತು. ಆಗ ಕಮಲ್ ನಾಥ್ ಮುಖ್ಯಮಂತ್ರಿಯಾದರು.
2020ರಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದರು. ಆಗ 20ಕ್ಕೂ ಹೆಚ್ಚು ಶಾಸಕರು ಅವರ ಜೊತೆ ಪಕ್ಷ ತೊರೆದರು. ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತು. ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದರು. ಆದರೆ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆದ್ದಿದ್ದರು.
ಡಿಸೆಂಬರ್ 3ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗಿತ್ತು. ಡಿಸೆಂಬರ್ 5ರಂದು ಮಾಜಿ ಮಖ್ಯಮಂತ್ರಿ ಕಮಲ್ ನಾಥ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದರು. ಆಗಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿತ್ತು. ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯಲಿವೆ ಎಂದು ಹೇಳಿತ್ತು. ಆದರೆ ಲೆಕ್ಕಾಚಾರ ಉಲ್ಟಾ ಆಗಿತ್ತು. ಆದ್ದರಿಂದ ಕಾಂಗ್ರೆಸ್ನ ನಾಯಕರು ಕಮಲ್ ನಾಥ್ ನಾಯಕತ್ವದ ವಿರುದ್ಧವೇ ಟೀಕೆಗಳನ್ನು ಮಾಡಿದ್ದರು.
ಚುನಾವಣೆಯಲ್ಲಿ ಪಕ್ಷ ಸೋಲು ಕಂಡರೂ ಸಹ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಚಿಂದ್ವಾರಾ ಕ್ಷೇತ್ರದಲ್ಲಿ ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಕಮಲ್‌ನಾಥ್ 1,32,302 ಮತಗಳನ್ನು ಪಡೆದು 36,594 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ವಿವೇಕ್ ಬಂಟಿ ಶಾಹೂ 95,708 ಮತಗಳನ್ನು ಪಡೆದಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications