Madhya Pradesh; ಮ್ಯಾಜಿಕ್ ನಂಬರ್ ಮುನ್ನಡೆ ದಾಟಿದ ಬಿಜೆಪಿ

ಭೋಪಾಲ್, ಡಿಸೆಂಬರ್ 03; ಮಧ್ಯಪ್ರದೇಶ ರಾಜ್ಯದ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ ಆಡಳಿತ ಪಕ್ಷ ಬಿಜೆಪಿ 120 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ದಾಟಿದೆ.

ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಸದ್ಯದ ಮಾಹಿತಿಯಂತೆ ಬಿಜೆಪಿ 120, ಕಾಂಗ್ರೆಸ್ 100 ಮತ್ತು ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Madhya Pradesh Election Results 2023 BJP Crosses Majority Mark In Lead

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಬುಧ್ನಿ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಮೊದಲು ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ ಸಹ ಒಂದು. ಆದ್ದರಿಂದ ಚುನಾವಣೆಯ ಫಲಿತಾಂಶ ಕುತೂಹಲ ಮೂಡಿಸಿದೆ.

ಭಾನುವಾರ ಬೆಳಗ್ಗೆ ಅಂಚೆ ಮತಗಳ ಎಣಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಮುಂದಿತ್ತು. ಆದರೆ ಇವಿಎಂ ಯಂತ್ರಗಳ ಮತ ಎಣಿಕೆ ಆರಂಭವಾದಾಗ ಬಿಜೆಪಿ ಸ್ಪಷ್ಟವಾ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು.

ರಾಜ್ಯದಲ್ಲಿ ಸದ್ಯ ಅಧಿಕಾರದಲ್ಲಿರುವ ಪಕ್ಷ ಬಿಜೆಪಿ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ವಿರುದ್ಧ ಬುಧ್ನಿಯಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರದ ಮಾಜಿ ಸಚಿವ ಮತ್ತು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಅರುಣ್ ಯಾದವ್ ಕಣಕ್ಕಿಳಿಸಿದೆ. ಆದರೆ ಚೌವ್ಹಾಣ್ ಮುನ್ನಡೆ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ 2018ರ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. 114 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿದ್ದ ಕಾಂಗ್ರೆಸ್, ಎಸ್ಪಿ, ಬಿಎಸ್ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತು. ಕಮಲ್‌ನಾಥ್ ಮುಖ್ಯಮಂತ್ರಿಯಾದರು. ಆದರೆ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗ ಸರ್ಕಾರ ಪತನಗೊಂಡಿತು.

ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಹೇಳುವ ಮೂಲಕ ಚುನಾವಣೆ ಎದುರಿಸಿತು.

ರಾಜ್ಯದಲ್ಲಿ ಕಾಂಗ್ರೆಸ್ ಹಿನ್ನಡೆ ಕಾಣುವುದು ಮಾತ್ರವಲ್ಲ. ಚಿಂದ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಮಲ್‌ನಾಥ್ ಸಹ ಹಿನ್ನಡೆ ಅನುಭವಿಸಿದ್ದಾರೆ. ಎದುರಾಳಿ ಬಿಜೆಪಿಯ ವಿವೇಕ್ ಬಂಟಿ ಶಾಹೂ ಮುನ್ನಡೆ ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+