Madhya Pradesh; ಮಧ್ಯಪ್ರದೇಶದಲ್ಲಿ ಮೊದಲ ಜಯ ದಾಖಲಿಸಿದ ಬಿಎಪಿ!
ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಸ್ಪಷ್ಟ ಬಹುಮತ ಪಡೆದು ರಾಜ್ಯದಲ್ಲಿ 5ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ. ರಾಜ್ಯದಲ್ಲಿ ಬಿಎಪಿ ಪಕ್ಷ ಮೊದಲ ಬಾರಿಗೆ ಗೆಲ್ಲುವ ಮೂಲಕ ಖಾತೆ ತೆರೆದಿದೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ನಡೆಯುತ್ತಿದೆ. ನವೆಂಬರ್ 17ರಂದು ರಾಜ್ಯದಲ್ಲಿ ಮತದಾನ ನಡೆದಿತ್ತು. ಸರ್ಕಾರ ರಚನೆ ಮಾಡಲು ರಾಜ್ಯದಲ್ಲಿ ಪಡೆಯಬೇಕಾದ ಬೇಕಾದ ಮ್ಯಾಜಿಕ್ ನಂಬರ್ 116.

ಚುನಾವಣಾ ಆಯೋಗದ 5 ಗಂಟೆಯ ಮಾಹಿತಿಯಂತೆ ಬಿಜೆಪಿ 164 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ 65 ಮತ್ತು ಇತರ ಅಭ್ಯರ್ಥಿಗಳು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಸರ್ಕಾರ ರಚನೆ ಮಾಡುವುದು ಖಚಿತವಾಗಿದ್ದು, ಮುಖ್ಯಮಂತ್ರಿ ಯಾರು? ಎಂಬುದು ಕುತೂಹಲ.
ಮೊದಲ ಜಯ ದಾಖಲಿಸಿದ ಬಿಎಪಿ; ಭಾರತೀಯ ಆದಿವಾಸಿ ಪಕ್ಷ (ಬಿಎಪಿ) ರತ್ಲಮ್ ಜಿಲ್ಲೆಯ ಸೈಲಾನಾ ಕ್ಷೇತ್ರದಲ್ಲಿ ಜಯಗಳಿಸಿವು ಮೂಲಕ ರಾಜ್ಯದಲ್ಲಿ ಗೆಲುವಿನ ಖಾತೆ ತೆರೆದಿದೆ. ಕಮಲೇಶ್ವರ್ ದೊಡಿಯಾರ್ 71,219 ಮತಗಳನ್ನು ಪಡೆಯುವ ಮೂಲಕ 4,618 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹರ್ಷ ವಿಜಯ್ ಗೆಹ್ಲೋಟ್ 66,601, ಬಿಜೆಪಿಯ ಸಂಗೀತಾ ವಿಜಯ್ 41,584 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯ ಕಛೇರಿ ಹೊಂದಿರುವ ಬಿಎಪಿ ಪಕ್ಷ ಮೊದಲ ಬಾರಿಗೆ ಮಧ್ಯಪ್ರದೇಶದ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ.
ಭಾನುವಾರ ಬೆಳಗ್ಗೆ 8 ಗಂಟೆಗೆ ಮಧ್ಯಪ್ರದೇಶದಲ್ಲಿ ಮತ ಎಣಿಕೆ ಆರಂಭವಾಯಿತು. ಅಂಚೆ ಮತಗಳ ಎಣಿಕೆಯಲ್ಲಿ ಮೊದಲು 7 ಕ್ಷೇತ್ರಗಳಲ್ಲಿ ಕಾಂಗ್ರೆಸ್, 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ಬಳಿಕ ಫಲಿತಾಂಶದ ಚಿತ್ರಣ ಬದಲಾಗುತ್ತಾ ಹೋಯಿತು.
ಬಿಜೆಪಿ ನಾಯಕ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ 1,64,951 ಮತಗಳನ್ನು ಪಡೆದು 104974 ಮತಗಳ ಅಂತರದಿಂದ ಕಾಂಗ್ರೆಸ್‌ನ ವಿಕ್ರಂ ಮಸ್ತಲ್ (59,977) ಶರ್ಮಾ ಸೋಲಿಸಿದ್ದಾರೆ.
ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ 1,23,728 ಮತಗಳನ್ನು ಪಡೆದು 31,610 ಮತಗಳ ಅಂತರದಲ್ಲಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ವಿರುದ್ಧ ಮುನ್ನಡೆಯನ್ನು ಪಡೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿವೆ. ಬಿಜೆಪಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆಯುವುದರಿಂದ ಭಾರತೀಯ ಆದಿವಾಸಿ ಪಕ್ಷದ ಶಾಸಕರ ಬೆಂಬಲ ಸರ್ಕಾರಕ್ಕೆ ಅಗತ್ಯವಿಲ್ಲ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದ ಅನುಷ್ಕಾ-ಅನನ್ಯಾ ಬಿರ್ಲಾ: ನೆಟ್ಟಿಗರ ಮನಗೆದ್ದ ಆ ಹ್ಯಾಂಡ್ಶೇಕ್ ವಿಡಿಯೋ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಏಪ್ರಿಲ್ 13ರ ದರಪಟ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
AI Wife: ಇಹಲೋಕ ಬಿಟ್ಟು ಡಿಜಿಟಲ್ ಲೋಕಕ್ಕೆ ಬಾ, ನನ್ನ ಸೇರು: ಎಐ ಪತ್ನಿಯ ಪ್ರೇಮಪಾಶಕ್ಕೆ ಸಿಲುಕಿ ಅಮೆರಿಕ ವ್ಯಕ್ತಿ ಆತ್ಮಹತ್ಯೆ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications